ETV Bharat / state

ಪ್ರವೀಣ್ ನೆಟ್ಟಾರು ಕೊಲೆ ಖಂಡಿಸಿ ಪ್ರತಿಭಟನೆ: ಚಕ್ರವರ್ತಿ ಸೂಲಿಬೆಲೆ ವಿರುದ್ಧದ ಪ್ರಕರಣ ರದ್ದು - ಚಕ್ರವರ್ತಿ ಸೂಲಿಬೆಲೆ ಪ್ರಕರಣ

ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.

ಹೈಕೋರ್ಟ್
high court
author img

By ETV Bharat Karnataka Team

Published : Feb 27, 2024, 9:18 PM IST

ಬೆಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಖಂಡಿಸಿದ ಪಿಎಫ್‌ಐ ಮತ್ತು ಎಸ್‌ಡಿಪಿಐ ಸಂಘಟನೆ ನಿಷೇಧಕ್ಕೆ ಆಗ್ರಹಿಸಿ ಬೆಂಗಳೂರಿನ ಟೌನ್ ಹಾಲ್ ಮುಂದೆ ಪ್ರತಿಭಟನೆ ನಡೆಸಿದ್ದಕ್ಕೆ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿತು.

ಪ್ರಕರಣ ರದ್ದು ಕೋರಿ ಚಕ್ರವರ್ತಿ ಸೂಲಿಬೆಲೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕ ಸದಸ್ಯಪೀಠ ಈ ಆದೇಶ ನೀಡಿದೆ. ಕಾನೂನು ಪ್ರಕಾರ ಆದೇಶ ಹೊರಡಿಸಿದ ಅಧಿಕಾರಿ ಅಥವಾ ಅವರಿಗಿಂತ ಮೇಲಿನ ಶ್ರೇಣಿಯ ಅಧಿಕಾರಿ ದೂರು ದಾಖಲಿಸಬೇಕಿದೆ. ಈ ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ಖಾಸಗಿ ದೂರು ದಾಖಲಿಸಿರುವುದು ಮತ್ತು ಆ ದೂರು ಪರಿಗಣಿಸಿ ಅರ್ಜಿದಾರರಿಗೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಕ್ರಮ ಜರುಗಿಸಿರುವುದು ಕಾನೂನು ಬಾಹಿರ ಎಂಬ ಅರ್ಜಿದಾರರ ಪರ ವಕೀಲರ ವಾದ ಮಾಡಿದ್ದರು. ಇದನ್ನು ನ್ಯಾಯಾಲಯ ಮಾನ್ಯ ಮಾಡಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಅರುಣ್ ಶ್ಯಾಮ್, ಸ್ವಾತಂತ್ರ್ಯ ಉದ್ಯಾನವನ್ನು ಹೊರತುಪಡಿಸಿ ಬೆಂಗಳೂರಿನ ಇತರೆ ಭಾಗದಲ್ಲಿ ಪ್ರತಿಭಟನೆ ನಡೆಸಬಾರದೆಂದು ಆದೇಶ ಹೊರಡಿಸಿದೆ. ಈ ಆದೇಶ ಉಲ್ಲಂಘಿಸಿ ಮತ್ತು ಪೂರ್ವಾನುಮತಿ ಪಡೆಯದೇ ಬೆಂಗಳೂರಿನ ಟೌನ್‌ಹಾಲ್ ಮುಂದೆ ಪ್ರತಿಭಟನೆ ನಡೆಸಿ, ಸಾರ್ವಜನಿಕ ಶಾಂತಿ ಭಂಗ ಉಂಟುಮಾಡಿದ ಮತ್ತು ಕಾನೂನು ಸುವ್ಯವಸ್ಥೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ಎಸ್.ಜೆ.ಪಾರ್ಕ್ ಠಾಣೆಯ ಇನ್ಸ್‌ಪೆಕ್ಟರ್ 6ನೇ ಎಸಿಎಂಎಂ ನ್ಯಾಯಾಲಯದಲ್ಲಿ ಅರ್ಜಿದಾರರ ವಿರುದ್ಧ ಖಾಸಗಿ ದೂರು ದಾಖಲಿಸಿದ್ದಾರೆ ಎಂದರು. ಆದರೆ ನಿಯಮದ ಪ್ರಕಾರ ಇನ್ಸ್‌ಪೆಕ್ಟರ್​ಗೆ ದೂರು ದಾಖಲಿಸುವ ಅಧಿಕಾರವಿಲ್ಲ. ಹಾಗಾಗಿ ಅರ್ಜಿದಾರರ ವಿರುದ್ಧದ ಪ್ರಕರಣ ರದ್ದುಪಡಿಸುವಂತೆ ಕೋರಿದರು.

