ETV Bharat / state

ಸಿದ್ದರಾಮಯ್ಯ ಕ್ಷೇತ್ರದ ಇವಿಎಂ, ವಿವಿಪ್ಯಾಟ್​ ಲೋಕಸಭೆ ಚುನಾವಣೆಗೆ ಬಳಸಲು ಹೈಕೋರ್ಟ್ ಅನುಮತಿ - ಸಿದ್ದರಾಮಯ್ಯ ಕ್ಷೇತ್ರ

ವರುಣಾ ಕ್ಷೇತ್ರದ ಇವಿಎಂ, ವಿವಿಪ್ಯಾಟ್​​ಗಳನ್ನು ಲೋಕಸಭೆ ಚುನಾವಣೆಗೆ ಬಳಕೆ ಮಾಡಿಕೊಳ್ಳಲು ಹೈಕೋರ್ಟ್ ಅನುಮತಿಸಿದೆ.

High Court
ಹೈಕೋರ್ಟ್
author img

By ETV Bharat Karnataka Team

Published : Feb 19, 2024, 6:51 PM IST

ಬೆಂಗಳೂರು : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೆದ್ದಿರುವ ವರುಣಾ ಕ್ಷೇತ್ರದ ಮತದಾನಕ್ಕೆ ಬಳಸಲಾಗಿದ್ದ ಇವಿಎಂ- ವಿವಿಪ್ಯಾಟ್‌ಗಳನ್ನು ಮುಂದಿನ ಲೋಕಸಭಾ ಚುನಾವಣೆಗೆ ಉಪಯೋಗಿಸಿಕೊಳ್ಳಲು ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಅನುಮತಿ ನೀಡಿದೆ.

ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಅವರು ಉಚಿತ ಗ್ಯಾರಂಟಿಗಳ ಆಮಿಷವೊಡ್ಡುವ ಮೂಲಕ ವಿಧಾನಸಭಾ ಚುನಾಣೆಯಲ್ಲಿ ವರುಣಾ ಕ್ಷೇತ್ರದಿಂದ ಜಯಶೀಲರಾಗಿದ್ದಾರೆ ಎಂಬುದಾಗಿ ಆರೋಪಿಸಿ, ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಮೈಸೂರಿನ ವರುಣಾ ಹೋಬಳಿಯ ಕೊಡನಹಳ್ಳಿ ನಿವಾಸಿ ಕೆ ಎಂ ಶಂಕರ್​ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ನ್ಯಾಯಮೂರ್ತಿ ಸುನೀಲ್​ ದತ್​ ಯಾದವ್​ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿತು.

ವಿಚಾರಣೆ ಸಂದರ್ಭದಲ್ಲಿ ಮೈಸೂರು ಚುನಾವಣಾ ಅಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿಗಳ ಪರವಾಗಿ ಹಾಜರಾದ ವಕೀಲರು, ಚುನಾವಣಾ ತಕರಾರು ಅರ್ಜಿ ವಿಚಾರಣೆಗೆ ಬಾಕಿ ಇರುವುದರಿಂದ ವರುಣಾ ಕ್ಷೇತ್ರದಲ್ಲಿ ಬಳಸಲಾಗಿದ್ದ ಇವಿಎಂ-ವಿವಿಪ್ಯಾಟ್‌ಗಳನ್ನು ಜಿಲ್ಲಾ ಇವಿಎಂ ವೇರ್‌ ಹೌಸ್‌ನಲ್ಲಿ ಇಡಲಾಗಿದೆ. ಲೋಕಸಭಾ ಚುನಾವಣೆ ಸನಿಹ ಬರುವುದರಿಂದ ಇವಿಎಂ-ವಿವಿಪ್ಯಾಟ್‌ಗಳನ್ನು ಬಳಸಿಕೊಳ್ಳಲು ಅವುಗಳನ್ನು 'ಎಫ್‌ಎಸ್‌ಎಲ್' ಪ್ರಥಮ ಹಂತದ ತಪಾಸಣೆ ಮಾಡಬೇಕಾಗಿದೆ. ಆದ್ದರಿಂದ ವರುಣಾ ಕ್ಷೇತ್ರದ ಮತದಾನಕ್ಕೆ ಬಳಸಿಕೊಳ್ಳಲಾಗಿದ್ದ 314 ಇವಿಎಂ ಹಾಗೂ 338 ವಿವಿಪ್ಯಾಟ್‌ಗಳನ್ನು ಬಳಸಿಕೊಳ್ಳಲು ಅನುಮತಿ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.

ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ಕೇಸ್​: ಹೈಕೋರ್ಟ್​ ಆದೇಶಕ್ಕೆ ತಡೆ ನೀಡಿದ ಸುಪ್ರೀಂ ಕೋರ್ಟ್​

ಲೋಕಸಭೆ ಚುನಾವಣೆಗೆ ಬಳಸಿಕೊಳ್ಳಲು ಇವಿಎಂ- ವಿವಿಪ್ಯಾಟ್‌ಗಳನ್ನು ಚುನಾವಣಾ ಆಯೋಗ ಕೇಳಿದರೆ ಅದಕ್ಕೆ ತಮ್ಮದೇನು ಆಕ್ಷೇಪಣೆ ಇಲ್ಲ ಎಂದು ಅರ್ಜಿದಾರರ ಪರ ವಕೀಲರು ತಿಳಿಸಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ವರುಣಾ ಕ್ಷೇತ್ರದ ಇವಿಎಂ-ವಿವಿಪ್ಯಾಟ್‌ಗಳನ್ನು ಮುಂದಿನ ಲೋಕಸಭಾ ಚುನಾವಣೆಗೆ ಬಳಸಿಕೊಳ್ಳಲು ಚುನಾವಣಾ ಆಯೋಗಕ್ಕೆ ಅನುಮತಿ ನೀಡಿ, ಮಧ್ಯಂತರ ಅರ್ಜಿ ಇತ್ಯರ್ಥಪಡಿಸಿತು.

ಈ ನಡುವೆ ಪ್ರಕರಣದಲ್ಲಿ ವಾದ ಮಂಡನೆಗೆ ಸಿಎಂ ಸಿದ್ದರಾಮಯ್ಯ ಪರ ವಕೀಲರು ಕಾಲಾವಕಾಶ ಕೇಳಿದರು. ಅದಕ್ಕೆ ಅರ್ಜಿದಾರರ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು. ಪದೇ ಪದೇ ಕಾಲಾವಕಾಶ ಕೇಳಲಾಗುತ್ತಿದೆ. ಇದು ನಾಲ್ಕನೆಯ ಬಾರಿ ಆಗಿದೆ. ಸುಮ್ಮನೆ ಪ್ರಕರಣವನ್ನು ಎಳೆದುಕೊಂಡು ಹೋಗಲಾಗುತ್ತಿದೆ ಎಂದರು. ಪ್ರಕರಣವನ್ನು ಸುಮ್ಮನೆ ಎಳೆದುಕೊಂಡು ಹೋಗಲಾಗುತ್ತಿದೆ ಎಂಬ ಭಾವನೆ ನ್ಯಾಯಾಲಯಕ್ಕೆ ಬರುವಂತೆ ನಡೆದುಕೊಳ್ಳಬೇಡಿ ಎಂದು ಸಿದ್ದರಾಮಯ್ಯ ಪರ ವಕೀಲರಿಗೆ ತಿಳಿಸಿದ ನ್ಯಾಯಪೀಠ, ವಿಚಾರಣೆಯನ್ನು ಫೆಬ್ರವರಿ 28ಕ್ಕೆ ಮುಂದೂಡಿದೆ.

ಇದನ್ನೂ ಓದಿ: ನಿವೃತ್ತರು, ಹಿರಿಯ ನಾಗರಿಕರನ್ನು ಆಯಾಸಗೊಳ್ಳುವಂತೆ ಮಾಡಬಾರದು: ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.