ETV Bharat / state

ಚುನಾವಣಾ ಅಕ್ರಮ ಆರೋಪ: ಶಾಸಕಿ ಶಶಿಕಲಾ ಜೊಲ್ಲೆ ವಿರುದ್ಧದ ಪ್ರಕರಣ ರದ್ದು - Shashikala Jolle

ಚುನಾವಣಾ ಅಕ್ರಮ ಆರೋಪದ ಮೇಲೆ ಶಾಸಕಿ ಶಶಿಕಲಾ ಜೊಲ್ಲೆ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದು ಮಾಡಿದೆ.

high-court
ಚುನಾವಣಾ ಅಕ್ರಮ ಆರೋಪ: ಶಾಸಕಿ ಶಶಿಕಲಾ ಜೊಲ್ಲೆ ವಿರುದ್ಧದ ಪ್ರಕರಣ ರದ್ದು
author img

By ETV Bharat Karnataka Team

Published : Apr 6, 2024, 6:52 AM IST

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ವೇಳೆ ಚುನಾವಣಾ ಅಕ್ರಮ ನಡೆಸಿದ ಆರೋಪದ ಮೇಲೆ ನಿಪ್ಪಾಣಿ ಶಾಸಕಿ ಹಾಗೂ ಮಾಜಿ ಸಚಿವೆ ಶಶಿಕಲಾ ಅಣ್ಣಾಸಾಹೇಬ ಜೊಲ್ಲೆ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.

ಪ್ರಕರಣ ರದ್ದು ಕೋರಿ ಶಶಿಕಲಾ ಜೊಲ್ಲೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ನ್ಯಾಯಪೀಠ ಈ ಆದೇಶ ಮಾಡಿದೆ. ಪ್ರಕರಣ ಸಂಬಂಧ ಶಶಿಕಲಾ ಜೊಲ್ಲೆ ವಿರುದ್ಧ ನಿಪ್ಪಾಣಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್, ಅದನ್ನು ಆಧರಿಸಿ ತನಿಖೆ ನಡೆಸಿ ಪೊಲೀಸರು ಸಲ್ಲಿಸಿದ್ದ ಆರೋಪ ಪಟ್ಟಿ ಮತ್ತು ಈ ಬಗ್ಗೆ ನಿಪ್ಪಾಣಿ ಜೆಎಂಎಫ್​ಸಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಯನ್ನು ರದ್ದುಪಡಿಸಿ ಆದೇಶಿಸಲಾಗಿದೆ.

