ETV Bharat / state

ಶಾಲೆಗಳಲ್ಲಿ ಸುರಕ್ಷತಾ ನಿಯಮಗಳ ಪಾಲನೆ: ಪೋರ್ಟಲ್​ ಪ್ರಾರಂಭಿಸುವಂತೆ ಶಿಕ್ಷಣ ಇಲಾಖೆಗೆ ಹೈಕೋರ್ಟ್ ಸೂಚನೆ - SAFETY RULES IN STATE SCHOOLS

ರಾಜ್ಯದ ಶಾಲೆಗಳಲ್ಲಿ ಸುರಕ್ಷತಾ ನಿಯಮಗಳ ಪಾಲನೆಯ ಕುರಿತು ವಿವರಗಳನ್ನು ಅಪ್​ಲೋಡ್ ಮಾಡಲು ಸಾರ್ವಜನಿಕ ಶಿಕ್ಷಣ ಇಲಾಖೆ ಪೋರ್ಟಲ್ ಪ್ರಾರಂಭಿಸಬೇಕು ಎಂದು ಹೈಕೋರ್ಟ್​ ನಿರ್ದೇಶನ ನೀಡಿದೆ.

high-court
ಹೈಕೋರ್ಟ್ (ETV Bharat)
author img

By ETV Bharat Karnataka Team

Published : 6 hours ago

ಬೆಂಗಳೂರು: ರಾಜ್ಯದಲ್ಲಿ ಖಾಸಗಿ ಶಾಲೆಗಳೂ ಸೇರಿದಂತೆ ಎಲ್ಲಾ ಶಾಲೆಗಳು ಕಟ್ಟಡ ಸುರಕ್ಷತಾ ಮತ್ತು ಅಗ್ನಿ ಸುರಕ್ಷತಾ ನಿಯಮಗಳ ಪಾಲನೆಯ ಬಗ್ಗೆ ವಿವರಗಳನ್ನು ಅಪ್‌ಲೋಡ್‌ ಮಾಡಲು ಸಾರ್ವಜನಿಕ ಶಿಕ್ಷಣ ಇಲಾಖೆ ಒಂದು ಪೋರ್ಟಲ್‌ ಅಭಿವೃದ್ಧಿಪಡಿಸಬೇಕು ಎಂದು ಹೈಕೋರ್ಟ್ ಸೂಚನೆ ನೀಡಿದೆ.

ಸರ್ಕಾರದ ಸುತ್ತೋಲೆಯನ್ನು ಪ್ರಶ್ನಿಸಿ ಅನುದಾನರಹಿತ ಮಾನ್ಯತೆ ಪಡೆದ ಶಾಲೆಗಳ ಸಂಸ್ಥೆಯ ಕಾರ್ಯದರ್ಶಿ ಪ್ರಭಾಕರ ಅರಸ್‌ ಸೇರಿದಂತೆ ಮತ್ತಿತರ ಹಲವು ಶಾಲೆಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜು ಅವರಿದ್ದ ಏಕ ಸದಸ್ಯಪೀಠ ನಡೆಸಿತು.

ಈ ಪೋರ್ಟಲ್​ನಲ್ಲಿ ಎಲ್ಲಾ ಶಾಲೆಗಳು ನಿಯಮಗಳ ಪಾಲನೆ ಬಗ್ಗೆ ಮಾಹಿತಿಯನ್ನು ಅಪ್‌ಲೋಡ್‌ ಮಾಡಬೇಕು. ಮತ್ತು ಆ ಕುರಿತು ಆರು ವಾರಗಳಲ್ಲಿ ಶಿಕ್ಷಣ ಇಲಾಖೆ ಕ್ರಿಯಾಯೋಜನೆ ಸಿದ್ದಪಡಿಸಿ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಹೇಳಿದೆ.

ಅಲ್ಲದೆ, ನ್ಯಾಯಾಲಯ ಕಟ್ಟಡ ನಿಯಮಗಳು, ಕಾನೂನು, ನಿಬಂಧನೆಗಳ ನಿಯಮಗಳನ್ನು ಪಾಲನೆ ಮಾಡಲು ಶಾಲೆಗಳಿಗೆ ಮುಂದಿನ ಶೈಕ್ಷಣಿಕ ವರ್ಷ ಆರಂಭವಾಗುವವರೆಗೆ ಕಾಲಾವಕಾಶ ನೀಡಿದೆ. ಖಾಸಗಿ ಶಾಲೆಗಳು ಇಷ್ಟು ವರ್ಷದಿಂದ ಶಿಕ್ಷಣ ಸೇವೆ ಒದಗಿಸಿವೆ. ಏಕಾಏಕಿ ಅವುಗಳ ಮೇಲೆ ಒತ್ತಡ ಹೇರಲಾಗದು. ಇಲಾಖೆ ಸಮಯಾವಕಾಶ ನೀಡಬೇಕಾಗುತ್ತದೆ ಎಂದು ಕೋರ್ಟ್ ತಿಳಿಸಿದೆ.

