ETV Bharat / state

ಎಚ್​ಎಸ್​ಆರ್​ಪಿ ನಂಬರ್​ ಪ್ಲೇಟ್ ಅಳವಡಿಕೆಗೆ ಡಿಸಂಬರ್​ 5ರವರೆಗೂ ಗಡುವು ವಿಸ್ತರಿಸಿದ ಹೈಕೋರ್ಟ್ - HIGH COURT EXTENDS DEADLINE HSRP

ರಾಜ್ಯ ಸರ್ಕಾರದ ಪರವಾಗಿ ಹಾಜರಾಗಿದ್ದ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ, ಏಕಸದಸ್ಯ ಪೀಠದ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಕೆ ಮಾಡಲಾಗಿದೆ ಎಂದು ಪೀಠದ ಗಮನಕ್ಕೆ ತಂದರು.

High Court extends deadline for adoption of HSRP number plates till December 5
ಎಚ್​ಎಸ್​ಆರ್​ಪಿ ನಂಬರ್​ ಪ್ಲೇಟ್ ಅಳವಡಿಕೆಗೆ ಡಿಸಂಬರ್​ 5ರವರೆಗೂ ಗಡುವು ವಿಸ್ತರಿಸಿದ ಹೈಕೋರ್ಟ್ (ETV Bharat)
author img

By ETV Bharat Karnataka Team

Published : Nov 20, 2024, 6:52 PM IST

ಬೆಂಗಳೂರು: ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು (ಎಚ್‌ಎಸ್‌ಆರ್‌ಪಿ) ಕಡ್ಡಾಯ ಅಳವಡಿಕೆಗಿದ್ದ ಗಡುವನ್ನು ಹೈಕೋರ್ಟ್ ಡಿಸೆಂಬರ್​ 5ರ ವರೆಗೂ ವಿಸ್ತರಣೆ ಮಾಡಿದೆ. ನಿರ್ದಿಷ್ಟ ಉತ್ಪಾದಕರು ಮಾತ್ರ ಪೂರೈಸಬೇಕು ಮತ್ತು ನಿರ್ದಿಷ್ಟ ಡೀಲರ್‌ಗಳು ಮಾತ್ರ ಅಳವಡಿಸಬೇಕು ಎಂಬ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಕೆ ಕಾಮೇಶ್ವರ ರಾವ್ ಮತ್ತು ಕೆ ರಾಜೇಶ್‌ ರೈ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.

ಮುಂದಿನ ವಾರ ಯಾವುದೇ ದಿನ ವಿಚಾರಣೆ: ವಿಚಾರಣೆ ವೇಎ ಮೇಲ್ಮನವಿ ಅರ್ಜಿದಾರರ ಪರ ವಾದಿಸಿದ ಹಿರಿಯ ವಕೀಲರು, ಹಲವು ಅರ್ಜಿಗಳನ್ನು ಸಲ್ಲಿಕೆ ಮಾಡಿರುವುದರಿಂದ ಪೀಠಕ್ಕೆ ಅನುಕೂಲವಾಗುವ ರೀತಿಯಲ್ಲಿ ಸಮಗ್ರವಾದ ವರದಿ ನೀಡಲಾಗುವುದು. ಮುಂದಿನ ವಾರ ಯಾವುದೇ ದಿನ ವಿಚಾರಣೆ ನಡೆಸಬಹುದು ಎಂದು ಪೀಠಕ್ಕೆ ಮನವಿ ಮಾಡಿದರು.

ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ: ರಾಜ್ಯ ಸರ್ಕಾರದ ಪರವಾಗಿ ಹಾಜರಾಗಿದ್ದ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ, ಏಕಸದಸ್ಯ ಪೀಠದ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಕೆ ಮಾಡಲಾಗಿದೆ. ಈಗಾಗಲೇ ಚಾಲ್ತಿಯಲ್ಲಿರುವ ಮಧ್ಯಂತರ ಆದೇಶ ಮುಂದುವರಿಯಲಿ. ಅದರ ಜೊತೆಗೆ ಏಕಸದಸ್ಯ ಪೀಠವು ಪ್ರಕರಣ ನಿರ್ಧರಿಸಿ ಆದೇಶಿಸಬಹುದು ಎಂದು ತಿಳಿಸಿದರು.

ಡಿಸೆಂಬರ್​​ 4ಕ್ಕೆ ವಿಚಾರಣೆ ಮುಂದೂಡಿಕೆ: ಇದಕ್ಕೆ ಸಮ್ಮತಿಸಿದ್ದ ಪೀಠವು ಮಧ್ಯಂತರ ಆದೇಶ ವಿಸ್ತರಿಸಿ, ವಿಚಾರಣೆಯನ್ನು ಡಿಸೆಂಬರ್‌ 4ಕ್ಕೆ ವಿಚಾರಣೆ ಮುಂದೂಡಿತು.

ಪ್ರಕರಣ: ವಾಹನ ತಯಾರಿಸುವ ಮೂಲ ಸಾಧನಗಳ ಉತ್ಪಾದಕರು ಅನುಮತಿಸಿರುವ ಪರವಾನಗಿ ಹೊಂದಿರುವ ಅತಿಸುರಕ್ಷಿತ ನೋಂದಣಿ ಫಲಕ ಉತ್ಪಾದಕರು ಮಾತ್ರ ಎಚ್‌ಎಸ್‌ಆರ್‌ ಫಲಕಗಳನ್ನು ಹಳೆಯ ವಾಹನಗಳಿಗೆ ಪೂರೈಸಬೇಕು. ಈ ಫಲಕಗಳನ್ನು ವಾಹನ ಉತ್ಪಾದಕರು ಅನುಮತಿಸಿರುವ ಡೀಲರ್‌ಗಳು ಮಾತ್ರ ಅಳವಡಿಸಬೇಕು. ಹಳೆಯ ವಾಹನಗಳ ಮಾಲೀಕರು ಅಧಿಸೂಚನೆ ಹೊರಡಿಸಿರುವ ಮೂರು ತಿಂಗಳ ಒಳಗಾಗಿ ಎಚ್‌ಎಸ್‌ಆರ್‌ ಫಲಕ ಅಳವಡಿಸಬೇಕು ಎಂದು ರಾಜ್ಯ ಸರ್ಕಾರ 2023ರ ಆಗಸ್ಟ್​ 17ರಂದು ಸಾರಿಗೆ ಇಲಾಖೆ ಹೊರಡಿಸಿತ್ತು.

ಈ ಆದೇಶಕ್ಕೆ ತಡೆಯಾಜ್ಞೆ ವಿಧಿಸಲು ನಿರಾಕರಿಸಿದ್ದ ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಹಲವು ಎಚ್​ಎಸ್​ಆರ್​ಪಿ ಪ್ಲೇಟ್​ಗಳ ತಯಾರಿಕಾ ಸಂಸ್ಥೆಗಳು ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.

ಇದನ್ನು ಓದಿ: ರಾಜಧಾನಿಯ ಕೆರೆಗಳ ಪುನರುಜ್ಜೀವನ ಹೆಸರಿನಲ್ಲಿ ಒತ್ತುವರಿಗೆ ಅವಕಾಶ ನೀಡಲಾಗದು; ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.