ETV Bharat / state

ಸಿದ್ದಸಿರಿ ಎಥೆನಾಲ್ ಘಟಕಕ್ಕೆ ಕೆಎಸ್​​ಪಿಸಿಬಿ ನೋಟಿಸ್: ಮಾಲೀಕರ ವಾದ ಆಲಿಸಿ ಕ್ರಮಕ್ಕೆ ಹೈಕೋರ್ಟ್ ಸೂಚನೆ

author img

By ETV Bharat Karnataka Team

Published : Feb 8, 2024, 4:05 PM IST

ಸಿದ್ದಸಿರಿ ಎಥೆನಾಲ್ ಮತ್ತು ಪವರ್ ಘಟಕ ಮುಚ್ಚುವ ಬಗ್ಗೆ ಮಾಲೀಕರ ವಾದ ಆಲಿಸಿದ ನಂತರ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ತಿಳಿಸಿದೆ.

Etv Bharathigh-court-instructs-to-take-action-after-hearing-siddhasiri-ethanol-unit-owner-argument
ಸಿದ್ದಸಿರಿ ಎಥೆನಾಲ್ ಘಟಕಕ್ಕೆ ಕೆಎಸ್​​ಪಿಸಿಬಿ ನೋಟಿಸ್: ಮಾಲೀಕರ ವಾದ ಆಲಿಸಿ ಕ್ರಮಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು : ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕುಟುಂಬದ ಒಡೆತನವಿರುವ ಸಿದ್ದಸಿರಿ ಎಥೆನಾಲ್ ಮತ್ತು ಪವರ್ ಘಟಕ ಮುಚ್ಚುವ ಸಂಬಂಧ ಕರ್ನಾಟಕ ಮಾಲಿನ್ಯ ನಿಯಂತ್ರಣಾ ಮಂಡಳಿ(ಕೆಎಸ್​​ಪಿಸಿಬಿ) ನೀಡಿರುವ ಆದೇಶದ ಸಂಬಂಧ ಘಟಕದ ಮಾಲೀಕರ ವಾದ ಆಲಿಸಿದ ಬಳಿಕ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ಸೂಚನೆ ನೀಡಿದೆ.

ಯತ್ನಾಳ್ ಪುತ್ರ ಹಾಗೂ ಸಂಸ್ಥೆಯ ನಿರ್ದೇಶಕರಾಗಿರುವ ರಮಣಗೌಡ ಬಿ. ಪಾಟೀಲ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಮತ್ತು ನ್ಯಾಯಮೂರ್ತಿ ಟಿ.ಜಿ. ಶಿವಶಂಕರೇಗೌಡ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿತು.

ಘಟಕ ಮುಚ್ಚುವ ಆದೇಶ ಮಾರ್ಪಡಿಸಿದ ಹೈಕೋರ್ಟ್​​, ಘಟಕದ ವಿಸ್ತರಣೆಗೆ ಅನುಮತಿ ಸರ್ಕಾರದ ಪರಿಶೀಲನೆಯಲ್ಲಿದೆ. ನಾಲ್ಕು ವಾರಗಳಲ್ಲಿ ಸರ್ಕಾರ ಈ ಬಗ್ಗೆ ತೀರ್ಮಾನ ಕೈಗೊಳ್ಳಬೇಕು ಎಂದು ಸೂಚಿಸಿದೆ. ಅಲ್ಲದೆ, ಈ ಆದೇಶವನ್ನೇ ಷೋಕಾಸ್ ನೋಟಿಸ್ ಎಂದು ಪರಿಗಣಿಸಬೇಕು. ಈ ಸಂಬಂಧ ತೀರ್ಮಾನ ಕೈಗೊಳ್ಳುವುದಕ್ಕೂ ಮುನ್ನ ಸಿದ್ದಸಿರಿ ಎಥೆನಾಲ್ ಘಟಕದ ಅಹವಾಲು ಆಲಿಸಲು ಸೂಚನೆ ನೀಡಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಕೆಎಸ್​​ಪಿಸಿಬಿ ಈ ಸಂಬಂಧ ಕ್ರಮ ಕೈಗೊಳ್ಳುವವರೆಗೂ ಘಟಕದಲ್ಲಿ ಕಬ್ಬು ಅರೆಯುವುದಿಲ್ಲವೆಂದು ಮುಚ್ಚಳಿಕೆ ನೀಡಿದರು. ಈ ಅಂಶ ದಾಖಲಿಸಿಕೊಂಡ ಪೀಠ ಅರ್ಜಿ ಇತ್ಯರ್ಥಪಡಿಸಿ ಆದೇಶಿಸಿದೆ.

