ETV Bharat / state

ರಾಮೇಶ್ವರಂ ಕೆಫೆ ಸ್ಫೋಟ: ತಮಿಳುನಾಡಿನವರೊಂದಿಗೆ ಸಂಬಂಧ ಕಲ್ಪಿಸಿ ಹೇಳಿಕೆ: ಸಚಿವೆ ಕರಂದ್ಲಾಜೆ ವಿರುದ್ಧದ ಕೇಸ್​ ರದ್ದು - Shobha Karandlaje - SHOBHA KARANDLAJE

ರಾಮೇಶ್ವರಂ ಕೆಫೆ ಸ್ಫೋಟದ ಸಂಬಂಧ ನೀಡಿದ್ದ ಹೇಳಿಕೆ ಕುರಿತಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.

high court
ಹೈಕೋರ್ಟ್, ಶೋಭಾ ಕರಂದ್ಲಾಜೆ (ETV Bharat)
author img

By ETV Bharat Karnataka Team

Published : Sep 19, 2024, 3:51 PM IST

ಬೆಂಗಳೂರು: ನಗರದ ರಾಮೇಶ್ವರಂ ಕೆಫೆ ಸ್ಫೋಟದ ಶಂಕಿತರನ್ನು ತಮಿಳುನಾಡು ರಾಜ್ಯದವರು ಎಂಬುದಾಗಿ ಬಿಂಬಿಸುವಂತೆ ಆರೋಪಿಸಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿ ಆದೇಶಿಸಿದೆ.

ಶೋಭಾ ಕರಂದ್ಲಾಜೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ಇದೇ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಪ್ರಕರಣವನ್ನು ಮದ್ರಾಸ್ ಹೈಕೋರ್ಟ್ ರದ್ದುಗೊಳಿಸಿ ಆದೇಶಿಸಿದೆ. ಎರಡೂ ಪ್ರಕರಣಗಳಲ್ಲಿ ಆರೋಪಗಳು ಒಂದೇ ಘಟನೆಗೆ ಸಂಬಂಧಿಸಿದ್ದಾಗಿವೆ. ಮದ್ರಾಸ್ ಹೈಕೋರ್ಟ್ ಪ್ರಕರಣ ರದ್ದುಪಡಿಸಿರವುದರಿಂದ ಅದೇ ಆರೋಪದಲ್ಲಿ ಮತ್ತೆ ತನಿಖೆ ನಡೆಯುವ ಅಗತ್ಯವಿಲ್ಲ ಎಂದು ತಿಳಿಸಿದ ಪೀಠ, ಪ್ರಕರಣ ರದ್ದುಪಡಿಸಿ ಆದೇಶಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ''ಅರ್ಜಿದಾರರ ವಿರುದ್ಧ ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಾಗಿದೆ. ಆದರೆ, ಚುನಾವಣೆ ಸಂದರ್ಭದಲ್ಲಿ ಮತದಾನವನ್ನು ಉತ್ತೇಜನ ಮತ್ತು ಅಭ್ಯರ್ಥಿಗಳಿಗೆ ಮತಯಾಚನೆ ಸಂದರ್ಭದಲ್ಲಿ ಈ ಕಾಯ್ದೆಯಡಿ ಪ್ರಕರಣ ದಾಖಲಿಸಬಹುದಾಗಿದೆ. ಜೊತೆಗೆ, ಮದ್ರಾಸ್ ಹೈಕೋರ್ಟ್ ಇದೇ ಆರೋಪದಲ್ಲಿ ಪ್ರಕರಣ ರದ್ದುಗೊಳಿಸಿದೆ. ಹೀಗಾಗಿ, ಅರ್ಜಿದಾರರ ವಿರುದ್ಧ ಪ್ರಕರಣವನ್ನು ರದ್ದು ಮಾಡಬೇಕು'' ಎಂದು ಕೋರಿದರು. ವಾದ ಆಲಿಸಿದ ನ್ಯಾಯಪೀಠ, ಅರ್ಜಿಯನ್ನು ಪುರಸ್ಕರಿಸಿ, ಪ್ರಕರಣವನ್ನು ರದ್ದುಪಡಿಸಿ ಆದೇಶಿಸಿತು.

ಪ್ರಕರಣದ ಹಿನ್ನೆಲೆ: 2024ರ ಮಾರ್ಚ್​ 1ರಂದು ಬೆಂಗಳೂರು ನಗರದಲ್ಲಿನ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಸಂಭವಿಸಿತ್ತು. ಈ ಕುರಿತಂತೆ ಮಾಧ್ಯಮಗಳಿಗೆ ಹೇಳಿಕೆಗಳನ್ನು ನೀಡಿದ ಶೋಭಾ ಕರಂದ್ಲಾಜೆ ಅವರು, ತಮಿಳುನಾಡಿನಿಂದ ಬಂದು ಇಲ್ಲಿ ಬಾಂಬ್ ಹಾಕಿ ಹೋಗುತ್ತಾರೆ ಎಂಬುದಾಗಿ ತಿಳಿಸಿದ್ದರು. ಈ ಸಂಬಂಧ ಬೆಂಗಳೂರು ಸೇರಿದಂತೆ ತಮಿಳುನಾಡಿನಲ್ಲಿಯೂ ಪ್ರಕರಣಗಳು ದಾಖಲಾಗಿದ್ದವು.

ಇದನ್ನೂ ಓದಿ: ಅತ್ಯಾಚಾರ ಆರೋಪ ಸುಳ್ಳು, ನಡೆದಿದ್ದರೂ ಒಪ್ಪಿತ ಲೈಂಗಿಕ ಕ್ರಿಯೆ: ಪ್ರಜ್ವಲ್ ಪರ ವಕೀಲರ ವಾದ - Prajwal Revanna Case

ETV Bharat Logo

Copyright © 2024 Ushodaya Enterprises Pvt. Ltd., All Rights Reserved.