ETV Bharat / state

ಮುಂದಿನ ವಿಚಾರಣೆವರೆಗೂ ರಮೇಶ್‌ ಜಾರಕಿಹೊಳಿ ವಿರುದ್ಧ ಯಾವುದೇ ಕ್ರಮ ಬೇಡ: ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ - ಹೈಕೋರ್ಟ್

ಬಿಜೆಪಿ ಶಾಸಕ ರಮೇಶ್​ ಜಾರಕಿಹೊಳಿ ವಿರುದ್ಧ ಮುಂದಿನ ವಿಚಾರಣೆಯವರೆಗೂ ಯಾವುದೇ ಕ್ರಮಕ್ಕೆ ಮುಂದಾಗಬಾರದು ಎಂದು ಹೈಕೋರ್ಟ್​ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಹೈಕೋರ್ಟ್
ಹೈಕೋರ್ಟ್
author img

By ETV Bharat Karnataka Team

Published : Feb 9, 2024, 3:07 PM IST

ಬೆಂಗಳೂರು: ಸಕ್ಕರೆ ಕಾರ್ಖಾನೆಯ ಅಭಿವೃದ್ಧಿಗಾಗಿ ಪಡೆದ ಸಾಲವನ್ನು ಮರುಪಾವತಿ ಮಾಡದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಮುಂದಿನ ವಿಚಾರಣೆಯವರೆಗೂ ಯಾವುದೇ ಕ್ರಮಕ್ಕೆ ಮುಂದಾಗಬಾರದು ಎಂದು ಹೈಕೋರ್ಟ್ ಇಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತು.

ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್‌ನಿಂದ 439 ಕೋಟಿ ರೂ ಸಾಲ ಪಡೆದು, ಬಳಿಕ ಮರು ಪಾವತಿಸದೇ ವಂಚಿಸಿರುವ ಆರೋಪಕ್ಕೆ ಗುರಿಯಾಗಿರುವ ಸೌಭಾಗ್ಯಲಕ್ಷ್ಮಿ ಶುಗರ್ಸ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕರೂ ಆಗಿರುವ ರಮೇಶ್ ಜಾರಕಿಹೊಳಿ ಹಾಗು ಮತ್ತಿತರರ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಪ್ರಶ್ನಿಸಿ ಹೈಕೊರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಹಾಜರಾಗಿದ್ದ ರಮೇಶ್ ಜಾರಕಿಹೊಳಿ ಪರ ವಕೀಲರು, ಫೆಬ್ರವರಿ 26ರಂದು ಅರ್ಜಿದಾರರ ಮಗನ ಮದುವೆ ನಿಶ್ಚಯವಾಗಿದೆ. ಈ ಸಂದರ್ಭದಲ್ಲಿ ತನಿಖಾಧಿಕಾರಿಗಳು ಅವರನ್ನು ಬಂಧಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ರಕ್ಷಣೆ ನೀಡಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

ಈ ಅಂಶವನ್ನು ದಾಖಲಿಸಿಕೊಂಡ ನ್ಯಾಯಪೀಠ, ಹಿಂದೂ ಧರ್ಮದ ಸಂಪ್ರದಾಯಗಳ ಪ್ರಕಾರ ಮಗನ ಮದುವೆಯಲ್ಲಿ ತಂದೆ ಹಾಜರಿರುವುದು ಅತ್ಯಗತ್ಯ. ಆದ ಕಾರಣ ಮುಂದಿನ ವಿಚಾರಣೆಯವರೆಗೂ ಪ್ರಕರಣದ ಮೊದಲ ಅರ್ಜಿದಾರರ (ರಮೇಶ್ ಜಾರಕಿಹೊಳಿ) ವಿರುದ್ಧ ಯಾವುದೇ ಕ್ರಮಕ್ಕೆ ಮುಂದಾಗಬಾರದು ಎಂದು ತನಿಖಾಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಆದರೆ, ಪ್ರಕರಣದ ಇತರೆ ಅರ್ಜಿದಾರರ ವಿರುದ್ಧ ತನಿಖೆ ನಡೆಸುವುದಕ್ಕೆ ಯಾವುದೇ ಅಡ್ಡಿ ಇಲ್ಲ ಎಂದು ಪೀಠ ಸ್ಪಷ್ಟಪಡಿಸಿ ವಿಚಾರಣೆ ಮುಂದೂಡಿದೆ.

