ETV Bharat / state

ವೈದ್ಯೆಗೆ ವಂಚನೆ: ಐಶ್ವರ್ಯಾ ಗೌಡ ವಿರುದ್ಧ ಬಲವಂತದ ಕ್ರಮ ಜರುಗಿಸದಂತೆ ಹೈಕೋರ್ಟ್ ಸೂಚನೆ - FRAUD CASE

ಡಿ.ಕೆ.ಸಹೋದರರ ತಂಗಿ ಎಂಬುದಾಗಿ ನಂಬಿಸಿ ವೈದ್ಯೆಗೆ ವಂಚಿಸಿರುವ ಮತ್ತೊಂದು ಪ್ರಕರಣದಲ್ಲಿಯೂ ಐಶ್ವರ್ಯಾ ಗೌಡ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚನೆ ನೀಡಿದೆ.

High Court orders not to take action against Aishwarya Gowda in fraud case
ಹೈಕೋರ್ಟ್, ಪೊಲೀಸ್​ ವಶದಲ್ಲಿದ್ದ ಐಶ್ವರ್ಯಾ ಗೌಡ (ETV Bharat)
author img

By ETV Bharat Karnataka Team

Published : 6 hours ago

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ತಂಗಿ ಎಂದು ಹೇಳಿಕೊಂಡು ವೈದ್ಯೆಯೊಬ್ಬರಿಂದ 2.52 ಕೋಟಿ ರೂ. ಮತ್ತು 2 ಕೆ.ಜಿ. 350 ಗ್ರಾಂ ಚಿನ್ನಾಭರಣ ಪಡೆದು ವಂಚಿಸಿ, ಬೆದರಿಕೆ ಹಾಕಿರುವ ಆರೋಪದಡಿ ದಾಖಲಾಗಿರುವ ಎಫ್‌ಐಆರ್ ಸಂಬಂಧ ಆರೋಪಿಗಳಾದ ಐಶ್ವರ್ಯಾ ಗೌಡ ಮತ್ತು ಆಕೆಯ ಪತಿ ಕೆ.ಎನ್.ಹರೀಶ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ರಾಜೇಶ್ವರಿನಗರ ಠಾಣಾ ಪೊಲೀಸರಿಗೆ ಹೈಕೋರ್ಟ್ ಗುರುವಾರ ಸೂಚಿಸಿತು.

ಪ್ರಕರಣ ಸಂಬಂಧ ತಮ್ಮ ವಿರುದ್ಧ ರಾಜರಾಜೇಶ್ವರಿ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಐಶ್ವರ್ಯಾ ಗೌಡ ಮತ್ತು ಆಕೆಯ ಪತಿ ಕೆ.ಎನ್.ಹರೀಶ್ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರ ಪೀಠ ಈ ಆದೇಶ ಮಾಡಿದೆ. ಅಲ್ಲದೆ, ಪ್ರತಿವಾದಿಗಳಾಗಿರುವ ಆರ್.ಆರ್.ನಗರ ಠಾಣೆಯ ಪೊಲೀಸರು ಮತ್ತು ದೂರುದಾರೆ ಡಾ.ಮಂಜುಳಾ ಎ.ಪಾಟೀಲ್‌ಗೆ ನೋಟಿಸ್ ಜಾರಿಗೊಳಿಸಿ, ಅರ್ಜಿ ಕುರಿತು ಆಕ್ಷೇಪಣೆ ಸಲ್ಲಿಸುವಂತೆ ತಿಳಿಸಿದೆ.

ಡಾ.ಮಂಜುಳಾ ಎ.ಪಾಟೀಲ್ ಅವರು ದೂರು ನೀಡಿ, ಗೋಲ್ಡ್ ವ್ಯವಹಾರದಲ್ಲಿ ಹಣ ಹೂಡಿಕೆ ಮಾಡಿದರೆ ಒಳ್ಳೆಯ ಲಾಭ ಬರಲಿದೆ ಎಂದು ತಿಳಿಸಿ 2022ರ ಮಾರ್ಚ್‌ನಿಂದ 2024ರ ಡಿಸೆಂಬರ್‌ ವರೆಗೆ ವಿವಿಧ ಹಂತಗಳಲ್ಲಿ ನನ್ನಿಂದ 2.52 ಕೋಟಿ ರೂ. ಹಣ ಹಾಗೂ 2 ಕೆ.ಜಿ. 350 ಗ್ರಾಂ ಚಿನ್ನಾಭರಣ ಪಡೆದ ಐಶ್ವರ್ಯಾ ಗೌಡ ಮತ್ತು ಆಕೆ ಪತಿ ಹರೀಶ್, ನಂತರ ವಾಪಸ್ ಹಣ ಹಾಗೂ ಚಿನ್ನ ಹಿಂದಿರುಗಿಸದೆ ವಂಚಿಸಿದ್ದಾರೆ ಎಂದು ದೂರು ನೀಡಿದ್ದರು.

ಇದನ್ನೂ ಓದಿ: ಚಿನ್ನಾಭರಣ ವಂಚನೆ ಆರೋಪ: ಐಶ್ವರ್ಯ ಗೌಡ ಮನೆ ಜಾಲಾಡಿದ ಪೊಲೀಸರು

ಈ ಬಗ್ಗೆ ಆರ್.ಆರ್.ನಗರ ಠಾಣಾ ಪೊಲೀಸರು ಐಶ್ವರ್ಯಾ ಗೌಡ, ಆಕೆಯ ಪತಿ ವಿರುದ್ಧ ವಂಚನೆ, ನಂಬಿಕೆ ದ್ರೋಹ, ಬೆದರಿಕೆ ಸೇರಿದಂತೆ ವಿವಿಧ ಆರೋಪಗಳ ಅಡಿ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದರು. ತಮ್ಮ ವಿರುದ್ಧದ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಅರ್ಜಿದಾರರು ಹೈಕೋರ್ಟ್ ಮೊರೆ ಹೋಗಿದ್ದರು.

ಇದನ್ನೂ ಓದಿ: ವೈದ್ಯೆಗೆ ವಂಚನೆ: ಐಶ್ವರ್ಯ ಗೌಡ ಸೇರಿ ನಾಲ್ವರ ವಿರುದ್ಧ ಮತ್ತೊಂದು ಎಫ್ಐಆರ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.