ETV Bharat / state

20 ವರ್ಷಗಳಿಂದ ಗುತ್ತಿಗೆ ಸೇವೆ: ಕಾಯಂಗೊಳಿಸಲು ಹೈಕೋರ್ಟ್ ಆದೇಶ - HIGH COURT

ನರ್ಸ್‌ಗಳ ಸೇವೆ ಕಾಯಂಗೊಳಿಸಲಾಗದು ಎಂದು ಜಯದೇವ ಸಂಸ್ಥೆ ನೀಡಿದ್ದ ಹಿಂಬರಹವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಜೊತೆಗೆ, 20 ವರ್ಷದಿಂದ ಸೇವೆ ಸಲ್ಲಿಸುತ್ತಿರುವವರನ್ನು ಕಾಯಂಗೊಳಿಸಲು ಆದೇಶಿಸಿದೆ.

ಹೈಕೋರ್ಟ್
ಹೈಕೋರ್ಟ್ (ETV Bharat)
author img

By ETV Bharat Karnataka Team

Published : Oct 7, 2024, 8:27 PM IST

ಬೆಂಗಳೂರು: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಸುಮಾರು 20 ವರ್ಷಗಳಿಗೂ ಹೆಚ್ಚು ಕಾಲದಿಂದ ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸಿದ್ದ ದಾದಿಯರನ್ನು ಕಾಯಂಗೊಳಿಸುವಂತೆ ಹೈಕೋರ್ಟ್​ ಆದೇಶಿಸಿದೆ. ಈ ವೇಳೆ ಹೃದ್ರೋಗ ಸಂಸ್ಥೆಯ ಹೃದಯವೇ ಸರಿಯಾದ ಸ್ಥಳದಲ್ಲಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಬಿ.ಜೆ.ರಾಣಿ ಮತ್ತಿತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್‌.ಎಸ್‌.ಸಂಜಯಗೌಡ ಅವರಿದ್ದ ಏಕ ಸದಸ್ಯ ಪೀಠ ಈ ಆದೇಶ ನೀಡಿದೆ.

ಅರ್ಜಿದಾರರು 20 ವರ್ಷಕ್ಕೂ ಅಧಿಕ ಸಮಯದಿಂದ ಗುತ್ತಿಗೆ ಆಧಾರದ ಮೇಲೆ ಸ್ಟಾರ್ಫ್‌ ನರ್ಸ್‌ (ಸ್ಟೈಫಂಡ್ರಿ)ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಹಾಗಾಗಿ 10 ವರ್ಷ ಸೇವೆ ಪೂರೈಸಿದ ದಿನದಿಂದ ಅನ್ವಯವಾಗುವಂತೆ ಅವರ ಸೇವೆಯನ್ನು ಕಾಯಂಗೊಳಿಸಬೇಕು. ಹತ್ತು ವರ್ಷವನ್ನು ಪರಿಗಣಿಸುವಾಗ ಮಧ್ಯದಲ್ಲಿ ಒಂದೆರಡು ದಿನ ಬ್ರೇಕ್‌ ಅವಧಿಯನ್ನು ಪರಿಗಣಿಸಬಾರದು ಎಂದು ಪೀಠ ನಿರ್ದೇಶನ ನೀಡಿದೆ.

