ETV Bharat / state

ಶೇ.60ರಷ್ಟು ಕನ್ನಡ ಬಳಕೆ: ಬಲವಂತದ ಕ್ರಮ ಕೈಗೊಳ್ಳದಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ - Kannada Nameplates

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಮಾಡದವರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತಿಳಿಸಿದೆ.

high-court-instructs-not-to-take-coercive-action-in-kannada-mandatory-issue
ಶೇ.60ರಷ್ಟು ಕನ್ನಡ ಬಳಕೆ: ಬಲವಂತದ ಕ್ರಮ ಕೈಗೊಳ್ಳದಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
author img

By ETV Bharat Karnataka Team

Published : Mar 18, 2024, 9:45 PM IST

ಬೆಂಗಳೂರು: ನಾಮಫಲಕಗಳಲ್ಲಿ ಶೇಕಡಾ 60ರಷ್ಟು ಕನ್ನಡ ಬಳಕೆ ಮಾಡದ ವಾಣಿಜ್ಯ ಸಂಸ್ಥೆಗಳ ವಿರುದ್ಧ ಯಾವುದೇ ರೀತಿಯ ಬಲವಂತದ ಕ್ರಮಕ್ಕೆ ಮುಂದಾಗಬಾರದು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ರಾಜ್ಯದ ವಾಣಿಜ್ಯ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಮಾಡುವುದನ್ನು ಕಡ್ಡಾಯಗೊಳಿಸಿ ಜಾರಿಗೊಳಿಸಿರುವ 'ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ಕಾಯ್ದೆ-2022' ಮತ್ತು ಶೇ.60ರಷ್ಟು ಕನ್ನಡ ಬಳಸದ ಸಂಸ್ಥೆಗಳನ್ನು ಮುಚ್ಚುವುದಾಗಿ ತಿಳಿಸಿ 2024ರ ಫೆ.28ರಂದು ಹೊರಡಿಸಿರುವ ಸುತ್ತೋಲೆಯನ್ನು ಪ್ರಶ್ನಿಸಿ ರಿಟೇಲರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ, ಟೈಟಾನ್ ಕಂಪನಿ ಲಿಮಿಟೆಡ್ ಮತ್ತು ಪಿವಿಆರ್ ಐನಾಕ್ಸ್ ಲಿಮಿಟೆಡ್ ಮತ್ತಿತರ ಬೃಹತ್ ವಾಣಿಜ್ಯ ಸಂಸ್ಥೆಗಳು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದವು.

ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ, ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಮಾಡದ ವಾಣಿಜ್ಯ ಸಂಸ್ಥೆಗಳನ್ನು ಮುಚ್ಚುವುದಾಗಿ (ಸೀಲ್ಡ್ ಡೌನ್) ತಿಳಿಸಿರುವುದು ಕಠಿಣ ಕ್ರಮವಾಗಲಿದೆ. ದಂಡ ಹಾಕುವುದು ಅಥವಾ ಪರವಾನಗಿ ರದ್ದುಪಡಿಸುವ ಕ್ರಮವಾದರೆ ಯೋಚಿಸಬಹುದು. ಆದರೆ, ಸಂಸ್ಥೆಯನ್ನೇ ಮುಚ್ಚುವುದು ಸರಿಯಾದ ಕ್ರಮವಲ್ಲ. ಮೇಲಾಗಿ ಕಾಯ್ದೆ ಮೂಲಕ ನಿಯಮಗಳನ್ನು ಸುತ್ತೋಲೆ ಮೂಲಕ ಜಾರಿಗೊಳಿಸಲು ಸಾಧ್ಯವಿಲ್ಲ. ಆದ್ದರಿಂದ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಬಳಕೆ ಮಾಡದ ವಾಣಿಜ್ಯ ಸಂಸ್ಥೆಗಳನ್ನು ಸೀಲ್​ಡೌನ್ ಮಾಡುವಂತಹ ಬಲವಂತದ ಕ್ರಮ ಜರುಗಿಸಬಾರದು. ಉಳಿದಂತೆ ಸುತ್ತೋಲೆಗೆ ಸಂಬಂಧಿಸಿದಂತೆ ಇತರ ಅಂಶಗಳು ಅರ್ಜಿ ಕುರಿತ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ಮಧ್ಯಂತರ ಆದೇಶ ನೀಡಿದೆ.

