ETV Bharat / state

ಪ್ರಿಯಕರನೊಂದಿಗೆ ಸೇರಿ ಪತಿ ಕೊಲೆ; ಪತ್ನಿಗೆ ಜಾಮೀನು - High Court - HIGH COURT

ಪತಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಮಹಿಳೆಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.

High Court
ಹೈಕೋರ್ಟ್ (ETV Bharat)
author img

By ETV Bharat Karnataka Team

Published : Jun 20, 2024, 11:01 PM IST

ಬೆಂಗಳೂರು: ಪ್ರಿಯತಮನೊಂದಿಗೆ ಅನೈತಿಕ ಸಂಬಂಧ ಮುಂದುವರಿಸಲು ಅಡ್ಡಿಯಾಗಿದ್ದ ಕಾರಣಕ್ಕೆ ಸುಪಾರಿ ನೀಡಿ ಪತಿಯನ್ನು ಕೊಲೆ ಮಾಡಿಸಿದ ಪ್ರಕರಣದಲ್ಲಿ ಮಹಿಳೆಯೊಬ್ಬರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಪತಿಯ ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ಕುಣಿಗಲ್ ನಿವಾಸಿ, ಜೈಲು ಪಾಲಾಗಿರುವ ಹರ್ಷಿತಾ ಜಾಮೀನು ಕೋರಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರನ್ನೊಳಗೊಂಡ ಪೀಠ ಈ ಆದೇಶ ನೀಡಿದೆ.

ಗಲ್ಲು ಹಾಗೂ ಜೀವಾವಧಿ ಶಿಕ್ಷೆ ವಿಧಿಸಬಹುದಾದ ಅಪರಾಧ ಕೃತ್ಯ ಎಸಗಿದ ಆರೋಪ ಎದುರಿಸುತ್ತಿರುವ ಆರೋಪಿ ಮಹಿಳೆಯಾಗಿದ್ದರೆ, ಆಕೆಯನ್ನು ಜಾಮೀನು ಮೇಲೆ ಬಿಡುಗಡೆ ಮಾಡಲು ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ)-1973ರ ಸೆಕ್ಷನ್ 437(1) ಪರಿಗಣಿಸಿ ಜಾಮೀನು ನೀಡಬಹುದಾಗಿದೆ ಎಂದು ಪೀಠ ಅಭಿಪ್ರಾಯ ಪಟ್ಟಿದೆ.

ಅರ್ಜಿದಾರೆ ಒಂದು ಲಕ್ಷ ರೂ. ಮೊತ್ತದ ವೈಯಕ್ತಿಕ ಬಾಂಡ್, ಅಷ್ಟೇ ಮೊತ್ತಕ್ಕೆ ಒಬ್ಬರ ಭದ್ರತಾ ಖಾತರಿ ನೀಡಬೇಕು. ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ನಿಯಮಿತವಾಗಿ ಹಾಜರಾಗಬೇಕು. ಪ್ರಕರಣದ ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು. ಸಾಕ್ಷ್ಯಧಾರಗಳನ್ನು ತಿರುಚಲು ಯತ್ನಿಸಬಾರದು. ಇದೇ ಮಾದರಿಯ ಅಪರಾಧಗಳಲ್ಲಿ ಭಾಗಿಯಾಗಬಾರದು ಎಂದು ನ್ಯಾಯಪೀಠ ಷರತ್ತು ವಿಧಿಸಿದೆ.

ಪ್ರಕರಣದ ಹಿನ್ನೆಲೆ: ಆರೋಪಿ ಮಹಿಳೆಯು ಮಂಜುನಾಥ್ ಎಂಬಾತನನ್ನು ಮದುವೆಯಾಗಿದ್ದರು. ಮದುವೆ ಮುನ್ನವೇ ಮತ್ತೋರ್ವನೊಂದಿಗೆ (ಪ್ರಕರಣದ ಮೊದಲನೇ ಆರೋಪಿ) ಅಕ್ರಮ ಸಂಬಂಧ ಹೊಂದಿದ್ದು, ಅದು ಮುದುವೆ ನಂತರವೂ ಮುಂದುವರೆದಿತ್ತು. ಆದರೆ, ತಮ್ಮ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿರುವ ಕಾರಣಕ್ಕೆ ಪತಿ ಮಂಜುನಾಥ್ ಕೊಲೆಗೆ ಪ್ರಿಯತಮನೊಂದಿಗೆ ಸೇರಿ ಈಕೆ ಪಿತೂರಿ ಹೂಡಿದ್ದರು.