ನರ್ಸ್‌ಗಳ ಸೇವೆಯನ್ನು ಕಾಯಂಗೊಳಿಸಲಾಗದು ಎಂದು ಜಯದೇವ ಸಂಸ್ಥೆ ನೀಡಿದ್ದ ಹಿಂಬರಹವನ್ನು ರದ್ದುಗೊಳಿಸಿರುವ ನ್ಯಾಯಾಲಯ, ಹೃದಯ ಸಂಬಂಧಿ ಕಾಯಿಲೆಗಳಿಗಾಗಿ ಇಂತಹ ಪ್ರತಿಷ್ಠಿತ ಸಂಸ್ಥೆಯನ್ನು ಸ್ಥಾಪಿಸಲಾಗಿದೆ. ನರ್ಸ್‌ಗಳು ಹೃದ್ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಆದರೆ ಜಯದೇವ ಸಂಸ್ಥೆ ಅನಾರೋಗ್ಯಕರ ರೀತಿಯಲ್ಲಿ ನಡೆದುಕೊಳ್ಳುವ ಮೂಲಕ, ಅದರ ಹೃದಯ ತನ್ನ ಸಿಬ್ಬಂದಿಯ ಕಾಯಿಲೆಗಳನ್ನು ಗುಣಪಡಿಸುವ ಸೂಕ್ತ ಜಾಗದಲ್ಲಿ ಇಲ್ಲ ಎಂಬುದನ್ನು ಸೂಚಿಸುತ್ತಿದೆ ಎಂದು ಸಂಸ್ಥೆಯ ಕಾರ್ಯವೈಖರಿಯ ಕುರಿತು ಅಸಮಾಧಾನ ವ್ಯಕ್ತಪಡಿಸಿದೆ.

ಅಲ್ಲದೆ, ರಾಜ್ಯದ ಅತ್ಯುತ್ತಮ ಸಂಸ್ಥೆಗಳಲ್ಲಿ ಒಂದೆನಿಸಿರುವ ಸಂಸ್ಥೆ ಮಾದರಿಯಾಗಬೇಕು. ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರು ಅಧ್ಯಕ್ಷರಾಗಿರುವ ಗೌರ್ನರಿಂಗ್‌ ಕೌನ್ಸಿಲ್‌ ಆಡಳಿತ ನಿರ್ವಹಣೆ ನೋಡಿಕೊಳ್ಳುವ ಸಂಸ್ಥೆ ತನ್ನ ನರ್ಸ್‌ಗಳ ವಿಚಾರದಲ್ಲಿ ನ್ಯಾಯಯುತವಾಗಿ ನಡೆದುಕೊಳ್ಳಬೇಕು ಎಂದು ಪೀಠ ಹೇಳಿದೆ.

ಅರ್ಜಿದಾರರನ್ನು ಮೊದಲಿಗೆ 2004ರಲ್ಲಿ ಸ್ಟಾರ್ಫ್‌ ನರ್ಸ್‌ (ಸ್ಟೈಫಂಡ್ರಿ) ಹುದ್ದೆಗಳಿಗೆ ನೇಮಕ ಮಾಡಲಾಗಿತ್ತು. ಅವರು ಕಳೆದೆರಡು ದಶಕಗಳಿಂದ ನಿರಂತರವಾಗಿ ಸಾಮಾನ್ಯ ಸ್ಟಾಫ್‌ ನರ್ಸ್‌ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಅವರಿಗೆ ಕಡಿಮೆ ವೇತನ ನೀಡಿ, ಪ್ರಯೋಜನಗಳನ್ನು ಕಲ್ಪಿಸದೆ, 'ಸಮಾನ ವೇತನಕ್ಕೆ ಸಮಾನ ಕೆಲಸ' ಎಂಬ ಸಾಂವಿಧಾನಿಕ ನಿಯಮವನ್ನು ಉಲ್ಲಂಘನೆ ಮಾಡಲಾಗುತ್ತಿದೆ ಎಂದು ಪೀಠ ತಿಳಿಸಿದೆ.

