ETV Bharat / state

ಅತ್ಯಾಚಾರ ಮತ್ತು ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶರಣರ ವಿರುದ್ಧ ಆರೋಪ ಮರು ನಿಗದಿಗೆ ಸೂಚಿಸಿದ ಹೈಕೋರ್ಟ್

ಡಾ.ಶಿವಮೂರ್ತಿ ಮುರುಘಾ‌ಶರಣರ ವಿರುದ್ಧ ಅತ್ಯಾಚಾರ ಮತ್ತು ಪೋಕ್ಸೋ ಪ್ರಕರಣ ಸಂಬಂಧದ‌ ಆರೋಪವನ್ನು ಮರು ನಿಗದಿ ಮಾಡಲು ಹೈಕೋರ್ಟ್ ವಿಶೇಷ ನ್ಯಾಯಾಲಯಕ್ಕೆ ಆದೇಶಿಸಿದೆ.

high-court-order-on-rape-and-pocso-cases-against-muruga-shree
ಮುರುಘಾಶರಣರ ವಿರುದ್ಧದ ಅತ್ಯಾಚಾರ, ಪೋಕ್ಸೋ ಪ್ರಕರಣಗಳ ವಿಚಾರಣೆಗೆ ಹೈಕೋರ್ಟ್ ಅಸ್ತು
author img

By ETV Bharat Karnataka Team

Published : Mar 11, 2024, 4:06 PM IST

Updated : Mar 11, 2024, 7:46 PM IST

ಬೆಂಗಳೂರು: ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಮುರುಘಾ‌ಶರಣರ ವಿರುದ್ಧ ಅತ್ಯಾಚಾರ ಮತ್ತು ಪೋಕ್ಸೋ ಪ್ರಕರಣ ಸಂಬಂಧದ‌ ಆರೋಪವನ್ನು ಮರು ನಿಗದಿ ಮಾಡಲು ಹೈಕೋರ್ಟ್ ವಿಶೇಷ ನ್ಯಾಯಾಲಯಕ್ಕೆ ಆದೇಶಿಸಿದೆ. 2023ರ ಏಪ್ರಿಲ್ 13 ಮತ್ತು 20 ರಂದು ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಚಿತ್ರದುರ್ಗದ ವಿಶೇಷ ನ್ಯಾಯಾಲಯವು ತಮ್ಮ ವಿರುದ್ಧ ಆರೋಪ ನಿಗದಿ ಮಾಡಿರುವ ಆದೇಶಗಳನ್ನು ವಜಾ ಮಾಡುವಂತೆ ಕೋರಿ ಡಾ. ಶಿವಮೂರ್ತಿ ಮುರುಘಾ ಶರಣರು ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠವು ಭಾಗಶಃ ಪುರಸ್ಕರಿಸಿದೆ.

ಜೊತೆಗೆ, ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯಿದೆಯ ವಿವಿಧ ಕಾಯಿದೆಗಳಡಿ ದಾಖಲಾಗಿರು ಆರೋಪಗಳು ಮುರುಘಾಮಠಕ್ಕೆ ಅನ್ವಯಿಸುವುದಿಲ್ಲ. ಅಲ್ಲದೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಮೇಲಿನ ದೌರ್ಜನ್ಯ ತಡೆ ಕಾಯಿದೆ‌ ಹಾಗೂ ಬಾಲ ನ್ಯಾಯ (ಮಕ್ಕಳ ಸಂರಕ್ಷಣೆ ಹಾಗೂ ಆರೈಕೆ) ಕಾಯಿದೆ–2015ರ ಸೆಕ್ಷನ್ 75 ಅರ್ಜಿದಾರರಿಗೆ ಅನ್ವಯಿಸುವುದಿಲ್ಲ ಎಂದು ಪೀಠ ಹೇಳಿದೆ. ಅಲ್ಲದೇ, ಅರ್ಜಿದಾರರ ವಿರುದ್ಧ ತಪ್ಪಾಗಿ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ವರದಿಯಾಗುವುದಕ್ಕೂ ಮುನ್ನ ಮೂರೂವರೆ ವರ್ಷಗಳ ಹಿಂದೆ ಸಾಕ್ಷ್ಯ ನಾಶಪಡಿಸಲಾಗಿದ್ದು, ಐಪಿಸಿ ಸೆಕ್ಷನ್ 201ರ ಅಡಿ ತಪ್ಪಾಗಿ ಸಾಕ್ಷ್ಯ ನಾಶ ಆರೋಪ ಹೊರಿಸಲಾಗಿದೆ. ಈ ಆರೋಪಗಳ ಅಡಿ ದಾಖಲಾಗಿದ್ದ ಆರೋಪವನ್ನು ರದ್ದು ಪಡಿಸುತ್ತಿರುವುದಾಗಿ ಪೀಠ ತಿಳಿಸಿದೆ.

