ಬೆಂಗಳೂರು: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪ ಸಂಬಂಧ ಶಾಸಕ ಪ್ರದೀಪ್ ಈಶ್ವರ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ತಮ್ಮ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಲಯದಲ್ಲಿನ ಪ್ರಕ್ರಿಯೆ ರದ್ದುಗೊಳಿಸುವಂತೆ ಕೋರಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ ಅರ್ಜಿದಾರರ ವಿರುದ್ಧದ ಆರೋಪಗಳೆಲ್ಲವೂ ಸತ್ಯಕ್ಕೆ ದೂರವಾದದ್ದು, ಹೀಗಾಗಿ ಪ್ರಕರಣ ರದ್ದುಗೊಳಿಸುವಂತೆ ಮನವಿ ಮಾಡಿದರು. ವಾದ ಆಲಿಸಿದ ನ್ಯಾಯಪೀಠಕ್ಕೆ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿದ್ದು, ವಿಚಾರಣೆಯನ್ನು ವಿಚಾರಣೆಯನ್ನು ನ.15 ಕ್ಕೆ ಮುಂದೂಡಿದೆ.
ಪ್ರಕರಣದ ಹಿನ್ನೆಲೆ : ಚಿಕ್ಕಬಳ್ಳಾಪುರದ ಅಗಲಗುರ್ಕಿಯಲ್ಲಿ ನಡೆದ ಗ್ರಾ.ಪಂ. ಕಟ್ಟಡ ಶಂಕುಸ್ಥಾಪನಾ ಕಾರ್ಯಕ್ರಮದ ವೇಳೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ ಈಶ್ವರ್ ಅವರು ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಅವಹೇಳನಾಕಾರಿಯಾಗಿ ಮಾತನಾಡಿದ್ದರು. ಈ ಹಿನ್ನೆಲೆ ಪ್ರದೀಪ್ ಈಶ್ವರ್ ವಿರುದ್ಧ ಪ್ರತಾಪ್ ಸಿಂಹ ತನ್ನ ವಿರುದ್ಧ ಏಕವಚನದಲ್ಲಿ ಅವಹೇಳನಕಾರಿ ಪದ ಬಳಸಿದ್ದಾರೆ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದಮ್ಮೆ ದಾಖಲಿಸುವಂತೆ ಕೋರಿ ಖಾಸಗಿ ದೂರು ಸಲ್ಲಿಸಿದ್ದಾರೆ.
ಇದನ್ನೂ ಓದಿ: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ: ಶಾಸಕ ಸತೀಶ್ ಸೈಲ್ ಸೇರಿ 7 ಮಂದಿ ದೋಷಿ, ನಾಳೆ ಶಿಕ್ಷೆ ಪ್ರಕಟ