ETV Bharat / state

ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ವಾಲ್ಮೀಕಿ ನಿಗಮದ ಹಗರಣ ತನಿಖೆಗೆ ಕೋರಿ ಬಿಜೆಪಿ ಮುಖಂಡರ ಅರ್ಜಿ: ಸಿಬಿಐಗೆ ನೋಟಿಸ್ - VALMIKI CORPORATION SCAM

ಮಹರ್ಷಿ ವಾಲ್ಮೀಕಿ ನಿಗಮ ಹಗರಣದ ತನಿಖೆಯನ್ನು ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ನಡೆಸುವಂತೆ ಸಿಬಿಐಗೆ ನಿರ್ದೇಶನ ನೀಡಬೇಕೆಂದು ಬಿಜೆಪಿ ಮುಖಂಡರು ಕೋರಿದ್ದ ಅರ್ಜಿ ಸಂಬಂಧ ಸಿಬಿಐಗೆ ನೋಟಿಸ್ ಜಾರಿಯಾಗಿದೆ.

high court
ಹೈಕೋರ್ಟ್ (ETV Bharat)
author img

By ETV Bharat Karnataka Team

Published : Nov 22, 2024, 7:04 PM IST

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದ ತನಿಖೆಯನ್ನು ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ನಡೆಸುವಂತೆ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ನಿರ್ದೇಶನ ನೀಡಬೇಕು ಎಂದು ಕೋರಿ ಬಿಜೆಪಿ ಮುಖಂಡರಾದ ಬಸವನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಅರವಿಂದ ಲಿಂಬಾವಳಿ ಮತ್ತು ಕುಮಾರ್ ಬಂಗಾರಪ್ಪ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಸಿಬಿಐಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಮುಂದೂಡಿದೆ. ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ವೆಂಕಟೇಶ್ ದಳವಾಯಿ, ''ಪ್ರಕರಣ ಸಂಬಂಧ ಈಗಾಗಲೇ ಸಿಬಿಐ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ. ಪ್ರಕರಣದಲ್ಲಿ ರಾಜಕಾರಣಿಗಳು ಮತ್ತು ಹಿರಿಯ ಅಧಿಕಾರಿಗಳ ವಿರುದ್ಧ ಸರಿಯಾದ ರೀತಿಯಲ್ಲಿ ತನಿಖೆಯಾಗಬೇಕಾದರೆ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ನಡೆಯಬೇಕು'' ಎಂದರು.

''ದೀನದಲಿತರಿಗೆ ಸೇರಬೇಕಾದ ಹಣವನ್ನು ಲೂಟಿ ಮಾಡಲಾಗಿದೆ. ಇದಕ್ಕೆ ಪ್ರಮುಖ ಕಾರಣರಾದವರನ್ನೂ ಈವರೆಗೂ ವಿಚಾರಣೆಗೆ ಒಳಪಡಿಸಿಲ್ಲ. ಈ ಹಿನ್ನೆಲೆಯಲ್ಲಿ ತನಿಖೆಯಲ್ಲಿ ಯಾವುದೇ ಹಸ್ತಕ್ಷೇಪ ಮಾಡದೇ ಮೇಲ್ವಿಚಾರಣೆ ಮಾಡವುದಕ್ಕೆ ಹೈಕೋರ್ಟ್‌ಗೆ ಅಧಿಕಾರವಿದೆ'' ಎಂದು ಪೀಠಕ್ಕೆ ತಿಳಿಸಿದರು.

''2024ರ ಜೂನ್ 2ರಂದು ಸಿಬಿಐ ದಾಖಲಿಸಿರುವ ಪ್ರಕರಣ ಸಂಬಂಧ ಆದಷ್ಟು ಶೀಘ್ರದಲ್ಲಿ ತನಿಖಾ ವರದಿ ಸಲ್ಲಿಸುವಂತೆ ಸಿಬಿಐಗೆ ಸೂಚಿಸುವಂತೆ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ನಿರ್ದೇಶನ ನೀಡಬೇಕು. ಅಲ್ಲದೇ, ತನಿಖಾ ವರದಿಯನ್ನು 15 ದಿನಗಳಿಗೆ ಒಮ್ಮೆ ಹೈಕೋರ್ಟ್‌ಗೆ ಸಲ್ಲಿಸಲು ನಿರ್ದೇಶನ ನೀಡಬೇಕು'' ಎಂದು ಕೋರಿದರು.

ವಾದ ಆಲಿಸಿದ ಪೀಠ, ಸಿಬಿಐಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿತು.

ಇದನ್ನೂ ಓದಿ: ಜಿಪಂ ಮಾಜಿ ಸದಸ್ಯೆ ಮೇಲೆ ಅತ್ಯಾಚಾರ: ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.