ಆದರೆ, ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದ ಐಪಿಸಿ ಸೆಕ್ಷನ್ 376(2)ಎನ್ ಮತ್ತು ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯಿದೆ–2012ರ ಸೆಕ್ಷನ್ 4 ಮತ್ತು 6ರ ಅಡಿ ಆರೋಪ ಮುಂದುವರಿಯಲಿದೆ ಪೀಠ ತನ್ನ ಆದೇಶದಲ್ಲಿ ಹೇಳಿದೆ. ಮರು ಆರೋಪ ನಿಗದಿ ಮಾಡಲು ಪ್ರಕರಣವನ್ನು ವಿಚಾರಣಾಧೀನ ನ್ಯಾಯಾಲಯಕ್ಕೆ ಮರಳಿಸಲಾಗಿದೆ. ವಿಶೇಷ ನ್ಯಾಯಾಲಯವು ತಪ್ಪೆಸಗಿರುವ ಅಪರಾಧಗಳ ಕುರಿತು ವ್ಯಕ್ತಪಡಿಸಿರುವ ಅಭಿಪ್ರಾಯ ಗಮನದಲ್ಲಿರಿಸಿಕೊಳ್ಳಬೇಕು. ಮತ್ತೆ ಆರೋಪ ನಿಗದಿ ಮಾಡಿದ ಬಳಿಕ ವಿಶೇಷ ನ್ಯಾಯಾಲಯ ವಿಚಾರಣೆ ಮುಂದುವರಿಸಬಹುದಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಅಲ್ಲದೆ, ಪ್ರಾಸಿಕ್ಯೂಷನ್ ಬಿಂಬಿಸಿದ್ದನ್ನು ಆಧರಿಸಿ ಆರೋಪ ನಿಗದಿ ಮಾಡುವಾಗ ವಿಶೇಷ ನ್ಯಾಯಾಲಯವು ಕೇವಲ ಅಂಚೆ ಕಚೇರಿಯಂತೆ ಕಾರ್ಯನಿರ್ವಹಿಸಬಾರದು ಎಂದು ತಿಳಿಸಿದೆ.

ಪ್ರಕರಣದ ಹಿನ್ನೆಲೆ ಏನು?: ಮುರುಘಾ ಶರಣರು ನಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಇಬ್ಬರು ಬಾಲಕಿಯರು, ಮೈಸೂರಿನ ನಜರ್ಬಾದ್ ಪೊಲೀಸ್ ಠಾಣೆಯಲ್ಲಿ 2022ರ ಆಗಸ್ಟ್ 26ರಂದು ದೂರು ದಾಖಲಿಸಿದ ನಂತರ ಪೊಲೀಸರು ಶರಣರನ್ನು 2022ರ ಸೆಪ್ಟೆಂಬರ್ 1ರಂದು ಬಂಧಿಸಿದ್ದರು. ಆನಂತರ ಮತ್ತಿಬ್ಬರು ಬಾಲಕಿಯರು ಮುರುಘಾ ಶರಣರ ವಿರುದ್ದ ಲೈಂಗಿಕ ಕಿರುಕುಳ ಆರೋಪ ಮಾಡಿದ್ದರು. ಈ ಪ್ರಕರಣದಲ್ಲಿ 2023ರ ನವೆಂಬರ್‌ನಲ್ಲಿ ಶರಣರಿಗೆ ಹೈಕೋರ್ಟ್‌ನಿಂದ ಜಾಮೀನು ದೊರೆತಿದ್ದು, ಚಿತ್ರದುರ್ಗ ಪ್ರವೇಶ ನಿರ್ಬಂಧಿಸಲಾಗಿದೆ.

ಅಲ್ಲದೆ, ಮುರುಘಾಶರಣರ ವಿರುದ್ಧ ದಾಖಲಾಗಿದ್ದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ‌ ದೌರ್ಜನ್ಯ ವಿರುದ್ಧದ ಆರೋಪ, ಬಾಲಾಪರಾಧ ಕಾಯಿದೆಯಡಿ ದಾಖಲಾಗಿದ್ದ ಪ್ರಕರಣ ಹಾಗೂ ಧಾರ್ಮಿಕ ಸಂಸ್ಥೆಗಳ ದುರುಪಯೋಗ ಆರೋಪದ ಪ್ರಕರಣವನ್ನು ರದ್ದುಪಡಿಸಿ ಆದೇಶಿಸಿದೆ.
ಈ ಆದೇಶದಿಂದ ಮುರುಘಾ ಶರಣರು ಅತ್ಯಾಚಾರ ಹಾಗೂ ಪೋಕ್ಸೋ ಪ್ರಕರಣದ ವಿಚಾರಣೆಯನ್ನು ಎದುರಿಸಬೇಕಾದ ಅನಿವಾರ್ಯತೆ ಉಂಟಾಗಿದೆ.

ಇದನ್ನೂ ಓದಿ: ಮಾದಕ ದ್ರವ್ಯ ಮಾರಾಟ: ಇಬ್ಬರು ಆರೋಪಿಗಳಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್

Last Updated : Mar 11, 2024, 7:46 PM IST

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.