ETV Bharat / state

ಕೆಎಸ್‌ಎಟಿ ಸದಸ್ಯರ ನೇಮಕ ಕೋರಿ ಅರ್ಜಿ ಸಲ್ಲಿಕೆ: ಸರ್ಕಾರಕ್ಕೆ ನೋಟಿಸ್ ಜಾರಿ - KSAT - KSAT

ಕೆಎಸ್​ಎಟಿಗೆ ಸದಸ್ಯರನ್ನು ನೇಮಕ ಮಾಡಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿ ಸಂಬಂಧ ಹೈಕೋರ್ಟ್​ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

high-court
ಹೈಕೋರ್ಟ್​ (ETV Bharat)
author img

By ETV Bharat Karnataka Team

Published : Jun 25, 2024, 10:40 PM IST

ಬೆಂಗಳೂರು: ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ(ಕೆಎಸ್‌ಎಟಿ)ಗೆ ಸದಸ್ಯರನ್ನು ನೇಮಕ ಮಾಡಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿತು.

ವಕೀಲ ನರಸಿಂಹರಾಜು ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ಹೊರಹಾಕಿದೆ.

ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಹಾಗೂ ಕರ್ನಾಟಕ ಆಡಳಿತ ನ್ಯಾಯಮಂಡಳಿಯ ರಿಜಿಸ್ಟ್ರಾರ್‌ಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಜುಲೈ 9ಕ್ಕೆ ಮುಂದೂಡಲಾಗಿದೆ.

ಕರ್ನಾಟಕ ಆಡಳಿತ ನ್ಯಾಯಮಂಡಳಿಯು ಬೆಂಗಳೂರಿನ ಪ್ರಧಾನ ಪೀಠ ಸೇರಿದಂತೆ ಕಲಬುರಗಿ ಹಾಗೂ ಬೆಳಗಾವಿಯಲ್ಲಿ ಪೀಠಗಳನ್ನು ಹೊಂದಿದೆ. ರಾಜ್ಯದ 17 ಜಿಲ್ಲೆಗಳು ಬೆಂಗಳೂರಿನ ಪ್ರಧಾನ ಪೀಠದ ವ್ಯಾಪ್ತಿಗೆ ಬರುತ್ತವೆ. ಸದ್ಯ ಪೀಠದಲ್ಲಿ ಅಧ್ಯಕ್ಷ ಸೇರಿ ಮೂವರು ನ್ಯಾಯಾಂಗ ಸದಸ್ಯರಿದ್ದಾರೆ.

ಈ ಪೈಕಿ ಟಿ.ನಾರಾಯಣಸ್ವಾಮಿ ಈಗಾಗಲೇ ನಿವೃತ್ತರಾಗಿದ್ದರೂ 2022ರ ಅ.10ರ ಮಧ್ಯಂತರ ಆದೇಶದಂತೆ ಸೇವೆಯಲ್ಲಿ ಮುಂದುವರೆದಿದ್ದಾರೆ. ಮತ್ತೋರ್ವ ಸದಸ್ಯ ನಾರಾಯಣಸ್ವಾಮಿ 2024ರ ಜೂ. 16ರಂದು ನಿವೃತ್ತರಾಗಿದ್ದಾರೆ. ಹೊಸ ನೇಮಕಾತಿ ಆಗುವ ತನಕ ಮುಂದುವರಿಯಲು ನಾರಾಯಣಸ್ವಾಮಿ ಆಸಕ್ತಿ ಹೊಂದಿದ್ದರೂ, ಬೇಡ ಎಂದು ಕೇಂದ್ರೀಯ ಆಡಳಿತ ನ್ಯಾಯ ಮಂಡಳಿ ಹೇಳಿದೆ. ಹೀಗಾಗಿ ಬೆಂಗಳೂರು ಪ್ರಧಾನ ಪೀಠದ ಕಾರ್ಯಾಚರಣೆಗೆ ತೊಂದರೆ ಆಗುತ್ತಿದೆ. ಪ್ರಧಾನ ಪೀಠದಲ್ಲಿ 2,100 ಕೇಸ್‌ಗಳು ಬಾಕಿ ಇವೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಆದ್ದರಿಂದ ಕೆಎಸ್‌ಎಟಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು ಹಾಗೂ ಸದಸ್ಯರನ್ನು ನೇಮಕ ಮಾಡಬೇಕು. ಹಾಲಿ ಸದಸ್ಯರ ಸೇವಾವಧಿ ಮುಗಿಯುವ 6 ತಿಂಗಳ ಮುಂಚಿತವಾಗಿ ಹೊಸ ಸದಸ್ಯರ ನೇಮಕ ಪ್ರಕ್ರಿಯೆಯ ಮೇಲ್ವಿಚಾರಣೆಗೆ ವಿಶೇಷ ಸಮಿತಿ ರಚಿಸಬೇಕು. ಹೊಸ ಸದಸ್ಯರ ನೇಮಕ ಆಗುವತನಕ ನಾರಾಯಣಸ್ವಾಮಿ ಅವರನ್ನು ಸೇವೆಯಲ್ಲಿ ಮುಂದುವರಿಸಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಇದನ್ನೂ ಓದಿ: ಏಕಲವ್ಯ ಪ್ರಶಸ್ತಿಗೆ ರಾಜ್ಯ ಸರ್ಕಾರದ ಮಾರ್ಗಸೂಚಿಗಳ ಬಗ್ಗೆ ಮಧ್ಯಪ್ರವೇಶಕ್ಕೆ ಹೈಕೋರ್ಟ್ ನಕಾರ - HC refuses to intervene

ETV Bharat Logo

Copyright © 2024 Ushodaya Enterprises Pvt. Ltd., All Rights Reserved.