ETV Bharat / state

ಅತ್ಯಾಚಾರ ಆರೋಪದಲ್ಲಿ ಪ್ರಜ್ವಲ್​ ರೇವಣ್ಣ ವಿರುದ್ಧ ಆರೋಪ ನಿಗದಿ ಮಾಡದಂತೆ ಹೈಕೋರ್ಟ್ ಆದೇಶ - PRAJWAL REVANNA CASE

ಅತ್ಯಾಚಾರ ಆರೋಪ ಪ್ರಕರಣದಲ್ಲಿ ಮಾಜಿ ಸಂಸದರ ಪ್ರಜ್ವಲ್​ ವಿರುದ್ಧ ಆರೋಪ ನಿಗದಿ ಮಾಡದಂತೆ ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್ ಆದೇಶಿಸಿದೆ.

ಪ್ರಜ್ವಲ್​ ರೇವಣ್ಣ ವಿರುದ್ಧ ಆರೋಪ ನಿಗದಿ ಮಾಡದಂತೆ ಹೈಕೋರ್ಟ್ ಆದೇಶ
ಪ್ರಜ್ವಲ್​ ರೇವಣ್ಣ ವಿರುದ್ಧ ಆರೋಪ ನಿಗದಿ ಮಾಡದಂತೆ ಹೈಕೋರ್ಟ್ ಆದೇಶ (ETV Bharat)
author img

By ETV Bharat Karnataka Team

Published : 9 hours ago

ಬೆಂಗಳೂರು: ಅತ್ಯಾಚಾರ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಆರೋಪ ನಿಗದಿಗೂ ಮುಂಚಿನ ವಾದ ಪ್ರತಿವಾದ ಆಲಿಸಬಹುದಾಗಿದೆ. ಆದರೆ, ಆರೋಪ ನಿಗದಿ ಮಾಡಬಾರದು ಎಂದು ವಿಚಾರಣಾಧೀನ ನ್ಯಾಯಾಲಯಕ್ಕೆ ಹೈಕೋರ್ಟ್‌ ಆದೇಶಿಸಿದೆ.

ಪ್ರಜ್ವಲ್‌ ಕಾರು ಚಾಲಕನ ಫೋನ್‌ನಿಂದ ಪಡೆದಿರುವ ಫೋಟೊ ಮತ್ತು ಎಲ್ಲಾ ವಿಡಿಯೋಗಳನ್ನು ಒದಗಿಸಲು ಪ್ರಾಸಿಕ್ಯೂಷನ್‌ಗೆ ನಿರ್ದೇಶಿಸಬೇಕು ಎಂದು ಕೋರಿ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯ ಪೀಠ ಈ ಆದೇಶ ನೀಡಿದೆ.