ಅರ್ಜಿಯ ಸಂಬಂಧ ಈ ಹಿಂದೆ ನಡೆದ ವಿಚಾರಣೆ ವೇಳೆ, ಅರ್ಜಿದಾರರ ಪರವಾಗಿ ವಾದಿಸಿದ ವಕೀಲ ವೆಂಕಟೇಶ್ ದಳವಾಯಿ ಅವರು, ''ರಾಜಕೀಯ ಕಾರಣಕ್ಕಾಗಿ ಘಟಕ ಮುಚ್ಚಲು ಒತ್ತಾಯಿಸಲಾಗುತ್ತಿದೆ'' ಎಂದು ಆಕ್ಷೇಪಿಸಿದ್ದರು.

ಆದಕ್ಕೆ ನ್ಯಾಯಪೀಠ ''2021ರಲ್ಲಿ ಕಾರ್ಖಾನೆ ಖರೀದಿಸಿದ್ದೀರಿ. ನಾವೀಗ 2024ರಲ್ಲಿದ್ದೇವೆ. ಈ ಅವಧಿಯಲ್ಲಿ ನೀವು ಅಗತ್ಯ ಅನುಮತಿ ಪಡೆಯಬೇಕಿತ್ತು. ಕಾನೂನಿನ ಪ್ರಕಾರ ನೀವು ಅನುಮತಿ ಪಡೆಯುವವರೆಗೆ ಕಾರ್ಖಾನೆ ನಡೆಸಲಾಗದು'' ಎಂದು ತಿಳಿಸಿತ್ತು.

ರಾಜ್ಯ ಸರ್ಕಾರದ ಪರವಾಗಿ ವಾದಿಸಿದ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಅವರು, ''ಕಾರ್ಖಾನೆಯನ್ನು ನಿಯಮದ ಪ್ರಕಾರವಾಗಿ ನಡೆಸಲಾಗುತ್ತಿಲ್ಲ. ಹೀಗಾಗಿ, ಕ್ರಮ ಕೈಗೊಳ್ಳಲಾಗಿದೆಯಷ್ಟೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ'' ಎಂದು ಪೀಠಕ್ಕೆ ವಿವರಿಸಿದ್ದರು.

ಪ್ರಕರಣದ ಹಿನ್ನೆಲೆ: ಸಿದ್ದಸಿರಿ ಎಥೆನಾಲ್ ಮತ್ತು ಪವರ್ ಘಟಕ ಮುಚ್ಚುವಂತೆ ಕಲಬುರಗಿ ವಲಯದ ಹಿರಿಯ ಪರಿಸರ ಅಧಿಕಾರಿ ಜನವರಿ 18ರಂದು ನೋಟಿಸ್ ಜಾರಿ ಮಾಡಿದ್ದರು. ಆನಂತರ ಕೆಎಸ್​​ಪಿಸಿಬಿ ಅಧ್ಯಕ್ಷರು ಜನವರಿ 25ರಂದು ಆದೇಶ ಮಾಡಿದ್ದರು. ಈ ಎರಡೂ ಆದೇಶವನ್ನು ವಜಾ ಮಾಡಬೇಕು ಎಂಬುದು ಅರ್ಜಿದಾರರ ಕೋರಿಕೆಯಾಗಿದೆ. ಮಧ್ಯಂತರ ಪರಿಹಾರದ ಭಾಗವಾಗಿ ಕೆಎಸ್​​ಪಿಸಿಬಿ ಆದೇಶಕ್ಕೆ ತಡೆ ನೀಡುವಂತೆ ಕೋರಿದ್ದಾರೆ.

ಇದನ್ನೂ ಓದಿ: ಮಗಳ ಮೇಲೆ ಮಲತಂದೆಯಿಂದ ಲೈಂಗಿಕ ಕಿರುಕುಳ ಸುಳ್ಳು ಆರೋಪ: ಹೈಕೋರ್ಟ್ ಕಳವಳ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.