ETV Bharat / state

ಬಾಲ ನ್ಯಾಯ ಮಂಡಳಿಗೆ ಸಿಬ್ಬಂದಿ ಒದಗಿಸಲು 4 ವಾರಗಳ ಗಡುವು ನೀಡಿದ ಹೈಕೋರ್ಟ್ - Juvenile Justice Act - JUVENILE JUSTICE ACT

ಬಾಲ ನ್ಯಾಯ ಮಂಡಳಿಗೆ ಸಿಬ್ಬಂದಿ ಒದಗಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್​ 4 ವಾರಗಳ ಗಡುವು ನೀಡಿದೆ.

ಹೈಕೋರ್ಟ್
ಹೈಕೋರ್ಟ್
author img

By ETV Bharat Karnataka Team

Published : Mar 25, 2024, 10:59 PM IST

ಬೆಂಗಳೂರು : ಬಾಲ ನ್ಯಾಯ ಕಾಯ್ದೆ ಪ್ರಕಾರ ಕಾನೂನು ಜೊತೆಗಿನ ಸಂಘರ್ಷಕ್ಕೊಳಗಾಗಿರುವ ಮಕ್ಕಳ ಪ್ರಕರಣಗಳ ನಿರ್ವಹಣೆಗೆ, ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿಗಳ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ‘ಬಾಲ ನ್ಯಾಯ ಮಂಡಳಿ’ (ಜೆಜೆಬಿ)ಗೆ ಅಗತ್ಯ ಸಿಬ್ಬಂದಿ ಒದಗಿಸಲು, ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಾಲ್ಕು ವಾರಗಳ ಕಾಲಾವಕಾಶ ನೀಡಿದೆ.

ರಾಜ್ಯದಲ್ಲಿ ಬಾಲನ್ಯಾಯ ಕಾಯ್ದೆ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರುವ ವಿಚಾರವಾಗಿ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿರುವ ಹಾಗೂ ‘ಬಚಪನ್ ಬಚಾವೋ ಆಂದೋಲನ್’ ಸ್ವಯಂಸೇವಾ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್. ವಿ ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಸೂಚನೆ ನೀಡಿದೆ.

ವಿಚಾರಣೆ ವೇಳೆ ಕಾನೂನು ಸೇವಾ ಪ್ರಾಧಿಕಾರದ ಪರ ವಕೀಲರಾದ ಮೈತ್ರೆಯಿ ಕೃಷ್ಣನ್ ವಾದ ಮಂಡಿಸಿ, ಸುಪ್ರೀಂಕೋರ್ಟ್ ನಿರ್ದೇಶನದಂತೆ ಹೈಕೋರ್ಟ್‌ನ ಹಾಲಿ ನಾಲ್ವರು ನ್ಯಾಯಮೂರ್ತಿಗಳನ್ನೊಳಗೊಂಡ ಬಾಲ ನ್ಯಾಯ ಮಂಡಳಿ ರಚಿಸಲಾಗಿದೆ. ಈ ಮಂಡಳಿಗೆ ಪ್ರತ್ಯೇಕ ಸಚಿವಾಲಯ (ಅಧಿಕಾರಿ ಮತ್ತು ಸಿಬ್ಬಂದಿ) ಸ್ಥಾಪಿಸಬೇಕು ಎಂದು 2019 ರಲ್ಲಿ ಹೈಕೋರ್ಟ್ ಆದೇಶಿಸಿದೆ.

ಮಂಡಳಿಗೆ ಅಗತ್ಯವಿರುವ ಹುದ್ದೆಗಳನ್ನು ರಾಜ್ಯ ಸರ್ಕಾರ ಅನುಮೋದಿಸಬೇಕು. ಅವುಗಳನ್ನು ಹೈಕೋರ್ಟ್ ಮೂಲಕ ಭರ್ತಿ ಮಾಡಿಕೊಳ್ಳಬೇಕು. ಈವರೆಗೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ಮಂಡಳಿಯು ಪರಿಣಾಮಕಾರಿಯಾಗಿ ಕೆಲಸ ಮಾಡಲು ಆಗುತ್ತಿಲ್ಲ ಎಂದು ನ್ಯಾಯಪೀಠದ ಗಮನಕ್ಕೆ ತಂದರು.

ಸರ್ಕಾರದ ಪರ ವಕೀಲರು ಪ್ರತಿಕ್ರಿಯಿಸಿ, ಈ ಬಗ್ಗೆ ಕ್ರಮ ಕೈಗೊಳ್ಳಲು ನಾಲ್ಕು ವಾರ ಕಾಲಾವಕಾಶ ಬೇಕು ಎಂದು ಕೋರಿದರು. ವಾದ ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ಜೂನ್ 13ಕ್ಕೆ ಮುಂದೂಡಿತು. ಹೈಕೋರ್ಟ್ ಬಾಲ ನ್ಯಾಯ ಮಂಡಳಿಗೆ ನ್ಯಾಯಮೂರ್ತಿ ಕೆ ಎಸ್ ಮುದ್ಗಲ್ ಅಧ್ಯಕ್ಷರಾಗಿದ್ದು, ನ್ಯಾಯಮೂರ್ತಿ ಸುನೀಲ್ ದತ್ ಯಾದವ್, ನ್ಯಾಯಮೂರ್ತಿ ಎಂ. ಜಿ ಉಮಾ, ನ್ಯಾಯಮೂರ್ತಿ ಜೆ. ಎಂ ಖಾಜಿ ಸದಸ್ಯರಾಗಿದ್ದಾರೆ. ಈ ಮಂಡಳಿಗೆ ಅಗತ್ಯ ಸಿಬ್ಬಂದಿಯನ್ನು ಸರ್ಕಾರ ಒದಗಿಸಬೇಕಾಗಿದೆ.

ಇದನ್ನೂ ಓದಿ : ರಾಜ್ಯದಲ್ಲಿ ವೈದ್ಯಕೀಯ ಸಿಬ್ಬಂದಿ ಕೊರತೆ: ಭರ್ತಿ ಕುರಿತು ಸರ್ಕಾರದ ಪ್ರತಿಕ್ರಿಯೆಗೆ ಹೈಕೋರ್ಟ್ ಸೂಚನೆ - High Court

ETV Bharat Logo

Copyright © 2024 Ushodaya Enterprises Pvt. Ltd., All Rights Reserved.