ಶಿಕ್ಷಣ ಇಲಾಖೆಯ ಸುತ್ತೋಲೆ ಎತ್ತಿ ಹಿಡಿದ ಹೈಕೋರ್ಟ್: ಖಾಸಗಿ ಶಾಲೆಗಳ ಮಾನ್ಯತೆ ನವೀಕರಣಕ್ಕಾಗಿ ಶಾಲಾ ಕಟ್ಟಡದ ಸುರಕ್ಷತೆ ಪ್ರಮಾಣ ಪತ್ರ ಮತ್ತು ನಕ್ಷೆ ಅನುಮೋದನೆ, ಅಗ್ನಿ ಸುರಕ್ಷತಾ ಪ್ರಮಾಣಪತ್ರಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ 2022ರ ಜೂ.6ರಂದು ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್‌ ಎತ್ತಿಹಿಡಿದಿದ್ದು, ಈ ನಿಯಮಗಳನ್ನು ಸರ್ಕಾರಿ ಶಾಲೆಗಳೂ ಸಹ ಪಾಲಿಸಬೇಕು ಎಂದು ಸ್ಪಷ್ಟಪಡಿಸಿದೆ.

ಅಲ್ಲದೆ, ಶಾಲೆಗಳಲ್ಲಿ ಅಕಸ್ಮಾತ್‌ ಅವಘಡಗಳು ಸಂಭವಿಸಿದರೆ ಅಂತಹ ಸಂದರ್ಭಗಳಲ್ಲಿ ಮಕ್ಕಳಿಗೆ ವಿಪತ್ತುಗಳನ್ನು ಎದುರಿಸುವುದನ್ನು ಸುಲಭವಾಗಿ ತಿಳಿಸಿಕೊಡಲಾಗದು ಎನ್ನುವ ಉದ್ದೇಶದಿಂದ ಸುತ್ತೋಲೆಯನ್ನು ಹೊರಡಿಸಲಾಗಿದೆ ಎಂದು ಪೀಠ ಹೇಳಿದೆ.

ಶಾಲೆಯ ಮಾನ್ಯತೆ 10 ವರ್ಷಗಳ ಅವಧಿಗೆ ಇರುತ್ತದೆ. ಆದರೆ ಸರ್ಕಾರ 2022ನೇ ವರ್ಷಕ್ಕೆ ಮಾತ್ರ ಕಟ್ಟಡ ಸುರಕ್ಷತಾ ಪ್ರಮಾಣಪತ್ರ, ನಕ್ಷೆ ಅನುಮೋದನೆ ಮತ್ತು ಅಗ್ನಿ ಶಾಮಕ ಇಲಾಖೆ ಪ್ರಮಾಣಪತ್ರಗಳನ್ನು ಕಡ್ಡಾಯಗೊಳಿಸಲಾಗಿದೆ. ಇದು ನಿಯಮಗಳಿಗೆ ವಿರುದ್ಧವಾಗಿದೆ ಎಂಬ ಅರ್ಜಿದಾರರ ವಾದವನ್ನು ನ್ಯಾಯಾಲಯ ತಿರಸ್ಕರಿಸಿದೆ.

ಸುತ್ತೋಲೆಯಂತೆ ಶಾಲೆಗಳಿಗೆ ಅಂತಿಮ ಮಾನ್ಯತೆ ನೀಡುವ ಮುನ್ನವೇ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದು ಕಡ್ಡಾಯವಾಗಿದೆ. ಅದರ ಉದ್ದೇಶ ಶಾಲಾ ಕಟ್ಟಡಗಳಲ್ಲಿ ಬಿಲ್ಡಿಂಗ್‌ ಬೈಲಾ ಮತ್ತು ಇತರೆ ನಿಯಮಗಳನ್ನು ಪಾಲನೆ ಮಾಡಬೇಕು ಎಂಬುದಾಗಿದೆ ಮತ್ತು ಇಲಾಖೆ ಹೊಸ ಷರತ್ತುಗಳೇನು ವಿಧಿಸಿಲ್ಲ. ಹಾಲಿ ನಿಯಮಗಳಲ್ಲಿರುವ ಅಂಶಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಸೂಚನೆ ನೀಡಿದೆ. ಹಾಗಾಗಿ ಸರ್ಕಾರದ ಆದೇಶದಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಪೀಠ ಹೇಳಿದೆ.

