ETV Bharat / state

ಲೋಕಾಯುಕ್ತ ಅವ್ಯವಹಾರ ಆರೋಪ: ತೀರ್ಪು ಪ್ರಕಟಿಸದಂತೆ ಹೈಕೋರ್ಟ್ ಮಧ್ಯಂತರ ಆದೇಶ ವಿಸ್ತರಣೆ - Lokayukta Case - LOKAYUKTA CASE

ಲೋಕಾಯುಕ್ತ ಸಂಸ್ಥೆಯಲ್ಲಿ ಅವ್ಯವಹಾರ ಆರೋಪ ಪ್ರಕರಣ ಸಂಬಂಧ ತೀರ್ಪು ಪ್ರಕಟಿಸಬಾರದೆಂಬ ಹೈಕೋರ್ಟ್​ ಮಧ್ಯಂತರ ಆದೇಶವು ವಿಸ್ತರಣೆಯಾಗಿದೆ.

high court
ಹೈಕೋರ್ಟ್ (ETV Bharat)
author img

By ETV Bharat Karnataka Team

Published : Aug 5, 2024, 10:58 PM IST

ಬೆಂಗಳೂರು: ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್ ರಾವ್ ಅವರ ಅವಧಿಯಲ್ಲಿ ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿರುವ ಭ್ರಷ್ಟಾಚಾರ ಆರೋಪ ಪ್ರಕರಣ ಸಂಬಂಧ ತೀರ್ಪು ಪ್ರಕಟಿಸಬಾರದು ಎಂದು ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶಿಸಿ, ಈ ಹಿಂದೆ ಹೊರಡಿಸಿದ್ದ ಮಧ್ಯಂತರ ಆದೇಶವನ್ನು ಹೈಕೋರ್ಟ್ ಸೆಪ್ಟೆಂಬರ್ 11ರವರೆಗೆ ವಿಸ್ತರಿಸಿದೆ.

ಪ್ರಕರಣ ಸಂಬಂಧ ತಮ್ಮ ವಿರುದ್ಧ ಎಸ್‌ಐಟಿ ತನಿಖಾಧಿಕಾರಿಗಳು ಸಲ್ಲಿಸಿರುವ ದೋಷಾರೋಪ ಪಟ್ಟಿ ಮತ್ತು ವಿಚಾರಣಾ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆ ರದ್ದುಪಡಿಸಬೇಕು ಎಂದು ಕೋರಿ ಆರೋಪಿಯಾಗಿರುವ ಅಶೋಕ್ ಕುಮಾರ್ ಎಂಬವರು ತಕರಾರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ''ಪ್ರಕರಣದಲ್ಲಿ ಎಸ್‌ಐಟಿಯಿಂದ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ. ಇದೇ ಪ್ರಕರಣ ಇತರೆ ಆರೋಪಿಗಳು ಸಲ್ಲಿಸಿರುವ ಅರ್ಜಿಗಳ ಸಂಬಂಧ ವಿಚಾರಣಾ ನ್ಯಾಯಾಲಯವು ತನ್ನ ತೀರ್ಪು ಪ್ರಕಟಿಸದಂತೆ ಹೈಕೋರ್ಟ್‌ನ ಮತ್ತೊಂದು ನ್ಯಾಯಪೀಠ ಮಧ್ಯಂತರ ಆದೇಶ ಮಾಡಿದೆ'' ಎಂದು ನ್ಯಾಯಪೀಠದ ಗಮನಕ್ಕೆ ತಂದರು.

ಅದನ್ನು ಪರಿಗಣಿಸಿದ ನ್ಯಾಯಪೀಠ, ಅಶೋಕ್ ಕುಮಾರ್ ಅವರ ಅರ್ಜಿಯನ್ನು ಪ್ರಕರಣದ ಇತರೆ ಆರೋಪಿಗಳು ಸಲ್ಲಿಸಿರುವ ಅರ್ಜಿಯೊಂದಿಗೆ ವಿಚಾರಣೆಗೆ ನಿಗದಿಪಡಿಸಬೇಕು ಎಂದು ರಿಜಿಸ್ಟ್ರಾರ್‌ಗೆ ಸೂಚಿಸಿ ವಿಚಾರಣೆಯನ್ನು ಸೆಪ್ಟಂಬರ್ 11ಕ್ಕೆ ಮುಂದೂಡಿತು. ಅಲ್ಲಿಯವರೆಗೆ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣಾ ನ್ಯಾಯಾಲಯವು ತೀರ್ಪು ಪ್ರಕಟಿಸದಂತೆ ಹೈಕೋರ್ಟ್​ನ ಮತ್ತೊಂದು ನ್ಯಾಯಪೀಠ ನೀಡಿರುವ ಆದೇಶವನ್ನು ವಿಸ್ತರಿಸಿತು.

ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಪ್ರಕರಣ: ಆರೋಪಿಗಳಿಗೆ ಜಾಮೀನು ನೀಡದಂತೆ ಸರ್ಕಾರದ ವಾದ - Prajwal Revanna

ETV Bharat Logo

Copyright © 2025 Ushodaya Enterprises Pvt. Ltd., All Rights Reserved.