ಜಯದೇವ ಸಂಸ್ಥೆ 1960ರ ಕರ್ನಾಟಕ ಸೊಸೈಟಿ ನೋಂದಣಿ ಕಾಯಿದೆ ಅನ್ವಯ ನೋಂದಣಿಯಾಗಿದೆ. ಅದು ಗೌರ್ನರಿಂಗ್‌ ಕೌನ್ಸಿಲ್‌ ರೂಪಿಸಿದ ಸಂಸ್ಥೆಯ ನಿಯಮ ಮತ್ತು ಉಪನಿಯಮಗಳ ಅನುಸಾರ ಅಗತ್ಯಕ್ಕೆ ತಕ್ಕಂತೆ ನೇಮಕಾತಿಗಳನ್ನು ಮಾಡಿಕೊಂಡು ಅವರಿಗೆ ವೇತನ ನೀಡುತ್ತದೆ. ಈ ಸಂಸ್ಥೆಯಲ್ಲಿ ಅರ್ಜಿದಾರರು 20 ವರ್ಷಕ್ಕೂ ಅಧಿಕ ಸಮಯದಿಂದ ಸಾಮಾನ್ಯ ಸಿಬ್ಬಂದಿಯಂತೆ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಹುದ್ದೆಗಳನ್ನು ಕಾಲ ಕಾಲಕ್ಕೆ ಮುಂದುವರಿಸಲಾಗಿದೆ. ಸಂಸ್ಥೆಗೂ ಅವರ ಕೆಲಸ ಅನಿವಾರ್ಯವಾಗಿದೆ. ಅವರ ಅನುಭವವನ್ನು ಪರಿಗಣಿಸಿ ಎಲ್ಲಾ ರೀತಿಯಲ್ಲೂ ಅವರು ಅರ್ಹರಾಗಿರುವುದರಿಂದ ಅವರ ಸೇವೆ ಕಾಯಂ ಬಗ್ಗೆ ಪರಿಶೀಲಿಸಿ ತೀರ್ಮಾನ ಕೈಗೊಳ್ಳಬೇಕು ಎಂದು ನ್ಯಾಯಾಲಯ ಆದೇಶಿಸಿದೆ.

ವಿಚಾರಣೆ ವೇಳೆ, ಜಯದೇವ ಹೃದ್ರೋಗ ಸಂಸ್ಥೆಯ ಪರ ವಕೀಲರು, ಅರ್ಜಿದಾರರನ್ನು ಮಂಜೂರಾದ ಹುದ್ದೆಗಳಿಗೆ ವಿರುದ್ಧವಾಗಿ ನೇಮಕ ಮಾಡಿಕೊಂಡಿರಲಿಲ್ಲ. ಹಾಗಾಗಿ ಅವರ ನೇಮಕಾತಿ ಕಾಯಂಗೊಳಿಸಲಾಗದು. ಸ್ಟಾಫ್‌ ನರ್ಸ್‌ (ಸ್ಟೈಫಂಡ್ರಿ) ಎಂಬ ಕಾಯಂ ಹುದ್ದೆಗಳಿಲ್ಲ, ಹಾಗಾಗಿ ವೃಂದ ಮತ್ತು ಶ್ರೇಣಿ ನೇಮಕ ನಿಯಮದಂತೆ ಸೇವೆ ಕಾಯಂಗೆ ಅರ್ಜಿದಾರರು ಅರ್ಹರಲ್ಲ ಎಂದು ನ್ಯಾಯಪೀಠಕ್ಕೆ ವಿವರಿಸಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಅರ್ಜಿದಾರರ ಪರ ವಕೀಲರು, ಅರ್ಜಿದಾರರು ಹಲವಾರು ವರ್ಷಗಳಿಂದ ಸೇವೆ ಸಲ್ಲಿಸಿದ್ದಾರೆ. ಆದರೆ, ಕಾಯಂ ಮಾಡಿಲ್ಲ. ಹೀಗಾಗಿ ಅವರನ್ನು ಕಾಯಂ ನೌಕರರನ್ನಾಗಿ ಪರಿಗಣಿಸಬೇಕು ಎಂದು ಪೀಠಕ್ಕೆ ಮನವಿ ಮಾಡಿದರು.

ಇದನ್ನೂ ಓದಿ: ಅಮಾನ್ಯಗೊಂಡ ನೋಟುಗಳ ವಿನಿಮಯಕ್ಕೆ ಕೇಂದ್ರದ ನಿಯಮ ಅನುಸರಿಸುವುದು ಕಡ್ಡಾಯ: ಹೈಕೋರ್ಟ್ - High Court

ETV Bharat Logo

Copyright © 2024 Ushodaya Enterprises Pvt. Ltd., All Rights Reserved.