ETV Bharat / state

ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಯತ್ನಾಳ್ ವಿರುದ್ಧದ ಪ್ರಕರಣ ರದ್ದು - FIR AGAINST YATNAL QUASHED

ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ ಸಂಬಂಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್​ ರದ್ದುಪಡಿಸಿದೆ.

ಯತ್ನಾಳ್ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್
ಯತ್ನಾಳ್ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್ (ETV Bharat)
author img

By ETV Bharat Karnataka Team

Published : Dec 12, 2024, 4:12 PM IST

ಬೆಂಗಳೂರು: ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ಅನ್ನು ಹೈಕೋರ್ಟ್ ಇಂದು ರದ್ದುಪಡಿಸಿ ಆದೇಶಿಸಿತು.

ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಆದೇಶ ಪ್ರಕಟಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, "ರಾಹುಲ್‌ ಗಾಂಧಿ ವಿದೇಶದಲ್ಲಿ ಕೆಲವು ಹೇಳಿಕೆಗಳನ್ನು ನೀಡಿದ್ದರು. ಅದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆಯಾಗಿ ಅರ್ಜಿದಾರರು ಹೇಳಿಕೆ ನೀಡಿದ್ದಾರೆ. ಆದರೆ, ಪ್ರಕರಣ ಸಂಬಂಧ ದಾಖಲಾಗಿದ್ದ ಎಫ್‌ಐಆರ್‌ನಲ್ಲಿರುವ ಯಾವುದೇ ಆರೋಪ ಸಂಬಂಧಿತ ಅಂಶಗಳು ಇಲ್ಲ. ನಮ್ಮ ಕಕ್ಷಿದಾರರ ಹೇಳಿಕೆಗೆ ಸಂಬಂಧಿಸಿದಂತೆ ಅಸಮಾಧಾನವಾಗಿದ್ದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಬಹುದಾಗಿದೆ. ಅದನ್ನು ಸಮರ್ಥನೆ ಮಾಡಿಕೊಳ್ಳಲಾಗುವುದು" ಎಂದು ಪೀಠಕ್ಕೆ ವಿವರಿಸಿದರು.

ದೂರುದಾರ ಪರ ವಾದ ಮಂಡಿಸಿದ ವಕೀಲ ಸಂಕೇತ್ ಏಣಗಿ, "ಆರೋಪಕ್ಕೆ ಸಂಬಂಧಿಸಿದಂತೆ ಎಲ್ಲ ಅಂಶಗಳನ್ನು ಎಫ್‌ಐಆರ್‌ನಲ್ಲಿ ವಿವರಿಸಿಲ್ಲ. ಆದರೆ, ಅರ್ಜಿದಾರರ ಹೇಳಿಕೆಗಳು ಮಹಿಳೆಯ ಘನತೆಗೆ ಧಕ್ಕೆ ಮಾಡುವಂಥದ್ದು. ರಾಹುಲ್ ಗಾಂಧಿ ಅವರ ತಾಯಿಯ ನಡತೆ ಕುರಿತಂತೆ ಮಾತನಾಡಿದ್ದಾರೆ. ಈ ಹೇಳಿಕೆಯಿಂದಲೂ ಮಹಿಳೆಯ ಘನತೆಗೆ ಧಕ್ಕೆಯಾಗುತ್ತದೆ" ಎಂದು ಪೀಠಕ್ಕೆ ತಿಳಿಸಿದರು.

"ಅರ್ಜಿದಾರರು, ಸಾಮಾನ್ಯ ವ್ಯಕ್ತಿಯಲ್ಲ. ಸುಶಿಕ್ಷಿತರು. ಸಂಸದರು, ಶಾಸಕರು ಕೇಂದ್ರ ಸಚಿವರೂ ಆಗಿದ್ದಾರೆ. ಈ ರೀತಿಯ ಹೇಳಿಕೆಗಳನ್ನು ನೀಡಿದ್ದಾರೆ. ಆದ್ದರಿಂದ ಎಫ್‌ಐಆರ್ ರದ್ದು ಮಾಡಬಾರದು. ತನಿಖೆ ನಡೆಸಿದಲ್ಲಿ ಸತ್ಯಾಂಶಗಳು ಹೊರಬರಲಿದೆ" ಎಂದು ಕೋರಿದರು.

ಇದಕ್ಕೆ ಆಕ್ಷೇಪಿಸಿದ ಅರ್ಜಿದಾರರ ಪರ ವಕೀಲರು, "ಈ ಹೇಳಿಕೆಯಲ್ಲಿ ಮಹಿಳೆಯ ನಡತೆಯ ಬಗ್ಗೆ ಏನನ್ನಾದರೂ ಹೇಳಿದ್ದಾರೆಯೇ? ಇದರಲ್ಲಿ ಧಾರ್ಮಿಕ ಭಾವನೆಗಳನ್ನು ಪ್ರಶ್ನಿಸುವ ಪ್ರಶ್ನೆ ಎಲ್ಲಿದೆ” ಎಂದು ಪ್ರಶ್ನಿಸಿದರು. "ಒಬ್ಬ ರಾಜಕಾರಣಿಯಾಗಿದ್ದು, ದೇಶದ ಹೊರಭಾಗದಲ್ಲಿ ಭಾರತದ ವಿರುದ್ಧ ಅಸಂಬದ್ಧ ಹೇಳಿಕೆಗೆಳನ್ನು ನೀಡಿದ್ದಾರೆ. ಅವರ ಹೇಳಿಕೆ ಸಂಬಂಧ ಪ್ರತಿಕ್ರಿಯೆ ನೀಡಿದ್ದಾರೆ. ಈ ಹೇಳಿಕೆಯಿಂದ ನೋವಾಗಿದ್ದಲ್ಲಿ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಲಿ" ಎಂದು ಪೀಠಕ್ಕೆ ತಿಳಿಸಿದರು. ವಾದ ಆಲಿಸಿದ ಪೀಠ, ಆದೇಶ ಕಾಯ್ದಿರಿಸಿತ್ತು.

ಪ್ರಕರಣದ ಹಿನ್ನೆಲೆ: ರಾಹುಲ್ ಗಾಂಧಿ ವಿದೇಶದಲ್ಲಿ ಭಾರತದ ಕುರಿತಂತೆ ಕೆಲವು ವಿಷಯಗಳನ್ನು ಚರ್ಚೆ ನಡೆಸಿದ್ದರು. ಈ ಕುರಿತು ಯತ್ನಾಳ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದರು. ಈ ಸಂದರ್ಭದಲ್ಲಿ ಕೆಲವು ಅವಹೇಳನಕಾರಿ ಹೇಳಿಕೆಗಳನ್ನು ನೀಡಲಾಗಿದೆ ಎಂದು ಆರೋಪಿಸಿದ ಕಾಂಗ್ರೆಸ್ ಕಾರ್ಯಕರ್ತ ಮನೋಹರ್ ಎಂಬವರು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಯತ್ನಾಳ್ ವಿರುದ್ಧ ಸೆಕ್ಷನ್ 192 (ಗಲಭೆ ನಡೆಸುವುದಕ್ಕಾಗಿ ಉದ್ದೇಶಪೂರ್ವಕವಾಗಿ ಪ್ರಚೋದನೆ), 196 (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆ ಆಧಾರದಲ್ಲಿ ವಿವಿಧ ಗುಂಪುಗಳ ನಡುವೆ ದ್ವೇಷವನ್ನುಂಟು ಮಾಡುವುದು) ಹಾಗೂ 353(2) (ಸಾರ್ವಜನಿಕ ಕಿಡಿಗೇಡಿತನಕ್ಕೆ ಅವಕಾಶವಾಗುವಂತಹ ಹೇಳಿಕೆ) ಅಡಿ ಪ್ರಕರಣ ದಾಖಲಾಗಿತ್ತು. ಇದನ್ನು ರದ್ದುಪಡಿಸುವಂತೆ ಕೋರಿ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ಇದನ್ನೂ ಓದಿ: ಹಾವೇರಿ ರೈತ ಆತ್ಮಹತ್ಯೆ ಕುರಿತು ಸುಳ್ಳುಸುದ್ದಿ ಹಂಚಿಕೊಂಡ ಆರೋಪ: ಸಂಸದ ತೇಜಸ್ವಿ ಸೂರ್ಯ ವಿರುದ್ಧದ ಪ್ರಕರಣ ರದ್ದು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.