ETV Bharat / state

ಶ್ರೀರಂಗಪಟ್ಟಣ ಮೂಡಲ ಬಾಗಿಲ ಆಂಜನೇಯ ಸ್ವಾಮಿ ದೇವಾಲಯ ಉತ್ಖನನಕ್ಕೆ ಕೋರಿ ಅರ್ಜಿ: ಸರ್ಕಾರಕ್ಕೆ ನೋಟಿಸ್​ - excavation of Anjaneya Swamy Temple - EXCAVATION OF ANJANEYA SWAMY TEMPLE

ಶ್ರೀರಂಗಪಟ್ಟಣ ಮೂಡಲ ಬಾಗಿಲ ಆಂಜನೇಯ ಸ್ವಾಮಿ ದೇವಾಲಯ ಉತ್ಖನನಕ್ಕೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್​ ನೋಟಿಸ್ ಜಾರಿಗೊಳಿಸಿದೆ.

High Court
ಹೈಕೋರ್ಟ್ (ETV Bharat)
author img

By ETV Bharat Karnataka Team

Published : May 29, 2024, 9:06 PM IST

ಬೆಂಗಳೂರು : ಶ್ರೀರಂಗಪಟ್ಟಣದ ಮೂಡಲ ಬಾಗಿಲು ಆಂಜನೇಯ ಸ್ವಾಮಿ ದೇವಾಲಯವನ್ನು ಟಿಪ್ಪುಸುಲ್ತಾನ್ ಧ್ವಂಸಗೊಳಿಸಿ ಜಾಮಿಯಾ ಮಸೀದಿ ನಿರ್ಮಿಸಲಾಗಿದ್ದು, ಈ ಉತ್ಖನನ ನಡೆಸಿ ವರದಿ ಸಲ್ಲಿಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾಲಯಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾದ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

ಮಂಡ್ಯ ಜಿಲ್ಲೆಯ ಹಾಲಹಳ್ಳಿಯಲ್ಲಿ ಕೇಂದ್ರ ಕಚೇರಿ ಹೊಂದಿರುವ ಬಜರಂಗ ಸೇನೆಯ ರಾಜ್ಯ ಘಟಕದ ಅಧ್ಯಕ್ಷ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್. ವಿ. ಅಂಜಾರಿಯಾ ಹಾಗೂ ಕೆ. ವಿ ಅರವಿಂದ್ ಅವರ ವಿಭಾಗೀಯ ಪೀಠ, ಭಾರತೀಯ ಪುರಾತತ್ವ ಸರ್ವೇಕ್ಷಣಾಲಯ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಮುಜರಾಯಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಮಂಡ್ಯ ಜಿಲ್ಲಾಧಿಕಾರಿ, ರಾಜ್ಯ ಧಾರ್ಮಿಕ ಪರಿಷತ್, ಕರ್ನಾಟಕ ರಾಜ್ಯ ವಕ್ಫ್​ ಮಂಡಳಿಗೆ ಸೇರಿ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಮೂಡಲ ಬಾಗಿಲು ಆಂಜನೇಯ ಸ್ವಾಮಿ ದೇವಾಲಯವನ್ನು ವಿಜಯನಗರ ಸಾಮ್ರಾಜ್ಯ, ಮೈಸೂರು ಸಾಮ್ರಾಜ್ಯ ಹಾಗೂ ದಳವಾಯಿ ದೊಡ್ಡಯ್ಯ ಸೇರಿ ಅನೇಕ ಆಡಳಿತಗಾರರು ಪೋಷಿಸಿಕೊಂಡು ಬಂದಿದ್ದರು. ಆದರೆ, ಇದನ್ನು ಟಿಪ್ಪು ಸುಲ್ತಾನ್ ಧ್ವಂಸಗೊಳಿಸಿದ್ದು, ಬಳಿಕ ಅದೇ ಜಾಗದಲ್ಲಿ ಜಾಮೀಯ ಮಸೀದಿ ನಿರ್ಮಿಸಿದ್ದಾನೆ.

ಈ ಬಗ್ಗೆ ಅಧ್ಯಯನ, ಸರ್ವೆ ಹಾಗೂ ಉತ್ಖನನ ನಡೆಸಿ 30 ದಿನಗಳ ಒಳಗಾಗಿ ಹೈಕೋರ್ಟ್‌ಗೆ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾಲಯಕ್ಕೆ ನಿರ್ದೇಶಿಸಬೇಕು. ದೇವಾಲಯದ ಆವರಣದಲ್ಲಿರುವ ಹಿಂದೂ ಸಂಸ್ಕೃತಿ ಹಾಗೂ ಪರಂಪರೆಯ ಕುರುಹುಗಳಾಗಿರುವ ಗರುಡ ಕಂಬ, ಕಲ್ಯಾಣಿ, ಸ್ತೂಪ, ಸ್ತಂಭ, ಹಿಂದೂ ದೇವ - ದೇವತೆಗಳ ಕಲ್ಲಿನ ಕೆತ್ತನೆಗಳು ಹಾಗೂ ಭೂಗತ ದೇವಸ್ಥಾನದ ಭಾಗ, ವಾಸ್ತು ಶಿಲ್ಪ, ಹೂತಿಟ್ಟ ವಿಗ್ರಹಗಳನ್ನು ಸಂರಕ್ಷಿಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾಲಯ, ರಾಜ್ಯ ಸರ್ಕಾರ, ಜಿಲ್ಲಾಡಳಿತಕ್ಕೆ ನಿರ್ದೇಶಿಸಬೇಕು ಎಂದೂ ಅವರು ಮನವಿ ಮಾಡಿದರು.

ಅರ್ಜಿದಾರರ ಪರ ವಾದ ಆಲಿಸಿದ ನ್ಯಾಯಾಲಯ, ಇಲ್ಲಿ ಸಂರಕ್ಷಿತ ಸ್ಮಾರಕದ ಕುರಿತು ಪ್ರಶ್ನಿಸಲಾಗಿದೆ. ರಿಟ್ ಅರ್ಜಿಯ ಮೂಲಕ ನ್ಯಾಯ ವ್ಯಾಪ್ತಿಯಲ್ಲಿ ಬದಲಾಯಿಸಲು ಕಷ್ಟ ಸಾಧ್ಯ ಎಂದು ಮೌಖಿಕವಾಗಿ ಅಭಿಪ್ರಾಯಪಟ್ಟಿದೆ. ವಿಚಾರಣೆಯನ್ನು ಜು. 11 ಕ್ಕೆ ಮುಂದೂಡಿದೆ.

ಇದನ್ನೂ ಓದಿ : ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಸ್ಥಾನದಿಂದ ಅಬ್ದುಲ್ ಅಜೀಮ್ ನಾಮನಿರ್ದೇಶನ ಹಿಂಪಡೆದಿದ್ದ ಸರ್ಕಾರದ ಕ್ರಮ ಎತ್ತಿಹಿಡಿದ ಹೈಕೋರ್ಟ್ - Abdul Azim

ETV Bharat Logo

Copyright © 2025 Ushodaya Enterprises Pvt. Ltd., All Rights Reserved.