ETV Bharat / state

ನರ್ಸಿಂಗ್ ಕಾಲೇಜುಗಳಲ್ಲಿ ಹೆಚ್ಚುವರಿ ಶುಲ್ಕ ಆಕ್ಷೇಪಿಸಿ ಅರ್ಜಿ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ - HIGH COURT

ನರ್ಸಿಂಗ್ ಕಾಲೇಜುಗಳಲ್ಲಿ ಹೆಚ್ಚುವರಿ ಶುಲ್ಕದ ಬಗ್ಗೆ ಆಕ್ಷೇಪಿಸಿ ಸಲ್ಲಿಕೆಯಾದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

high court
ಹೈಕೋರ್ಟ್ (ETV Bharat)
author img

By ETV Bharat Karnataka Team

Published : 3 hours ago

ಬೆಂಗಳೂರು: ಕರ್ನಾಟಕ ರಾಜ್ಯದ ಬಹುತೇಕ ಎಲ್ಲ ನರ್ಸಿಂಗ್ ಕಾಲೇಜುಗಳಲ್ಲಿ ನಿಗದಿಗಿಂತ ಹೆಚ್ಚುವರಿ ಶುಲ್ಕವನ್ನು ವಸೂಲು ಮಾಡಲಾಗುತ್ತಿದೆ ಎಂದು ಆಕ್ಷೇಪಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ವೆಲ್ಫೇರ್ ಅಸೋಸಿಯೇಷನ್ ಆಫ್ ಪ್ರೊಪೇಷನಲ್ ಸ್ಕಾಲರ‍್ಸ್ ಇನ್ ಇಂಡಿಯಾ (ವಾಪಸಿ) ಅಧ್ಯಕ್ಷ, ಕೇರಳದ ಸಾಮಾಜಿಕ ಕಾರ್ಯಕರ್ತ ಎಂ.ಕೆ. ಥಾಮಸ್ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾ. ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ಪೀಠ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ರಾಜೀವ ಗಾಂಧಿ ಆರೋಗ್ಯ ವಿಶ್ವ ವಿದ್ಯಾಲಯ, ಕರ್ನಾಟಕ ನರ್ಸಿಂಗ್ ಕೌನ್ಸಿಲ್, ಇಂಡಿಯನ್ ನರ್ಸಿಂಗ್ ಕೌನ್ಸಿಲ್‌ಗೆ ನೋಟಿಸ್ ಜಾರಿ ಮಾಡಿತು. ಅಲ್ಲದೇ, ಅರ್ಜಿಯ ಸಂಬಂಧ ಆಕ್ಷೇಪಣೆ ಸಲ್ಲಿಸಲು ನಿರ್ದೇಶಿಸಿ, ವಿಚಾರಣೆಯನ್ನು ಫೆಬ್ರವರಿ 7ಕ್ಕೆ ಮುಂದೂಡಿತು.

ಕರ್ನಾಟಕದ ಬಹುತೇಕ ನರ್ಸಿಂಗ್ ಕಾಲೇಜುಗಳಲ್ಲಿ ಎಲ್ಲಾ ನಿಯಮಗಳನ್ನು ಉಲ್ಲಂಘಿಸಿ 2009ರಿಂದ ಅವೈಜ್ಞಾನಿಕವಾಗಿ ಹೆಚ್ಚುವರಿ ಶುಲ್ಕ ವಸೂಲಿ ಮಾಡಲಾಗುತ್ತಿದೆ. ಇದೊಂದು ದೊಡ್ಡ ಅಕ್ರಮವಾಗಿದೆ. ಈ ಬಗ್ಗೆ ಸಂಬಂಧಪಟ್ಟವರಿಗೆ ಅನೇಕ ಬಾರಿ ಮನವಿ ಮಾಡಿದರೂ ಕ್ರಮ ಜರುಗಿಸಿಲ್ಲ. ಆದ್ದರಿಂದ ಈ ಶುಲ್ಕ ವಸೂಲಿ ಅಕ್ರಮದ ಬಗ್ಗೆ ಸಿಬಿಐನಿಂದ ಸಮಗ್ರ ತನಿಖೆ ನಡೆಸಬೇಕು ಅಥವಾ ರಾಜ್ಯ ಸರ್ಕಾರದ ತನಿಖಾ ಸಂಸ್ಥೆಗಳಾದ ಸಿಐಡಿ ಲೋಕಾಯುಕ್ತ ಸಂಸ್ಥೆ ಮೂಲಕ ತನಿಖೆ ನಡೆಸಲು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ತಮ್ಮ ಅರ್ಜಿಯಲ್ಲಿ ಕೋರಿದ್ದಾರೆ.

ಇದನ್ನೂ ಓದಿ: ಪತಿಯಿಂದ ದೂರವಿದ್ದು, ವೈವಾಹಿಕ ಸುಖಭೋಗಕ್ಕೆ ಅಡ್ಡಿಪಡಿಸುವುದು ಕ್ರೌರ್ಯಕ್ಕೆ ಸಮ: ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.