ಶಿಕ್ಷಣ ಇಲಾಖೆ ಕರ್ನಾಟಕ ಶಿಕ್ಷಣ ಕಾಯಿದೆ ಸೆಕ್ಷನ್‌ 36ರಡಿ ತಾತ್ಕಾಲಿಕ ಮಾನ್ಯತೆಯನ್ನು ಶಾಲೆಗಳಿಗೆ ನೀಡುತ್ತದೆ ಮತ್ತು ಒಂದು ವರ್ಷದಲ್ಲಿ ನಿಯಮದಲ್ಲಿ ಪ್ರಸ್ತಾಪಿಸಿರುವ ಎಲ್ಲಾ ಅಗತ್ಯತೆಗಳನ್ನು ಪೂರೈಸಲೇಬೇಕು. ಅಲ್ಲದೆ, ಶಿಕ್ಷಣ ಇಲಾಖೆಯಲ್ಲಿ ಎಲ್ಲಾ ಷರತ್ತುಗಳನ್ನು ಖಾಸಗಿ ಶಾಲೆಗಳು ಪಾಲನೆ ಮಾಡುತ್ತಿವೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸಲು ಯಾವುದೇ ಕಾರ್ಯವಿಧಾನ ಹೊಂದಿಲ್ಲ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಸರ್ಕಾರಿ ಶಾಲೆಗಳಿಗೂ ಅನ್ವಯ: ಶಾಲಾ ಕಟ್ಟಡ ಸುರಕ್ಷತಾ ನಿಯಮಗಳನ್ನು ಖಾಸಗಿ ಶಾಲೆಗಳಿಗೆ ಮಾತ್ರ ಕಡ್ಡಾಯಗೊಳಿಸಲಾಗಿದೆ. ಆದರೆ ಸರ್ಕಾರಿ ಶಾಲೆಗಳಲ್ಲಿ ಇದನ್ನು ಜಾರಿಗೊಳಿಸುತ್ತಿಲ್ಲ ಎಂಬ ಅರ್ಜಿದಾರರ ವಾದವನ್ನು ಅಂಗೀಕರಿಸಿರುವ ಪೀಠ, ರಾಜ್ಯ ಸರ್ಕಾರ ಖಾಸಗಿ ಶಾಲೆಗಳಿಗೆ ಕೆಲವೊಂದು ನಿಯಮ, ನಿಬಂಧನೆಗಳು ಮತ್ತು ಷರತ್ತುಗಳನ್ನು ವಿಧಿಸಿದಾಗ, ಅವುಗಳನ್ನು ರಾಜ್ಯ ಸರ್ಕಾರ ತನ್ನ ಶಾಲೆಗಳೂ ಸಹ ಪಾಲನೆ ಮಾಡಬೇಕಾಗುತ್ತದೆ ಎಂದು ಪೀಠ ಹೇಳಿದೆ.

ಶಾಲಾ ಕಟ್ಟಡ ಸುರಕ್ಷತಾ ನಿಯಮಾವಳಿ, ರಾಷ್ಟ್ರಿಯ ಕಟ್ಟಡ ಕೋರ್ಸ್​ ಮತ್ತು ಖಾಸಗಿ ಶಾಲೆಗಳಿಗೆ ಅನ್ವಯಿಸುವ ನಿಯಮಗಳು ಸರ್ಕಾರಿ ಶಾಲೆಗಳಿಗೂ ಅನ್ವಯವಾಗುತ್ತವೆ. ರಾಜ್ಯ ಸರ್ಕಾರಕ್ಕೆ ವಿನಾಯ್ತಿ ಇಲ್ಲ. ಹಾಗಾಗಿ ಶಿಕ್ಷಣ ಇಲಾಖೆ ಕಾರ್ಯದರ್ಶಿ ಈ ಸಂಬಂಧ ವಿಸ್ತೃತ ಕ್ರಿಯಾ ಯೋಜನೆ ರೂಪಿಸಬೇಕು ಮತ್ತು ಖಾಸಗಿ ಶಾಲೆಗಳಿಗೆ ಅನ್ವಯವಾಗುವ ನಿಯಮಗಳನ್ನು ಸರ್ಕಾರಿ ಶಾಲೆಗಳಲ್ಲಿ ಹೇಗೆ ಪಾಲನೆ ಮಾಡುತ್ತದೆ ಎನ್ನುವ ಬಗ್ಗೆ ಯೋಜನೆಯನ್ನು ಸಲ್ಲಿಸಬೇಕು ಎಂದು ನಿರ್ದೇಶನ ನೀಡಿದೆ.

ಇದನ್ನೂ ಓದಿ: ಪದವಿ ಪ್ರಮಾಣಪತ್ರವಿದ್ದರೆ 3 ವರ್ಷದ ಎಲ್‌ಎಲ್‌ಬಿ ಕೋರ್ಸ್​ಗೆ ಪಿಯುಸಿ ಪ್ರಮಾಣಪತ್ರ ಅಗತ್ಯವಿಲ್ಲ: ಹೈಕೋರ್ಟ್ - PU CERTIFICATE NOT REQUIRED FOR LLB

ETV Bharat Logo

Copyright © 2025 Ushodaya Enterprises Pvt. Ltd., All Rights Reserved.