ETV Bharat / state

ನ್ಯಾಯಾಲಯದ ಆದೇಶ ಪಾಲಿಸಲು ನಿರಾಸಕ್ತಿ: ಸಿಎಸ್‌ ಸೇರಿದಂತೆ 41 ಇಲಾಖೆಗಳಿಗೆ ನೋಟಿಸ್ - High Court Notice - HIGH COURT NOTICE

ನ್ಯಾಯಾಲಯದ ಆದೇಶಗಳನ್ನು ಪಾಲಿಸಲು ನಿರಾಸಕ್ತಿ ತೋರಿದ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಸೇರಿದಂತೆ 41 ಇಲಾಖೆಗಳಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

DEPARTMENTS  CHIEF SECRETARY TO GOVT  COURT ORDERS  BENGALURU
ನ್ಯಾಯಾಲಯದ ಆದೇಶಗಳ ಪಾಲಿಸಲು ನಿರಾಸಕ್ತಿ
author img

By ETV Bharat Karnataka Team

Published : Apr 23, 2024, 9:59 PM IST

ಬೆಂಗಳೂರು: ನ್ಯಾಯಾಲಯದ ಆದೇಶಗಳು ಹಾಗೂ ನಿರ್ದೇಶಗಳನ್ನು ಪಾಲಿಸಲು ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು ಮತ್ತು ಅದರ ಪ್ರಾಧಿಕಾರಗಳಲ್ಲಿ ಆಂತರಿಕ ಮೇಲ್ವಿಚಾರಣಾ ವ್ಯವಸ್ಥೆ ಆರಂಭಿಸುವ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಸರ್ಕಾರದ 41 ಇಲಾಖೆಗಳಿಗೆ ಇಂದು ಹೈಕೋರ್ಟ್ ನೋಟಿಸ್ ನೀಡಿತು.

ನ್ಯಾಯಾಲಯಗಳ ಆದೇಶ ಪಾಲಿಸಲು ನಿರ್ಲಕ್ಷ್ಯ ಹಾಗೂ ವಿಳಂಬ ಧೋರಣೆ ತಳೆಯುತ್ತಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ಅರ್ಜಿಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಕೃಷಿ, ಕಂದಾಯ, ಆರೋಗ್ಯ ಹಾಗೂ ಗೃಹ ಇಲಾಖೆ ಸೇರಿದಂತೆ 41 ಇಲಾಖೆಗಳನ್ನು, ಬಿಡಿಎ, ಬಿಬಿಎಂಪಿ ಆಯುಕ್ತರು ಮತ್ತು ಕೆಐಎಡಿಬಿ ಕಾರ್ಯಕಾರಿ ನಿರ್ದೇಶಕರನ್ನು ಪ್ರತಿವಾದಿ ಮಾಡಲಾಗಿದೆ. ಎಲ್ಲಾ ಪ್ರತಿವಾದಿಗಳಿಗೆ ನೋಟಿಸ್ ನೀಡಿ ವಿಚಾರಣೆ ಮುಂದೂಡಿತು.

ನ್ಯಾಯಾಲಯಗಳ ಆದೇಶ ಪಾಲಿಸಲು ಸರ್ಕಾರ ಮತ್ತದರ ಪ್ರಾಧಿಕಾರಗಳು ನಿರ್ಲಕ್ಷ್ಯ ಹಾಗೂ ವಿಳಂಬ ನೀತಿ ಅನುಸರಿಸುತ್ತಿವೆ. ನ್ಯಾಯಾಲಯಗಳ ಮೊರೆ ಹೋಗುವುದು ಸಾರ್ವಜನಿಕರ ಮೂಲಭೂತ ಹಕ್ಕು. ಹಾಗಾಗಿ ಆದೇಶ ಪಾಲಿಸದಿರುವುದು ಜನರ ಮೂಲಭೂತ ಹಕ್ಕಿನ ಉಲ್ಲಂಘನೆ. ನ್ಯಾಯಾಲಯಗಳ ಆದೇಶ ಪಾಲಿಸಲು ಅಧಿಕಾರಿಗಳು ತೋರುತ್ತಿರುವ ನಿರ್ಲಕ್ಷವನ್ನು ಒಪ್ಪುವಂಥದ್ದಲ್ಲ. ಆದ್ದರಿಂದ ನ್ಯಾಯಾಲಯಗಳ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಿದೆ. ಅದಕ್ಕಾಗಿ ಎಲ್ಲಾ ಇಲಾಖೆಗಳಲ್ಲಿ ಆಂತರಿಕ ಮೇಲ್ವಿಚಾರಣಾ ಸಮಿತಿ ಆರಂಭಿಸಬೇಕು. ಈ ಕುರಿತು ಅಗತ್ಯ ನಿರ್ದೇಶನ ನೀಡಬೇಕಿರುವ ಹಿನ್ನೆಲೆಯಲ್ಲಿ ಸರ್ಕಾರ ಮತ್ತದರ ಎಲ್ಲಾ ಇಲಾಖೆಗಳನ್ನು ಪ್ರತಿವಾದಿ ಮಾಡಿ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸುವಂತೆ ರಿಜಿಸ್ಟ್ರಾರ್ ಜನರಲ್ ಅವರಿಗೆ ಹೈಕೋರ್ಟ್ ವಿಭಾಗೀಯ ಪೀಠವು 2024ರ ಏ.8ರಂದು ನಿರ್ದೇಶಿಸಿತ್ತು. ಅದರಂತೆ ರಿಜಿಸ್ಟ್ರಾರ್ ಜನರಲ್ ಅವರು ಈ ಅರ್ಜಿ ದಾಖಲಿಸಿದ್ದಾರೆ. ವಿಚಾರಣೆ ವೇಳೆ ಅಮೈಕಾಸ್ ಕ್ಯೂರಿ(ನ್ಯಾಯಾಲಯಕ್ಕೆ ನೆರವಾಗುವ ವಕೀಲರು) ವಾದ ಮಂಡಿಸಿದರು.

ಇದನ್ನೂ ಓದಿ: ಮುರುಘಾ ಶರಣರ ಪೋಕ್ಸೊ ಪ್ರಕರಣ: ಹೈಕೋರ್ಟ್​ನಿಂದ ಪಡೆದ ಜಾಮೀನು ಅಮಾನತ್ತಿನಲ್ಲಿಟ್ಟ ಸುಪ್ರೀಂ - Muruga Sharan POCSO case

ETV Bharat Logo

Copyright © 2024 Ushodaya Enterprises Pvt. Ltd., All Rights Reserved.