ETV Bharat / state

ಬಿಜೆಪಿ ಪಾದಯಾತ್ರೆಗೆ ಅನುಮತಿ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ - BJP JDS Mysuru Chalo

author img

By ETV Bharat Karnataka Team

Published : Aug 2, 2024, 10:16 PM IST

ಮೈಸೂರು ಚಲೋ ಪಾದಯಾತ್ರೆಗೆ ಅನುಮತಿ ನೀಡಿ, ಸೂಕ್ತ ಆದೇಶ ಹೊರಡಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.

high court
ಹೈಕೋರ್ಟ್ (ETV Bharat)

ಬೆಂಗಳೂರು: ಕೆಂಗೇರಿಯಿಂದ ಮೈಸೂರುವರೆಗೆ ಪಾದಯಾತ್ರೆ ಕೈಗೊಳ್ಳಲು ಅನುಮತಿ ನೀಡುವಂತೆ ಕೋರಿ ಬಿಜೆಪಿ ಸಲ್ಲಿಸಿರುವ ಮನವಿಯನ್ನು ಪರಿಗಣಿಸಿ, ಸೂಕ್ತ ಆದೇಶ ಹೊರಡಿಸುವಂತೆ ಸರ್ಕಾರ ಮತ್ತು ಪೊಲೀಸ್ ಇಲಾಖೆಗೆ ಹೈಕೋರ್ಟ್ ಮೌಖಿಕ ಆದೇಶ ನೀಡಿದೆ.

ಭಾರತೀಯ ಜನತಾ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ಏಕಸದಸ್ಯ ಪೀಠದ ಈ ಸೂಚನೆ ನೀಡಿ ವಿಚಾರಣೆ ಮುಂದೂಡಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ಹಾಜರಾಗಿ ವಿಷಯ ಪ್ರಸ್ತಾಪಿಸಿದರು. ಇದಕ್ಕೆ ಸ್ಪಂದಿಸಿದ ನ್ಯಾಯಪೀಠ, ಕೆಂಗೇರಿಯಿಂದ ಮೈಸೂರುವರೆಗೆ ಪಾದಯಾತ್ರ ಹಮ್ಮಿಕೊಳ್ಳಲು ಅನುಮತಿ ಕೋರಿ ಅರ್ಜಿದಾರರು ಸಲ್ಲಿಸಿರುವ ಮನವಿಯನ್ನು ಪರಿಗಣಿಸಿ ಸೂಕ್ತ ಆದೇಶ ಹೊರಡಿಸಬೇಕು. ಕಾನೂನು ರೀತಿ ಸೂಕ್ತ ಪೊಲೀಸ್ ಭದ್ರತೆ ಒದಗಿಸಬೇಕು ಎಂದು ಮೌಖಿಕ ಆದೇಶ ನೀಡಿ, ವಿಚಾರಣೆಯನ್ನು ಆಗಸ್ಟ್​ 14ಕ್ಕೆ ಮುಂದೂಡಿತು.

ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ಹಾಗೂ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದ ಹಗರಣ ವಿರೋಧಿಸಿ ಬೆಂಗಳೂರಿನಿಂದ ಮೈಸೂರುವರೆಗೆ ಶಾಂತಿಯುತ ಪಾದಯಾತ್ರೆ ನಡೆಸಲು ಭಾರತೀಯ ಜನತಾ ಪಕ್ಷ ತೀರ್ಮಾನಿಸಿದೆ. ಅದರಂತೆ, ಪಾದಯಾತ್ರೆಗೆ ಅನುಮತಿ ನೀಡಬೇಕು ಹಾಗೂ ಸೂಕ್ತ ಪೊಲೀಸ್ ಭದ್ರತೆ ಒದಗಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಸರ್ಕಾರ ಮತ್ತು ಸಂಬಂಧಪಟ್ಟವರಿಗೆ ಜುಲೈ 30ರಂದು ಮನವಿ ಸಲ್ಲಿಸಿದ್ದರು.

ಆದರೆ, ಸರ್ಕಾರ ಮತ್ತು ಪೊಲೀಸರಿಂದ ಯಾವುದೇ ಉತ್ತರ ಬಂದಿಲ್ಲ. ಆಗಸ್ಟ್ 1ಕ್ಕೆ ಪುನಃ ಮನವಿ ಮಾಡಲಾಗಿದೆ. ಆದರೂ, ಅನುಮತಿ ನೀಡುವ ಸಂಬಂಧ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಆದ್ದರಿಂದ ಶಾಂತಿಯುತ ಪಾದಯಾತ್ರೆಗೆ ಅನುಮತಿ ನೀಡುವಂತೆ ಸರ್ಕಾರ, ಪೊಲೀಸರಿಗೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.

ಇದನ್ನೂ ಓದಿ: ಬಿಜೆಪಿ-ಜೆಡಿಎಸ್‌ ಮೈಸೂರು ಪಾದಯಾತ್ರೆಯ ರೂಟ್‌ ಮ್ಯಾಪ್ ಸಿದ್ಧ - BJP JDS Mysuru Chalo

ETV Bharat Logo

Copyright © 2024 Ushodaya Enterprises Pvt. Ltd., All Rights Reserved.