ಅದರಂತೆ ಮಂಜುನಾಥ್ ಕೊಲೆಗೆ ಇತರೆ ಐವರು ಆರೋಪಿಗೆ ಪ್ರಿಯತಮ ಸುಪಾರಿ ನೀಡಿ, 50 ಸಾವಿರ ರೂ. ಪಾವತಿಸಿದ್ದರು. 2023ರ ಫೆ.3ರಂದು ಐವರು ಆರೋಪಿಗಳು ಅರ್ಜಿದಾರೆ ಮನೆಗೆ ಬಂದಿದ್ದರು. ಆಕೆಯ ಬಾಗಿಲು ತೆರೆದು, ಪತಿ ಮಲಗಿರುವ ಕೊಣೆ ತೋರಿಸಿದ್ದರು. ಐವರು ಆರೋಪಿಗಳು ರಾಡ್‌ನಿಂದ ಹೊಡೆದು ಮಂಜುನಾಥ್ ತಲೆ ಹೊಡೆದು ಹತ್ಯೆ ಮಾಡಿದ್ದರು. ನಂತರ ಮೃತದೇಹವನ್ನು ಸಾಗಿಸಿ ಕೆರೆಯ ಪಕ್ಕದಲ್ಲಿ ಬಿಸಾಡಿದ್ದರು ಎಂಬ ಆರೋಪವಿದೆ.

ಈ ಕುರಿತು ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಿದ್ದ ಕುಣಿಗಲ್ ಠಾಣಾ ಪೊಲೀಸರು ಮಹಿಳೆ, ಆಕೆಯ ಪ್ರಿಯತಮ ಮತ್ತು ಇತರೆ ಐವರು ಆರೋಪಿಗಳನ್ನು ಬಂಧಿಸಿದ್ದರು. ಅಧೀನ ನ್ಯಾಯಾಲಯ ಜಾಮೀನು ನಿರಾಕರಿಸಿದ್ದರಿಂದ ಆರೋಪಿ ಮಹಿಳೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ವಿಚಾರಣೆ ವೇಳೆ ಅರ್ಜಿದಾರೆ ಪರ ವಕೀಲ ಡಿ.ಮೋಹನ್ ಕುಮಾರ್ ವಾದಿಸಿ, ಅರ್ಜಿದಾರೆ ಪತಿಯ ಕೊಲೆ ಪ್ರಕರಣದಲ್ಲಿ ಭಾಗಿಯಾಗಿಲ್ಲ. ಆಕೆ ಅಮಾಯಕಳಾಗಿದ್ದಾರೆ. ಅರ್ಜಿದಾರೆಗೆ 20 ವರ್ಷವಾಗಿದ್ದು, 2023ರ ಡಿ.12ರಿಂದ ಜೈಲಿನಲ್ಲಿದ್ದಾರೆ. ಸಿಆರ್‌ಪಿಸಿ ಸೆಕ್ಷನ್ 438 (1) ಪ್ರಕಾರ ಗಲ್ಲು ಮತ್ತು ಜೀವಾವಧಿ ಶಿಕ್ಷೆ ವಿಧಿಸಬಹುದಾದ ಅಪರಾಧ ಕೃತ್ಯ ಎಸಗಿರುವ ಆರೋಪದಲ್ಲಿ ಜೈಲು ಸೇರಿರುವ ಮಹಿಳೆಗೆ ಜಾಮೀನು ನೀಡಲು ಅವಕಾಶವಿದೆ. ಅದರಂತೆ ಅರ್ಜಿದಾರೆರೆಗೆ ಜಾಮೀನು ನೀಡಬೇಕು ಎಂದು ಕೋರಿದ್ದರು.

ಇದನ್ನೂ ಓದಿ: ಅಬಕಾರಿ ನೀತಿ ಹಗರಣ: ದೆಹಲಿ ಸಿಎಂ ಕೇಜ್ರಿವಾಲ್​ಗೆ ಜಾಮೀನು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.