ETV Bharat / state

ಪಾಲಿಕೆ ಮಾಲೀಕತ್ವದ ಕಟ್ಟಡಗಳಲ್ಲಿ ಜನಪ್ರತಿನಿಧಿಗಳ ಫೋಟೋ ಹಾಕಲು ಆಕ್ಷೇಪ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ - High Court

ಬಿಬಿಎಂಪಿ ಕಟ್ಟಡದಲ್ಲಿ ಜನಪ್ರತಿನಿಧಿಗಳ ಫೋಟೋ ತೆರವು ಕುರಿತು ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರ ಮತ್ತು ಪಾಲಿಕೆಗೆ ಹೈಕೋರ್ಟ್ ನೋಟಿಸ್ ನೀಡಿದೆ.

Etv Bharat
Etv Bharat
author img

By ETV Bharat Karnataka Team

Published : Apr 4, 2024, 8:10 PM IST

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಾಲೀಕತ್ವದ ಕಟ್ಟಡಗಳಲ್ಲಿ ಚುನಾಯಿತ ಪ್ರತಿನಿಧಿಗಳ ಚಿತ್ರ ಪ್ರಕಟಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಸಂಬಂಧ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಬೆಂಗಳೂರಿನ ಗೋವಿಂದರಾಜ ನಗರ ಮತ್ತು ವಿಜಯನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಬಿಎಂಪಿ ಅನುದಾನದಲ್ಲಿ ನಿರ್ಮಿಸಿರುವ ಆಡಳಿತಾತ್ಮಕ ಕಟ್ಟಡ, ಉದ್ಯಾನ, ಧ್ಯಾನ ಮಂದಿರ, ಕ್ರೀಡಾಂಗಣದಲ್ಲಿ ಹಾಲಿ ಶಾಸಕರಾದ ಪ್ರಿಯಕೃಷ್ಣ ಮತ್ತು ಎಂ.ಕೃಷ್ಣಪ್ಪ ಅವರ ಚಿತ್ರ ತೆರವು ಮಾಡಲು ಅಧಿಕಾರಿಗಳಿಗೆ ನಿರ್ದೇಶಿಸುವಂತೆ ಕೋರಿ ಮೂಡಳಪಾಳ್ಯದ ಶಿವಾನಂದ ನಗರದ ನಿವಾಸಿ ಹೆಚ್.ಎಂ.ಆರ್ತೀಸ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ಪೀಠ, ಪ್ರಕರಣದಲ್ಲಿ ಪ್ರತಿವಾದಿಯಾಗಿರುವ ರಾಜ್ಯ ಸರ್ಕಾರದ ನಗರಾಭಿವೃದ್ಧಿ ಇಲಾಖೆ ಮತ್ತು ಬಿಬಿಎಂಪಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.

ಇದನ್ನೂ ಓದಿ: ಒಪ್ಪಂದ ವಿವಾಹ ವಿಚ್ಛೇದನ ಮಂಜೂರು ಮಾಡಲು ಕೌಟುಂಬಿಕ ನ್ಯಾಯಾಲಯಕ್ಕೆ ಅಧಿಕಾರವಿದೆ: ಹೈಕೋರ್ಟ್ - Consensual Divorce

ರಾಷ್ಟ್ರಪತಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ, ಪ್ರಧಾನಮಂತ್ರಿ, ಮುಖ್ಯಮಂತ್ರಿ ಮತ್ತು ಇಲಾಖಾ ಸಚಿವರ ಚಿತ್ರಗಳನ್ನು ಹೊರತುಪಡಿಸಿ, ಸಂಸದರು, ಶಾಸಕರು ಸೇರಿದಂತೆ ಬೇರೆ ಯಾವುದೇ ಜನ ಪ್ರತಿನಿಧಿಗಳ ಚಿತ್ರಗಳನ್ನು ಸರ್ಕಾರದ ಕಟ್ಟಡಗಳಲ್ಲಿ ಪ್ರಕಟಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ. ಅದಾಗ್ಯೂ, ಪ್ರಿಯಕೃಷ್ಣ ಮತ್ತು ಕೃಷ್ಣಪ್ಪ ಅವರ ಚಿತ್ರಗಳನ್ನು ಬಿಬಿಎಂಪಿ ವ್ಯಾಪ್ತಿಯ ಕಟ್ಟಡಗಳಲ್ಲಿ ಬಳಕೆ ಮಾಡಿರುವ ವಿಚಾರವನ್ನು ಅಧಿಕಾರಿಗಳಿಗೆ ಗಮನಕ್ಕೆ ತರಲಾಗಿದೆ. ಆದರೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಆದ್ದರಿಂದ ತಕ್ಷಣ ಅವರ ಚಿತ್ರಗಳನ್ನು ತೆರವುಗೊಳಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಅಲ್ಲದೆ, ಈ ಸಂಬಂಧ ಗಮನಕ್ಕೆ ತಂದರೂ ಕ್ರಮಕ್ಕೆ ಮುಂದಾಗದ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಇದನ್ನೂ ಓದಿ: ಹೈಕೋರ್ಟ್​ ಜಡ್ಜ್​ ಮುಂದೆ ಕತ್ತಿಗೆ ಗಾಯ ಮಾಡಿಕೊಂಡ ವ್ಯಕ್ತಿಯ ವಿರುದ್ಧ ಕೇಸ್​ ದಾಖಲು - KARNATAKA HIGH COURT

ETV Bharat Logo

Copyright © 2024 Ushodaya Enterprises Pvt. Ltd., All Rights Reserved.