ಅಲ್ಲದೆ, ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ಕಾಯ್ದೆ-2022 ಅನ್ನು ಯಾವ ದಿನದಿಂದ ಜಾರಿ ಮಾಡಲಾಗಿದೆ ಎಂಬ ಬಗ್ಗೆ ಗೆಜೆಟ್ ಅಧಿಸೂಚನೆಯಲ್ಲಿ ಸ್ಪಷ್ಟವಾಗಿ ತಿಳಿಸಿಲ್ಲ. ಆ ಕುರಿತು ಸರ್ಕಾರ ಮಾಹಿತಿ ನೀಡಬೇಕು. ಅರ್ಜಿಗೆ ಆಕ್ಷೇಪಣೆ ಸಲ್ಲಿಸಬೇಕು. ಶೇ.60ರಷ್ಟು ಕನ್ನಡ ಬಳಕೆ ಮಾಡಲು ವಾಣಿಜ್ಯ ಸಂಸ್ಥೆಗಳಿಗೆ ಎಷ್ಟು ದಿನ ಕಾಲಾವಕಾಶ ನೀಡಲಾಗುತ್ತದೆ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಸೂಚನೆ ನೀಡಿದ ನ್ಯಾಯಪೀಠ, ವಿಚಾರಣೆಯನ್ನು ಮುಂದೂಡಿತು.

ವಿಚಾರಣೆ ವೇಳೆ ಅರ್ಜಿದಾರ ಕಂಪನಿಗಳ ಪರ ವಕೀಲ ಮನು ಕುಲಕರ್ಣಿ ವಾದ ಮಂಡಿಸಿ, ''ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ಕಾಯ್ದೆ-2022ರ ಸೆಕ್ಷನ್ 17(6)ಕ್ಕೆ ರಾಜ್ಯ ಸರ್ಕಾರ ತಿದ್ದುಪಡಿ ತಂದು ರಾಜ್ಯದ ವಾಣಿಜ್ಯ ಸಂಸ್ಥೆಗಳು ತನ್ನ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಮಾಡಬೇಕು ಎಂದು ಸೂಚಿಸಿದೆ. ಈ ನಿಯಮವು ಸಂವಿಧಾನದ ಪರಿಚ್ಛೇದ 345ಕ್ಕೆ ವಿರುದ್ಧವಾಗಿದೆ. ಭಾಷಾ ನೀತಿಯನ್ನು ರೂಪಿಸಿ, ಜಾರಿಗೊಳಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ. ಖಾಸಗಿ ವ್ಯಕ್ತಿಗಳ ಮೇಲೆ ಭಾಷೆಯನ್ನು ಹೇರಲು ಸಂವಿಧಾನದ ಪರಿಚ್ಛೇದ 345 ನಿರ್ಬಂಧ ಹೇರುತ್ತದೆ. ತಿದ್ದುಪಡಿ ಮಾಡುವ ಮುನ್ನ ಕನ್ನಡ ಬಳಕೆ ಶೇ.50ರಷ್ಟಿತ್ತು. ತಿದ್ದುಪಡಿ ನಂತರ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯ ಮಾಡಲಾಗಿದೆ. ಈ ತಿದ್ದುಪಡಿಯ ಸಮರ್ಥನೀಯತೆ ಮತ್ತು ಕಾನೂನುಬದ್ಧತೆಯನ್ನು ನ್ಯಾಯಾಲಯ ಪರಿಶೀಲಿಸಬೇಕಿದೆ'' ಎಂದು ತಿಳಿಸಿದರು.

''ಜೊತೆಗೆ, 2024ರ ಫೆ.28ರಂದು ಸರ್ಕಾರ ಸುತ್ತೋಲೆ ಹೊರಡಿಸಿ, ನಾಮಫಲಕಗಳಲ್ಲಿ ಶೇ.60ರಷ್ಟು ಬಳಕೆ ಮಾಡದ ವಾಣಿಜ್ಯ ಸಂಸ್ಥೆಗಳನ್ನು ಸೀಲ್​ಡೌನ್ ಮಾಡಲಾಗುವುದು ಎಂದು ಹೇಳಿದೆ. ಇದು ಅಸಮರ್ಥನೀಯವಾಗಿದ್ದು, ಸುತ್ತೋಲೆಗೆ ತಡೆಯಾಜ್ಞೆ ನೀಡಬೇಕು'' ಎಂದು ಕೋರಿದರು.

