ETV Bharat / state

ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆಗೆ ಎಸ್​ಐಟಿ ರಚಿಸಿದ ಹೈಕೋರ್ಟ್‌

ಜೀವಾ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿರುವ ಡಿವೈಎಸ್‌ಪಿ ಕನಕಲಕ್ಷ್ಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ, ಪ್ರಕರಣದ ತನಿಖೆಗೆ ಎಸ್​ಐಟಿ ರಚಿಸಿ ಮೂರು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ.

HIGH COURT NOTICE
ಹೈಕೋರ್ಟ್‌ (ETV Bharat)
author img

By ETV Bharat Karnataka Team

Published : 9 hours ago

ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮ ಬಹುಕೋಟಿ ಹಗರಣ ತನಿಖೆಯ ನೆಪದಲ್ಲಿ ಸಿಐಡಿ ಪೊಲೀಸರು ನೀಡಿದ ಕಿರುಕುಳದಿಂದ ಮನನೊಂದು ವಕೀಲೆ ಎಸ್‌ ಜೀವಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಪ್ರಕರಣದ ತನಿಖೆ ನಡೆಸಲು ಹೈಕೋರ್ಟ್‌ ಮೂವರು ಐಪಿಎಸ್‌ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡ(ಎಸ್​ಐಟಿ) ರಚಿಸಿದ್ದು, ಮೂರು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ.

ಜೀವಾ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿ ಬೆಂಗಳೂರು ವಕೀಲರ ಸಂಘ ಸಲ್ಲಿಸಿದ್ದ ಮಧ್ಯಂತರ ಅರ್ಜಿ ಹಾಗೂ ತಮ್ಮ ವಿರುದ್ಧ ಬನಶಂಕರಿ ಠಾಣೆಯಲ್ಲಿ ದಾಖಲಾಗಿರುವ ಬಿಎನ್‌ಎಸ್‌ ಸೆಕ್ಷನ್‌ 108 ಮತ್ತು ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ ಸೆಕ್ಷನ್‌ 17(a) ಅಡಿ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಜೀವಾ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿರುವ ಡಿವೈಎಸ್‌ಪಿ ಕನಕಲಕ್ಷ್ಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ ಈ ಆದೇಶ ನೀಡಿದೆ.

ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಬೆಂಗಳೂರು ಸಿಬಿಐನ ಪೊಲೀಸ್‌ ವರಿಷ್ಠಾಧಿಕಾರಿ ವಿನಾಯಕ್‌ ವರ್ಮಾ ನೇತೃತ್ವದ ಮೂರು ಅಧಿಕಾರಿಗಳ ವಿಶೇಷ ತನಿಖಾ ತಂಡ ನಡೆಸಲಿದೆ. ಕರ್ನಾಟಕ ಹೋಮ್‌ ಗಾರ್ಡ್‌ನ ಪೊಲೀಸ್‌ ವರಿಷ್ಠಾಧಿಕಾರಿಯಾಗಿರುವ ಹಕೇ ಅಕ್ಷಯ್‌ ಮಚೀಂದ್ರ, ಆಂತರಿಕ ಭದ್ರತಾ ವಿಭಾಗದ ಪೊಲೀಸ್‌ ವರಿಷ್ಠಾಧಿಕಾರಿ ನಿಷಾ ಜೇಮ್ಸ್‌ ಅವರು ಎಸ್‌ಐಟಿಯ ಸದಸ್ಯರಾಗಿರಲಿದ್ದಾರೆ ಎಂದು ನ್ಯಾಯಾಲಯ ಆದೇಶಿಸಿದೆ.

ಕನಕಲಕ್ಷ್ಮಿ ಅವರು ಭೋವಿ ಹಗರಣದ ಪ್ರಕರಣದ ಆರೋಪಿಯೊಬ್ಬರಿಂದ 25 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ದೂರಿನಲ್ಲಿ ಆರೋಪ ಮಾಡಲಾಗಿದೆ. ಇದನ್ನು ಹೊರತುಪಡಿಸಿ ಬೇರಾವುದೇ ದಾಖಲೆಯಿಲ್ಲ. ಬಿಎನ್‌ಎಸ್‌ ಸೆಕ್ಷನ್‌ 108 (ಐಪಿಸಿ ಸೆಕ್ಷನ್‌ 306) ಅಡಿ ಎಸ್‌ಐಟಿ ತನಿಖೆ ಮಾಡುವಾಗ ಲಂಚಕ್ಕೆ ಬೇಡಿಕೆ ಇಟ್ಟಿರುವ ವಿಚಾರ ಗಮನಕ್ಕೆ ಬಂದರೆ ಭ್ರಷ್ಟಾಚಾರ ಪ್ರತಿಬಂಧ ಕಾಯ್ದೆ ಸೆಕ್ಷನ್‌ 17ಎ ಅಡಿ ಕಾನೂನಿನ ಅನ್ವಯ ತನಿಖೆ ನಡೆಸಬೇಕು ಎಂದೂ ನ್ಯಾಯಾಲಯವು ಆದೇಶಿಸಿದೆ.

ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ತಕ್ಷಣ ಎಸ್‌ಐಟಿ ಆರಂಭಿಸಬೇಕು. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಸಂಬಂಧಿತ ಅಧಿಕಾರಿಗಳು ಎಸ್‌ಐಟಿಗೆ ಒದಗಿಸಬೇಕು. ಅಗತ್ಯಬಿದ್ದರೆ ಇತರೆ ಪೊಲೀಸ್‌ ಅಧಿಕಾರಿಗಳನ್ನು ಎಸ್‌ಐಟಿಯು ನೆರವಿಗೆ ಪಡೆಯಬಹುದು. ತನಿಖೆ ಆರಂಭವಾದಾಗಿನಿಂದ ಮೂರು ತಿಂಗಳಲ್ಲಿ ತನಿಖೆ ಮುಗಿಯಬೇಕು. ತನಿಖಾ ವರದಿಯನ್ನು ಮೂರು ತಿಂಗಳು ಅಥವಾ ಅದರ ಒಳಗೆ ಈ ನ್ಯಾಯಾಲಯಕ್ಕೆ ಸಲ್ಲಿಸಬೇಕು. ಎಸ್‌ಐಟಿಗೆ ಅಗತ್ಯವಾದ ಕಚೇರಿ ಮತ್ತಿತರ ಸೌಲಭ್ಯವನ್ನು ರಾಜ್ಯ ಸರ್ಕಾರ ಒದಗಿಸಬೇಕು ಎಂದು ನ್ಯಾಯಾಲಯ ಆದೇಶಿಸಿ ವಿಚಾರಣೆಯನ್ನು ಡಿಸೆಂಬರ್‌ 19ಕ್ಕೆ ನಡೆಸಲಾಗುವುದು ಎಂದು ಆದೇಶದಲ್ಲಿ ಹೇಳಿದೆ.

ಇದನ್ನೂ ಓದಿ: ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ: ಸಿಸಿಬಿ ತನಿಖೆಗೆ ವಹಿಸಿ ಆದೇಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.