ಇದೇ ವೇಳೆ ಅರ್ಜಿದಾರರು ಅಪೆಕ್ಸ್ ಬ್ಯಾಂಕ್‌ನಿಂದ ಪಡೆದಿರುವ ಸಾಲ ಮತ್ತು ಮರು ಪಾವತಿ ಮಾಡಿರುವುದಕ್ಕೆ ಸಂಬಂಧಿಸಿದಂತೆ ಸಂಪೂರ್ಣ ವಿವರಣೆಯನ್ನು ಮುಂದಿನ ವಿಚಾರಣೆ ವೇಳೆ ಸಲ್ಲಿಸುವಂತೆಯೂ ಸೂಚನೆ ನೀಡಿದೆ.

ಪ್ರಕರಣದ ಹಿನ್ನೆಲೆ: ಬೆಳಗಾವಿಯ ಗೋಕಾಕದಲ್ಲಿರುವ ಸೌಭಾಗ್ಯಲಕ್ಷ್ಮಿ ಶುಗರ್ ಲಿಮಿಟೆಡ್‌ನಲ್ಲಿ ಯಂತ್ರೋಪಕರಣ ಅಳವಡಿಕೆ, ವಿಸ್ತರಣೆ ಮತ್ತು ನಿರ್ವಹಣೆಗಾಗಿ ಅರ್ಜಿದಾರ/ಆರೋಪಿಗಳು ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್ ಮತ್ತು ಅದರ ಸಮೂಹದ ಬ್ಯಾಂಕ್‌ಗಳಲ್ಲಿ ಅವಧಿ ಸಾಲ, ದುಡಿಯುವ ಬಂಡವಾಳದ ರೂಪದಲ್ಲಿ 12-07-2013ರಿಂದ 31-03-2017ರ ಸಂದರ್ಭದಲ್ಲಿ 232.88 ಕೋಟಿ ರೂ. ಸಾಲ ಪಡೆದಿದ್ದರು. ಇದು 439.7 ಕೋಟಿಗೆ ಏರಿಕೆಯಾಗಿದ್ದರೂ ಮರು ಪಾವತಿಸಿರಲಿಲ್ಲ.

ಸಾಲ ಪಡೆಯುವ ಸಂದರ್ಭದಲ್ಲಿ ಶುಗರ್ ಕಂಪನಿಯಲ್ಲಿ ಜಾರಕಿಹೊಳಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದು, ವಸಂತ್ ಮತ್ತು ಶಂಕರ್ ನಿರ್ದೇಶಕರಾಗಿದ್ದರು. ಸಾಲ ಇರುವ ಸಂದರ್ಭದಲ್ಲಿ ನಿರ್ದೇಶಕರನ್ನು ಬದಲಿಸುವಂತಿಲ್ಲ ಎಂಬ ಷರತ್ತು ವಿಧಿಸಲಾಗಿತ್ತು. ಆದರೆ, ಆರೋಪಿಗಳು/ಅರ್ಜಿದಾರರು ಕಂಪನಿಯಲ್ಲಿನ ಹುದ್ದೆಗಳಿಗೆ ರಾಜೀನಾಮೆ ಸಲ್ಲಿಸಿದ್ದು, ಅಸಂಬಂಧಿತ ವ್ಯಕ್ತಿಗಳನ್ನು ಆ ಹುದ್ದೆಗಳಿಗೆ ನೇಮಿಸಲಾಗಿದೆ.

ಈ ವಿಚಾರವನ್ನು ತಮ್ಮ ಗಮನಕ್ಕೆ ತಂದಿಲ್ಲ ಎಂದು ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರು ಜನವರಿ 5ರಂದು ನೀಡಿದ ದೂರಿನ ಅನ್ವಯ ವಿ.ವಿ.ಪುರಂ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 406, 420 & 34 ಅಡಿ ಪ್ರಕರಣ ದಾಖಲಾಗಿದೆ. ಅರ್ಜಿದಾರರು ಇದನ್ನು ರದ್ದುಪಡಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಇದನ್ನೂ ಓದಿ: ನಿವೃತ್ತ ನ್ಯಾ.ನಾಗಮೋಹನ್​ ದಾಸ್​ ಆಯೋಗದ ಪ್ರಕ್ರಿಯೆ ಪ್ರಾರಂಭವಾಗದಿರಲು ಕಾರಣವೇನು?: ಹೈಕೋರ್ಟ್ ಪ್ರಶ್ನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.