ಪ್ರಕರಣದ ಹಿನ್ನೆಲೆ: ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ 2022ರ ಜು.28ರಂದು ಟೌನ್ ಹಾಲ್ ಮುಂಭಾಗ ಹಿಂದೂ ಹಿತರಕ್ಷಣಾ ಸಮಿತಿ ಮತ್ತು ಇತರೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಜಿಹಾದಿಗಳಿಗೆ ಧಿಕ್ಕಾರ, ಪಿಎಫ್‌ಐ ಮತ್ತು ಎಸ್‌ಡಿಪಿಐ ಸಂಘಟನೆಗಳನ್ನು ನಿಷೇಧಿಸಬೇಕು. ಪ್ರವೀಣ್ ನೆಟ್ಟಾರ್‌ ಹಂತಕರನ್ನು ಸಾರ್ವಜನಿಕವಾಗಿ ಎನ್‌ಕೌಂಟರ್‌ ಮಾಡಬೇಕು ಎಂದು ಘೋಷಣೆ ಕೂಗಿದ್ದರು. ಎಸ್.ಜೆ.ಪಾರ್ಕ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್‌ ಎಂ.ಆರ್.ಸತೀಶ ಬೆಂಗಳೂರಿನ 6ನೇ ಎಸಿಎಂಎಂ ನ್ಯಾಯಾಲಯದಲ್ಲಿ, ಶಾಸಕ ರವಿಸುಬ್ರಹ್ಮಣ್ಯ, ಮಾಜಿ ಮೇಯರ್‌ಗಳಾದ ಕಟ್ಟೆ ಸತ್ಯನಾರಾಯಣ, ಉಮೇಶ್ ಶೆಟ್ಟಿ ಮತ್ತು ಚಕ್ರವರ್ತಿ ಸೂಲಿಬೆಲೆ ಸೇರಿದಂತೆ ಒಟ್ಟು 11 ಮಂದಿ ವಿರುದ್ಧ ಖಾಸಗಿ ದೂರು ದಾಖಲಿಸಿದ್ದರು.

ಫ್ರೀಡಂ ಪಾರ್ಕ್ ಹೊರತುಪಡಿಸಿ ಬೇರೆ ಯಾವುದೇ ಸ್ಥಳಗಳಲ್ಲಿ ಪ್ರತಿಭಟನೆ ಮಾಡಬಾರದೆಂದು ಸರ್ಕಾರ ಆದೇಶಿಸಿದೆ. ಈ ನಿಯಮ ಉಲ್ಲಂಘಿಸಿ ಮತ್ತು ಸರ್ಕಾರದಿಂದಾಗಲಿ ಅಥವಾ ಸಂಬಂಧಪಟ್ಟ ಪ್ರಾಧಿಕಾರದಿಂದ ಯಾವುದೇ ಪೂರ್ವಾನುಮತಿ ಪಡೆಯದೆ ಆರೋಪಿಗಳು ಟೌನ್‌ಹಾಲ್ ಮುಂದೆ ಪ್ರತಿಭಟನೆ ನಡೆಸಿ ಸಾರ್ವಜನಿಕ ನೆಮ್ಮದಿಗೆ ಭಂಗ ಉಂಟು ಮಾಡಿದ್ದಾರೆ ಮತ್ತು ಕಾನೂನು ಸುವ್ಯವಸ್ಥೆಗೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿ ಖಾಸಗಿ ದೂರು ದಾಖಲಿಸಲಾಗಿತ್ತು.

ಇದನ್ನೂ ಓದಿ: ಖರ್ಗೆ ಕುರಿತು ಅವಹೇಳನ ಆರೋಪ: ಸೂಲಿಬೆಲಿ ವಿರುದ್ಧದ ಎಫ್​ಐಆರ್​ಗೆ ಹೈಕೋರ್ಟ್​ ತಡೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.