ರಾಜ್ಯ ಸರ್ಕಾರದ ಪರ ಅಡ್ವೋಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ ಅವರು, ''ವಾಣಿಜ್ಯ ಸಂಸ್ಥೆಗಳನ್ನು ಮುಚ್ಚುವುದು ಸರ್ಕಾರದ ಉದ್ದೇಶವಾಗಿಲ್ಲ. ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಮಾಡುವ ನಿಯಮ ಜಾರಿಗೊಳಿಸುವುದಷ್ಟೇ ಸರ್ಕಾರದ ಉದ್ದೇಶ. ಕಾಯ್ದೆ ಜಾರಿಗೊಳಿಸಿ 2024ರ ಫೆ.26ರಂದು ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದೆ. ಕಾಯ್ದೆಯನ್ನು ಜಾರಿಗೊಳಿಸಿಲ್ಲ ಎಂಬ ಅರ್ಜಿದಾರರ ವಾದ ಸೂಕ್ತವಾಗಿಲ್ಲ. ಅರ್ಜಿದಾರ ಕಂಪನಿಗಳು ಕಾಯ್ದೆಯನ್ನು ಪ್ರಶ್ನಿಸಿರುವುದರಿಂದ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕು'' ಎಂದು ಕೋರಿದರು.

ಕನ್ನಡ ನಾಮಫಲಕ ಅಳವಡಿಸಿ: ಶೇ.60ರಷ್ಟು ಕನ್ನಡ ಬಳಕೆಗೆ ನಿಯಮ ರೂಪಿಸಲಾಗಿದೆ. ಕಾಯ್ದೆಯ ನಿಯಮಗಳನ್ನು ನ್ಯಾಯಾಲಯ ಪರಿಶೀಲಿಸಲಿದೆ ಹಾಗೂ ಉತ್ತರ ಸಹ ನೀಡಲಿದೆ. ಕಾಯ್ದೆಯ ಬಗೆಗಿನ ಎಲ್ಲಾ ಅಂಶಗಳಿಗೆ ರಾಜ್ಯ ಸರ್ಕಾರ ಸ್ಪಷ್ಟನೆ ನೀಡಲಿದೆ. ವಾಣಿಜ್ಯ ಸಂಸ್ಥೆಗಳನ್ನು ಮುಚ್ಚುವುದನ್ನು ನ್ಯಾಯಾಲಯ ಸಹ ಒಪ್ಪುವುದಿಲ್ಲ. ಆದರೆ, ನಾಮಫಲಕದಲ್ಲಿ ಕನ್ನಡವನ್ನು ದೊಡ್ಡದಾಗಿ ಬಳಸಿದರೆ ನಿಮಗೆ ಯಾವ ಸಮಸ್ಯೆಯಾಗುತ್ತದೆ. ಕನ್ನಡ ಬಳಕೆಗೆ ಸಮಯಾವಕಾಶ ಬೇಕಾದರೆ ಸರ್ಕಾರ ಒದಗಿಸಲಿದೆ. ಕರ್ನಾಟಕದಲ್ಲಿ ನೀವು ವ್ಯಾಪಾರ ಮಾಡುತ್ತಿದ್ದೀರಿ. ಕನ್ನಡದಲ್ಲಿ ಬಳಕೆ ಮಾಡುವುದರಿಂದ ನಿಮಗೆ ಏನು ತೊಂದರೆಯಾಗಲಿದೆ ಎಂದು ಕೋರ್ಟ್​​ ಪ್ರಶ್ನಿಸಿತು.

ಅಲ್ಲದೆ, ಹೆಸರುಗಳನ್ನು ಕನ್ನಡಕ್ಕೆ ಅನುವಾದ ಮಾಡುವಂತೆ ಹೇಳುತ್ತಿಲ್ಲ. ಸಂಸ್ಥೆಯಲ್ಲಿ ಪ್ರತಿ ಉದ್ಯೊಗಿಯು ಕನ್ನಡಿಗನಾಗಿರಬೆಕು ಎಂದು ನಿಯಮ ಹೇರುತ್ತಿಲ್ಲ. ಕನ್ನಡದಲ್ಲಿ ನಾಮಫಲಕ ಹಾಕುವಂತಷ್ಟೇ ಹೇಳುತ್ತಿದೆ. ಅದರಲ್ಲಿ ತಪ್ಪೇನಿದೆ? ಎಂದು ಪೀಠ ಪ್ರಶ್ನೆ ಮಾಡಿತು.

ಇದನ್ನೂ ಓದಿ: ಡಿಕೆಶಿ​ ಸಲ್ಲಿಸಿದ್ದ ದಾವೆ ಬೆಂಗಳೂರಿಗೆ ವರ್ಗಾಯಿಸಲು ಕೋರಿ ಯತ್ನಾಳ್​ ಅರ್ಜಿ: ಡಿಸಿಎಂಗೆ ಹೈಕೋರ್ಟ್​ ನೋಟಿಸ್​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.