ETV Bharat / state

ಧರ್ಮದ ಹೆಸರಿನಲ್ಲಿ ಚುನಾವಣಾ ಪ್ರಚಾರ ಆರೋಪ: ಯತ್ನಾಳ ವಿರುದ್ಧದ ಪ್ರಕರಣ ರದ್ದು - Yatnal Case

ಚುನಾವಣೆ ವೇಳೆ ಧರ್ಮದ ಹೆಸರಲ್ಲಿ ಪ್ರಚಾರ ಮಾಡಿದ ಆರೋಪದ ಮೇಲೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ವಿರುದ್ಧ ದಾಖಲಾಗಿದ್ದ ಖಾಸಗಿ ದೂರನ್ನು ರದ್ದುಪಡಿಸಿ ಹೈಕೋರ್ಟ್ ಆದೇಶಿಸಿದೆ.

ಯತ್ನಾಳ ವಿರುದ್ಧದ ಪ್ರಕರಣ ರದ್ದು
ಯತ್ನಾಳ ವಿರುದ್ಧದ ಪ್ರಕರಣ ರದ್ದು (ETV Bharat)
author img

By ETV Bharat Karnataka Team

Published : Aug 23, 2024, 6:56 AM IST

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ಎಲ್ಲಾ ಹಿಂದೂಗಳು ಕಾಂಗ್ರೆಸ್‌ ಪಕ್ಷವನ್ನು ಬಹಿಷ್ಕರಿಸುತ್ತಾರೆ ಎಂಬ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಸರ್ಕಾರಿ ಅಧಿಕಾರಿಗಳ ಆದೇಶ ಉಲ್ಲಂಘಿಸಿದ ಆರೋಪ ಸಂಬಂಧ ವಿಜಯಪುರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ವಿರುದ್ಧದ ಖಾಸಗಿ ದೂರು ಮತ್ತು ಗದಗ ಜಿಲ್ಲೆಯ 1ನೇ ಹೆಚ್ಚುವರಿ ಸಿವಿಲ್‌ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ವಿಚಾರಣೆಯನ್ನು ