ETV Bharat / state

ಸಾಕ್ಷ್ಯಾಧಾರಗಳಿಲ್ಲದೇ ಎಸ್​ಸಿ - ಎಸ್​ಟಿ ದೌರ್ಜನ್ಯ ಆರೋಪದಲ್ಲಿ ದೂರು: ಪ್ರಕರಣ ರದ್ದುಪಡಿಸಿದ ಹೈಕೋರ್ಟ್ - SC ST ACT CASE QUASHESD

ಎಸ್​ಸಿ-ಎಸ್​ಟಿ ದೌರ್ಜನ್ಯ ತಡೆ ಕಾಯಿದೆಯಡಿ ದಾಖಲಾದ ಪ್ರಕರಣದಲ್ಲಿ ಸೂಕ್ತ ಸಾಕ್ಷ್ಯಾಧಾರಗಳಿಲ್ಲದ ಕಾರಣ, ಅದನ್ನು ರದ್ದುಪಡಿಸಿ ಹೈಕೋರ್ಟ್ ಆದೇಶ ನೀಡಿದೆ.

high court
ಹೈಕೋರ್ಟ್ (ETV Bharat)
author img

By ETV Bharat Karnataka Team

Published : Jan 24, 2025, 9:00 PM IST

ಬೆಂಗಳೂರು: ಖಾಸಗಿ ಬ್ಯಾಂಕ್‌ ಮ್ಯಾನೇಜರ್‌ವೊಬ್ಬರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯಿದೆ (ಎಸ್​ಸಿ-ಎಸ್​ಟಿ) ಯಡಿ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.

ತಮ್ಮ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್ಜನ್ಯ ತಡೆ ಕಾಯಿದೆಯಡಿ ಹೂಡಿರುವ ಪ್ರಕರಣ ರದ್ದು ಕೋರಿ ಬೆಂಗಳೂರಿನ ಗಿರಿನಗರದ ಕೆ.ಎಸ್‌.ವಿಶ್ವಕಿರಣ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಉಮಾ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಅಲ್ಲದೇ, ಇದು ದುರ್ಬಲರ ರಕ್ಷಣೆಗಾಗಿ ಇರುವ ವಿಶೇಷ ಕಾಯಿದೆಯ ದುರುಪಯೋಗದ ಮತ್ತೊಂದು ಪ್ರಕರಣವಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಈ ಪ್ರಕರಣದಲ್ಲಿ ಸಾರ್ವಜನಿಕರ ಕಣ್ಣೆದುರು ಅರ್ಜಿದಾರರ ಆರೋಪಿ ಜಾತಿ ಹೆಸರಿನಲ್ಲಿ ನಿಂದನೆ ಮಾಡಿದ್ದಾರೆ ಎಂದು ಹೇಳಲು ಯಾವುದೇ ಸಾಕ್ಷ್ಯವಿಲ್ಲ, ಆರೋಪಗಳಲ್ಲೂ ಅದು ಸ್ಪಷ್ಟವಾಗಿಲ್ಲ. ಆ ಹಿನ್ನೆಲೆಯಲ್ಲಿ ಇದು ಸಮಾಜದ ದುರ್ಬಲ ವರ್ಗದವರ ರಕ್ಷಣೆಗಾಗಿ ರೂಪಿಸಿರುವ ವಿಶೇಷ ಕಾನೂನಿನ ದುರ್ಬಳಕೆಯಾಗಿದೆ. ಹಾಗಾಗಿ, ಪ್ರಕರಣವನ್ನು ರದ್ದುಗೊಳಿಸಲಾಗುತ್ತಿದೆ ಎಂದು ಪೀಠ ಹೇಳಿದೆ.

ಹಲವು ಪುಟಗಳ ದಾಖಲೆಗಳನ್ನು ಪರಿಶೀಲಿಸಿದ ಬಳಿಕ ನ್ಯಾಯಪೀಠ, ಆರೋಪಿಗೆ ಹೇಗೆ ಕೃತ್ಯ ಎಸಗಿದ್ದಾರೆ ಎಂದು ವಿವರಿಸಲಾಗಿದೆ. ಆರೋಪಿ ಅಂಜಿನಮ್ಮ ಎಂಬ ಮಹಿಳೆಯನ್ನು ಜಾತಿ ಹೆಸರು ಹೇಳಿ ಕೆಟ್ಟ ಶಬ್ಧ ನಿಂದಿಸಿದ್ದಾರೆ ಎಂದು ದೂರುದಾರರು ಹೇಳಿದ್ದಾರೆ. ಆದರೆ, ಆ ಮಹಿಳೆ ದೂರು ನೀಡಿಲ್ಲ. ದೂರು ನೀಡಿರುವುದು ರಾಮಯ್ಯ ಎಂಬುವರು. ಆದರೆ ರಾಮಯ್ಯಗೆ ಘಟನೆ ಬಗ್ಗೆ ಸ್ಪಷ್ಟತೆ ಇಲ್ಲ ಎಂಬುದಾಗಿ ಪೀಠ ತನ್ನ ಆದೇಶದಲ್ಲಿ ತಿಳಿಸಲಾಗಿದೆ.

ಮೊದಲಿಗೆ ಆರೋಪಿಗೆ ಆ ಮಹಿಳೆಯ ಪರಿಚಯವೇ ಇಲ್ಲ, ಹಾಗಿದ್ದಾಗ ಹೇಗೆ ನಿಂದಿಸಲಾಗುತ್ತದೆ? ಈ ಪ್ರಕರಣದಲ್ಲಿ ತನಿಖೆ ನಡೆದರೂ ದೂರಿನಲ್ಲಿಯೇ ನಿರ್ದಿಷ್ಟ ಆರೋಪಗಳು ಇಲ್ಲದೇ ಇರುವುದರಿಂದ ಏನೂ ಪ್ರಯೋಜನವಾಗುವುದಿಲ್ಲ. ಆದ್ದರಿಂದ ಪ್ರಕರಣ ಮುಂದುವರೆಸಿದರೆ ಕಾನೂನಿನ ದುರ್ಬಳಕೆ ಆಗಲಿದೆ. ಹಾಗಾಗಿ, ಕ್ರಿಮಿನಲ್‌ ಪ್ರಕ್ರಿಯೆ ರದ್ದುಗೊಳಿಸಲಾಗುತ್ತದೆ ಎಂದು ನ್ಯಾಯಪೀಠ ತಿಳಿಸಿದೆ.

ಪ್ರಕರಣದ ಹಿನ್ನೆಲೆ: ಕೆ.ಎನ್‌.ರಾಮಯ್ಯ ಎಂಬವರು ಬ್ರೋಕರ್‌ ಆಗಿ ಕೆಲಸ ಮಾಡುತ್ತಿದ್ದರು. ಅರ್ಜಿದಾರರ ಕೆ.ಎನ್‌.ವಿಶ್ವಕಿರಣ್‌ ಕೆಲವು ದಾಖಲೆಗಳನ್ನು ಒದಗಿಸುವಂತೆ ಕೋರಿ 10 ಸಾವಿರ ರೂ. ನೀಡಿದ್ದರು. ಆರೋಪಿಯ ನಿರ್ದೇಶನದಂತೆ ದೂರುದಾರರು ದಾಖಲೆಗಳನ್ನು ಸಂಗ್ರಹಿಸಲು ಹೋದರೆ ಅದನ್ನು ಅರ್ಜಿದಾರರು ಪಡೆದಿರಲಿಲ್ಲ. ಹೆಬ್ಬಾಳ ಬಸ್‌ ನಿಲ್ದಾಣದಲ್ಲಿ ಅಂಜಿನಮ್ಮ ಎಂಬ ಮಹಿಳೆ ರಾಮಯ್ಯ ಅವರಿಗಾಗಿ ಕಾಯುತ್ತಿದ್ದರು. ಆಗ ಅಲ್ಲಿಗೆ ಬಂದ ಆರೋಪಿ ಪರಿಶಿಷ್ಟ ಜಾತಿಗೆ ಸೇರಿದ ರಾಮಯ್ಯ ಅವರನ್ನು ಜಾತಿ ನಿಂದನೆ ಮಾಡಿ, ಮಹಿಳೆಯನ್ನು ಅತ್ಯಂತ ಕೆಟ್ಟ ಶಬ್ಧಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ರಾಮಯ್ಯ ಹೆಬ್ಬಾಳ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ದೂರಿಗೆ ಸಂಬಂಧಿಸಿದಂತೆ ಪೊಲೀಸರು ಎಸ್​ಸಿ - ಎಸ್​ಟಿ ದೌರ್ಜನ್ಯ ತಡೆ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದರು. ಆ ಕುರಿತ ಎಫ್‌ಐಆರ್‌ ಮತ್ತು ವಿಚಾರಣಾ ನ್ಯಾಯಾಲಯದಲ್ಲಿದ್ದ ಪ್ರಕರಣ ರದ್ದು ಕೋರಿ ಅರ್ಜಿದಾರರು ಹೈಕೋರ್ಟ್‌ ಮೊರೆ ಹೋಗಿದ್ದರು.

ಇದನ್ನೂ ಓದಿ: 27 ವಾರಗಳ ಗರ್ಭಪಾತಕ್ಕೆ ಕೋರಿ ಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆ ಅರ್ಜಿ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.