ಅಲ್ಲದೇ, ಐಪಿಸಿ 171(ಬಿ) ಹಾಗೂ ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್ 123(1) ಆಧರಿಸಿ ಲಂಚ ಮತ್ತು ಆಮಿಷದ ಆರೋಪ ಮಾಡಲಾಗಿದೆ. ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾದ ಅಂಶಗಳು ಮತ್ತು ಯಾವ ಘಟನೆ ಆಧರಿಸಿ ಪ್ರಕರಣ ದಾಖಲಿಸಿಲಾಗಿದೆಯೋ ಆ ಸಂದರ್ಭದ ಘಟನಾವಳಿಗಳನ್ನು ಗಮನಿಸಿದಾಗ ಅದ್ಯಾವುದೂ ಲಂಚ ಅಥವಾ ಆಮಿಷ ಆಗುವುದಿಲ್ಲ. ಏಕೆಂದರೆ ಐಪಿಸಿ ಸೆಕ್ಷನ್ 171(ಬಿ) ಪ್ರಕಾರ ಕೊಡುವ ಕೈ ಹಾಗೂ ತೆಗೆದುಕೊಳ್ಳುವ ಕೈ ಇದ್ದಾಗ ಮಾತ್ರ ಅದು ಲಂಚವಾಗುತ್ತದೆ. ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್ 123(1) ಪ್ರಕಾರ ಉಚಿತ ಉಡುಗೊರೆ, ಆಮಿಷ ಹಾಗೂ ಭರವಸೆಗಳು ಚುನಾವಣಾ ಅಕ್ರಮವೆನಿಸುತ್ತವೆ. ಈ ಪ್ರಕರಣದಲ್ಲಿ ಅಂತಹ ಆರೋಪಕ್ಕೆ ಪುರಾವೆಗಳು ಲಭ್ಯವಾಗುತ್ತಿಲ್ಲ. ಯಾವುದೇ ಒಬ್ಬ ವ್ಯಕ್ತಿ ತನ್ನ ಬಳಿ ಹಣ ಇಟ್ಟುಕೊಳ್ಳುವುದು ಅಪರಾಧ ಅಥವಾ ಲಂಚ ಎನಿಸಿಕೊಳ್ಳುವುದಿಲ್ಲ. ಹಾಗಾಗಿ, ಕಾನೂನಿನಡಿ ಈ ಪ್ರಕರಣ ಆರೋಪವಾಗುವುದಿಲ್ಲ ಎಂದು ಹೇಳಿದ ನ್ಯಾಯಪೀಠ, ಪ್ರಕರಣವನ್ನು ರದ್ದುಪಡಿಸಿ ಆದೇಶಿಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ರಾಜಕೀಯ ದುರುದ್ದೇಶದಿಂದ ಪ್ರಕರಣ ದಾಖಲಿಸಲಾಗಿದೆ. ಅರ್ಜಿದಾರರ ಚುನಾವಣಾ ಏಜೆಂಟ್ ಬಳಿ 10 ಸಾವಿರ ರೂ. ನಗದು ಸಿಕ್ಕಿದ್ದ ಮಾತ್ರಕ್ಕೆ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದಲ್ಲಿ ಅರ್ಜಿದಾರರ ಪಾತ್ರವಿಲ್ಲ. ಹಣ ಯಾರಿಗೆ ಕೊಡಲಾಗುತ್ತಿತ್ತು ಎಂದು ಗೊತ್ತಿಲ್ಲ. ಹಣ ಪತ್ತೆಯಾದ ಸ್ಥಳದಲ್ಲಿ ಹಣ ಪಡೆದುಕೊಳ್ಳಲು ಬಂದವರು ಯಾರೂ ಇರಲಿಲ್ಲ. ಆರೋಪ ಸಾಬೀತುಪಡಿಸುವಂತ ಅಂಶಗಳನ್ನು ಎಫ್‌ಐಆರ್‌ನಲ್ಲಿ ದಾಖಲಿಸಿಲ್ಲ. ಪ್ರಕರಣ ದಾಖಲಿಸಿರುವುದು ಕಾನೂನಿನ ದುರ್ಬಳಕೆಯಾಗಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಪ್ರಕರಣದ ಹಿನ್ನೆಲೆ : ನಿಪ್ಪಾಣಿಯ ಜಾಮದಾರ್ ಪ್ಲಾಟ್, ಲೇನ್ ನಂಬರ್ 1ರ ಬಳಿ ಕೆಲ ವ್ಯಕ್ತಿಗಳು ಜಮಾಯಿಸಿದ್ದು, ಮತದಾರರ ಮೇಲೆ ಪ್ರಭಾವ ಬೀರುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಚುನಾವಣಾಧಿಕಾರಿ 2023ರ ಮೇ 10ರಂದು ದೂರು ನೀಡಿದ್ದರು. ಅದನ್ನು ಆಧರಿಸಿ ನಿಪ್ಪಾಣಿ ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟಾಗ, ಅಲ್ಲಿ ಸೇರಿದ್ದ ಜನರ ಬಳಿ ಬಿಜೆಪಿ ಅಭ್ಯರ್ಥಿಯಾಗಿದ್ದ ಶಶಿಕಲಾ ಜೊಲ್ಲೆ ಅವರಿಗೆ ಸೇರಿದ್ದ ಕೆಲವು ಚುನಾವಣಾ ಸಾಮಗ್ರಿಗಳು, ವ್ಯಕ್ತಿಯೊಬ್ಬರ ಬಳಿ 10 ಸಾವಿರ ರೂ. ಸಿಕ್ಕಿತ್ತು. ಎಫ್‌ಐಆರ್ ದಾಖಲಿಸಿಕೊಂಡ ಪೊಲೀಸರು, ಮ್ಯಾಜಿಸ್ಟ್ರೇಟ್ ಕೋರ್ಟ್ ಅನುಮತಿ ಪಡೆದು ತನಿಖೆ ನಡೆಸಿ ಆರೋಪಪಟ್ಟಿ ಸಲ್ಲಿಸಿದ್ದರು. ಅದರ ವಿಚಾರಣೆಯು ನಿಪ್ಪಾಣಿ ಜೆಎಂಎಫ್​ಸಿ ಕೋರ್ಟ್​ನಲ್ಲಿ ನಡೆಯುತ್ತಿದೆ. ಅದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿತ್ತು.

ಇದನ್ನೂ ಓದಿ: ಡಿ.ಕೆ.ಶಿವಕುಮಾರ್ ಪ್ರಕರಣ: ತನಿಖೆಗೆ ಕಾಲಮಿತಿ ಇಲ್ಲವೇ ಎಂದು ಸಿಬಿಐಗೆ ಹೈಕೋರ್ಟ್ ಪ್ರಶ್ನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.