ETV Bharat / state

ಅಕ್ರಮ ಫ್ಲೆಕ್ಸ್, ಬ್ಯಾನರ್ : ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಹೈಕೋರ್ಟ್ - Illegal Flex Banner - ILLEGAL FLEX BANNER

ಬೆಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್​, ಬ್ಯಾನರ್ ಅಳವಡಿಸಿರುವ ಕುರಿತಂತೆ ಮಾಧ್ಯಮಗಳ ವರದಿ ಆಧರಿಸಿ ಹೈಕೋರ್ಟ್​ ಸ್ವಯಂ ಪ್ರೇರಿತ ಸಾರ್ವಜನಿಕ ಅರ್ಜಿ ದಾಖಲಿಸಿಕೊಂಡಿದೆ.

high-court
ಹೈಕೋರ್ಟ್ (ETV Bharat)
author img

By ETV Bharat Karnataka Team

Published : Jul 12, 2024, 7:51 PM IST

ಬೆಂಗಳೂರು : ರಾಜಧಾನಿ ಬೆಂಗಳೂರು ನಗರದಲ್ಲಿ ಅಕ್ರಮವಾಗಿ ಫ್ಲೆಕ್ಸ್ ಮತ್ತು ಹೋರ್ಡಿಂಗ್ಸ್‌ಗಳನ್ನು ಅಳವಡಿಸಿರುವ ಕುರಿತಂತೆ ಮಾಧ್ಯಮಗಳ ವರದಿ ಆಧರಿಸಿ, ಹೈಕೋರ್ಟ್ ಸ್ವಯಂಪ್ರೇರಿತ ಸಾರ್ವಜನಿಕ ಅರ್ಜಿ ದಾಖಲಿಸಿಕೊಂಡಿದೆ. ಶುಕ್ರವಾರ ಬೆಳಗ್ಗೆ ವಿಚಾರಣೆ ಪ್ರಾರಂಭವಾಗುತ್ತಿದ್ದಂತೆ ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿ ಪ್ರಸ್ತಾಪಿಸಿದ ಮುಖ್ಯನ್ಯಾಯಮೂರ್ತಿ ಎನ್. ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ. ವಿ ಅರವಿಂದ ಅವರಿದ್ದ ನ್ಯಾಯಪೀಠ ಈ ಅರ್ಜಿ ದಾಖಲಿಸಿಕೊಂಡಿತು.

ಅಲ್ಲದೇ, ನ್ಯಾಯಾಂಗ ಆದೇಶಗಳನ್ನು ಉಲ್ಲಂಘಿಸಿದ ಪರಿಣಾಮ ನ್ಯಾಯಾಂಗ ನಿಂದನೆ ಕ್ರಮವನ್ನು ಏಕೆ ಪ್ರಾರಂಭಿಸಬಾರದು ಎಂಬುದಕ್ಕೆ ಜುಲೈ 26 ರ ಒಳಗಾಗಿ ಪ್ರತಿಕ್ರಿಯಿಸುವಂತೆ ಬಿಬಿಎಂಪಿ ಮತ್ತು ಪೊಲೀಸ್ ಆಯುಕ್ತರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿತು. ರಾಜ್ಯದಲ್ಲಿ 6.8 ಲಕ್ಷ ಅಕ್ರಮ ಜಾಹೀರಾತುಗಳನ್ನು ಅಳವಡಿಸಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಜತೆಗೆ, ಅಕ್ರಮ ಜಾಹೀರಾತುಗಳ ಅಳವಡಿಕೆ ಮುಂದುವರೆದಿದ್ದು, ಇದರಿಂದಾಗಿ ಪಾದಚಾರಿಗಳಿಗೆ ತೊಂದರೆಯಾಗುತ್ತಿದ್ದು, ವಾಹನ ದಟ್ಟಣೆಗೂ ಕಾರಣವಾಗುತ್ತಿದೆ.

ಹೈಕೋರ್ಟ್ ಆದೇಶವನ್ನು ಸರ್ಕಾರದ ಪ್ರಾಧಿಕಾರಗಳು ಪಾಲನೆ ಮಾಡದೇ ನಿರ್ಲಕ್ಷ್ಯವಹಿಸುತ್ತಿವೆ ಎಂದು ಫ್ಲೆಕ್ಸ್‌ಗಳ ಹಾವಳಿ ತಡೆಗಟ್ಟಲು ವಿಫಲವಾಗಿರುವ ಪೊಲೀಸ್ ಆಯುಕ್ತರ ಕ್ರಮಕ್ಕೆ ತೀವ್ರ ತರಾಟೆಗೆ ತೆಗೆದುಕೊಂಡಿತು.

ಈ ವೇಳೆ, ಸರ್ಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಪ್ರತಿಮಾ ಹೊನ್ನಾಪುರ, ರಾಜ್ಯ ಸರ್ಕಾರದ ಅನುಮೋದನೆಯೊಂದಿಗೆ ಜಾಹೀರಾತು ನಿಯಮ ರೂಪಿಸಲಾಗಿದೆ. ಈ ಸಂಬಂಧ ಬಿಬಿಎಂಪಿ ಕರಡು ಬೈಲಾ ಪ್ರಕಟಿಸಬೇಕಾಗಿದೆ ಎಂದು ಮಾಹಿತಿ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಪ್ರತಿಯೊಂದು ಅಕ್ರಮ ಜಾಹೀರಾತು ತಡೆಗೆ ವಿಫಲವಾದಲ್ಲಿ 1 ಲಕ್ಷ ರೂ. ಗಳ ದಂಡ ನೀಡಬೇಕು ಎಂದು ಹೈಕೋರ್ಟ್ ಆದೇಶವಿದೆ. ಆದರೂ ಕೋರ್ಟ್ ಆದೇಶ ಪಾಲಿಸಲು ಬಿಬಿಎಂಪಿ ನಿರ್ಲಕ್ಷ್ಯ ವಹಿಸುತ್ತಿದೆ. ಫ್ಲೆಕ್ಸ್ ಹಾವಳಿ ತಡೆಯುವುದಕ್ಕಾಗಿ ಸರ್ಕಾರದ ಪ್ರಾಧಿಕಾರಗಳು ಸದಾ ಸನ್ನದ್ಧರಾಗಿರಬೇಕು ಎಂದು ತಿಳಿಸಿ ವಿಚಾರಣೆಯನ್ನು ಮುಂದೂಡಿತು.

ಬಿಬಿಎಂಪಿ ಪರ ವಕೀಲರು, ಅಕ್ರಮವಾಗಿ ಜಾಹೀರಾತುಗಳ ಅಳವಡಿಸಿರುವ ಸಂಬಂಧ ಹಲವು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ವಿವರಿಸಿದರು. ಇದಕ್ಕೆ ಪೀಠ, ಬಿಬಿಎಂಪಿ ತನ್ನ ವೇಗವನ್ನು ಹೆಚ್ಚಳ ಮಾಡಬೇಕು ಎಂದು ತಿಳಿಸಿ ವಿಚಾರಣೆ ಮುಂದೂಡಿತು.

ಇದನ್ನೂ : ನಗರದಲ್ಲಿ ನಾಯಿಕೊಡೆಯಂತೆ ಎದ್ದೇಳುತ್ತಿರುವ ಜಾಹೀರಾತು : ಹೈಕೋರ್ಟ್ ಅಸಮಾಧಾನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.