ETV Bharat / state

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಸತ್ಯನಾರಾಯಣ ವರ್ಮಾ ಇಡಿ ವಶಕ್ಕೆ ನೀಡಲು ಹೈಕೋರ್ಟ್ ಆದೇಶ - High Court

author img

By ETV Bharat Karnataka Team

Published : Aug 9, 2024, 10:56 PM IST

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಆರೋಪಿ ಸತ್ಯನಾರಾಯಣ ವರ್ಮಾ ಅವರನ್ನು ಇದೇ 13ರಂದು ಜಾರಿ ನಿರ್ದೇಶನಾಲಯದ (ಇಡಿ) ಕಸ್ಟಡಿಗೆ ನೀಡುವಂತೆ ಎಸ್‌ಐಟಿಗೆ ಹೈಕೋರ್ಟ್ ಆದೇಶಿಸಿದೆ.

ಹೈಕೋರ್ಟ್
ಹೈಕೋರ್ಟ್ (ETV Bharat)

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸತ್ಯನಾರಾಯಣ ವರ್ಮಾ ಅವರನ್ನು ಆಗಸ್ಟ್ 13ರಂದು ತನಿಖೆಗಾಗಿ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಬೇಕು ಎಂದು ವಿಶೇಷ ತನಿಖಾ ದಳಕ್ಕೆ (ಎಸ್‌ಐಟಿ) ಹೈಕೋರ್ಟ್ ಆದೇಶಿಸಿದೆ.

ಆಗಸ್ಟ್ 2ರಂದು ಸತ್ಯನಾರಾಯಣ ವರ್ಮಾ ಅವರನ್ನು ಎಸ್‌ಐಟಿ ಕಸ್ಟಡಿಗೆ ನೀಡಿರುವ ಆದೇಶ ರದ್ದುಪಡಿಸುವಂತೆ ಕೋರಿ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಎಂ.ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠ ಈ ಆದೇಶ ನೀಡಿದೆ.

ಸತ್ಯನಾರಾಯಣ ವರ್ಮಾ ಅವರ ಎಸ್‌ಐಟಿ ಕಸ್ಟಡಿ ಅವಧಿಯು ಆಗಸ್ಟ್ 12ರಂದು ಸಂಜೆ ಮುಗಿಯುತ್ತದೆ. ಆಗಸ್ಟ್ 13ರಿಂದ ಅವರನ್ನು ಜಾರಿ ನಿರ್ದೇಶನಾಲಯದ ವಶಕ್ಕೆ ಒಪ್ಪಿಸುವ ಸಂಬಂಧ ತನಿಖಾಧಿಕಾರಿಗಳು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ (ಇಡಿ ನ್ಯಾಯಾಲಯ) ಮುಂದೆ ಹಾಜರುಪಡಿಸಬೇಕು ಎಂದು ಪೀಠ ತಿಳಿಸಿದೆ.

ಇಡಿ ಪರ ವಾದ ಮಂಡಿಸಿದ್ದ ವಿಶೇಷ ಸರ್ಕಾರಿ ಅಭಿಯೋಜಕರಾದ ಪಿ ಪ್ರಸನ್ನ ಕುಮಾರ್, ವರ್ಮಾ ವಿರುದ್ಧ ಇಡಿ ನ್ಯಾಯಾಲಯ ಬಾಡಿ ವಾರೆಂಟ್ ಜಾರಿ ಮಾಡಿರುವುದು ಬಾಕಿ ಇರುವಾಗ ಅದನ್ನು ಈ ರೀತಿ ಮಾಡಲಾಗದು. ಇಂದೂ ಸಹ ವಿಶೇಷ ನ್ಯಾಯಾಲಯ ಬಾಡಿ ವಾರೆಂಟ್ ಜಾರಿ ಮಾಡಿದೆ ಎಂದು ಪೀಠಕ್ಕೆ ವಿವರಿಸಿದರು.

ಎಸ್‌ಐಟಿ ಪರವಾಗಿ ಹಾಜರಾಗಿದ್ದ ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ ಬಿ.ಎನ್.ಜಗದೀಶ್, ಆಗಸ್ಟ್ 22ರಂದು ಇಡಿ ನ್ಯಾಯಾಲಯವು ಬಾಡಿ ವಾರೆಂಟ್ ಆದೇಶ ಮಾಡಿದಾಗ ಇಡಿ ವಕೀಲರು ವರ್ಮಾ ಪೊಲೀಸ್ ಕಸ್ಟಡಿಯಲ್ಲಿದ್ದಾರೆ ಎಂದು ಸಂಬಂಧಿತ ನ್ಯಾಯಾಲಯಕ್ಕೆ ತಿಳಿಸಿಲ್ಲ. ಈಗ ವರ್ಮಾ ಅವರ ಕಸ್ಟಡಿ ಅವಧಿಯು ಆಗಸ್ಟ್ 12ರಂದು ಮುಗಿಯುತ್ತದೆ. ಆಮೇಲೆ ಇಡಿ ವಶಕ್ಕೆ ತೆಗೆದುಕೊಳ್ಳಬಹುದು. ಉಳಿದ ಎಲ್ಲಾ ಆರೋಪಿಗಳನ್ನು ಅವರು ಕಸ್ಟಡಿಗೆ ಪಡೆದಿದ್ದಾರೆ. ಸದ್ಯ ಪ್ರಕರಣದಲ್ಲಿ 49 ಕೋಟಿ ಜಪ್ತಿ ಮಾಡಿದ್ದೇವೆ. ಇನ್ನೂ 30ಕ್ಕೂ ಹೆಚ್ಚು ಕೋಟಿ ಜಪ್ತಿ ಮಾಡಬೇಕಿದೆ. ವರ್ಮಾ ಅವರೇ ಹಗರಣದ ಪ್ರಮುಖ ರುವಾರಿ ಎಂದು ಪೀಠಕ್ಕೆ ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.