ಅರ್ಜಿದಾರರು ಮತ್ತು ಪ್ರಾಸಿಕ್ಯೂಷನ್‌ ವಕೀಲರ ವಾದವನ್ನು ನ್ಯಾಯಾಲಯ ಆಲಿಸಬಹುದು. ಪ್ರಕರಣ ಸಂಬಂಧ ಆರೋಪ ನಿಗದಿಗೂ ಮುನ್ನ ವಾದ ಆಲಿಸುವ ಪ್ರಕ್ರಿಯೆಯನ್ನು ವಿಚಾರಣಾಧೀನ ನ್ಯಾಯಾಲಯ ನಡೆಸಬಹುದು. ಆದರೆ, ಮುಂದಿನ ವಿಚಾರಣೆವರೆಗೆ ಆರೋಪ ನಿಗದಿ ಮಾಡಬಾರದು ಎಂದು ವಿಚಾರಣಾಧೀನ ನ್ಯಾಯಾಲಯಕ್ಕೆ ನಿರ್ದೇಶಿಸಿ ವಿಚಾರಣೆಯನ್ನು ಪೀಠ ಮುಂದೂಡಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ವಿಚಾರಣಾಧೀನ ನ್ಯಾಯಾಲಯದಲ್ಲಿ ತಮ್ಮನ್ನು ಸಮರ್ಥಿಸಿಕೊಳ್ಳಲು ತನ್ನ ಕಾರು ಚಾಲಕನಿಂದ ಜಪ್ತಿ ಮಾಡಿರುವ ಮೊಬೈಲ್‌ನಿಂದ ಪಡೆದಿರುವ ಎಲ್ಲಾ ಫೋಟೊ ಮತ್ತು ವಿಡಿಯೋಗಳನ್ನು ಒದಗಿಸಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಆಕ್ಷೇಪಿಸಿದ ಸರ್ಕಾರದ ಪರ ವಕೀಲರು, ಪ್ರಕರಣಕ್ಕೆ ಸಂಬಂಧಿಸಿದ ಡಿಜಿಟಲ್‌ ಸಾಕ್ಷ್ಯವನ್ನು ಪ್ರಜ್ವಲ್‌ಗೆ ಪೆನ್‌ಡ್ರೈವ್‌ ಮೂಲಕ ಒದಗಿಸಲಾಗಿದೆ. ಕಾರು ಚಾಲಕನ ಮೊಬೈಲ್‌ ಫೋನ್‌ನಲ್ಲಿ ಪಡೆದಿರುವ ಎಲ್ಲಾ 2,000 ವಿಡಿಯೋ ಮತ್ತು 15,000 ಫೋಟೋಗಳನ್ನು ಅವರಿಗೆ ಒದಗಿಸಲಾಗದು. ಅವರ ಮನವಿ ಪರಿಗಣಿಸಿದಲ್ಲಿ ಹಲವು ಮಹಿಳೆಯರ ಖಾಸಗಿತನಕ್ಕೆ ಸಮಸ್ಯೆಯಾಗುತ್ತದೆ. ವಿಚಾರಣಾಧೀನ ನ್ಯಾಯಾಲಯದಲ್ಲಿ ವಿಚಾರಣೆಯನ್ನು ವಿಳಂಬಗೊಳಿಸುವ ಉದ್ದೇಶದಿಂದ ಈ ರೀತಿಯ ಅರ್ಜಿಗಳನ್ನು ಸಲ್ಲಿಸುತ್ತಿದ್ದಾರೆ. ಈ ಮನವಿಯನ್ನು ಪರಿಗಣಿಸಬಾರದು ಎಂದು ಪೀಠಕ್ಕೆ ಮನವಿ ಮಾಡಿದರು.

ಈ ವೇಳೆ ಪೀಠ, ದೂರುದಾರರನ್ನು ಹೊರತುಪಡಿಸಿ ಉಳಿದ ಸಂತ್ರಸ್ತರ ಗುರುತು ಬಹಿರಂಗವಾಗುವುದಕ್ಕೆ ನ್ಯಾಯಾಲಯ ಅವಕಾಶ ನೀಡುವುದಿಲ್ಲ. ನೀವು ಕೇಳುತ್ತಿರುವ ದಾಖಲೆ ಸಾವಿರಾರು ಪುಟಗಳಲ್ಲಿದೆ ಎಂದು ಪ್ರಾಸಿಕ್ಯೂಷನ್‌ ಹೇಳುತ್ತಿದೆ. ಅದರ ಅವಶ್ಯಕತೆ ನಿಮಗೆ ಏನಿದೆ ಎಂದು ಪ್ರಶ್ನಿಸಿತು. ಅಲ್ಲದೆ, ಹಾಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಒದಗಿಸಬಹುದಾದ ಸಾಕ್ಷ್ಯಾಧಾರಗಳನ್ನು ನೀಡಬೇಕು. ಇತರೆ ಸಂತ್ರಸ್ತರ ಗುರುತು ಬಹಿರಂಗವಾಗುವುದಕ್ಕೆ ಮತ್ತು ಅವರ ಬದುಕಿಗೆ ತೊಂದರೆಯಾಗುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಪೀಠ ತಿಳಿಸಿ, ವಿಚಾರಣೆಯನ್ನು ಜನವರಿ 16ಕ್ಕೆ ಮುಂದೂಡಿತು.

ಇದನ್ನೂ ಓದಿ: ಹೆಣ್ಣಿನ ದೇಹವನ್ನು ಬಣ್ಣಿಸುವುದೂ ಲೈಂಗಿಕ ಕಿರುಕುಳಕ್ಕೆ ಸಮ : ಹೈಕೋರ್ಟ್​

ಇದನ್ನೂ ಓದಿ: 2ನೇ ಮಗು ಪಡೆಯಲು ಅಡ್ಡಿಯಾದ ಬಾಡಿಗೆ ತಾಯ್ತನ ಕಾಯಿದೆಯ ಸೆಕ್ಷನ್‌ಗಳ​ ರದ್ದತಿಗೆ ಅರ್ಜಿ: ಸರ್ಕಾರಕ್ಕೆ ನೋಟಿಸ್​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.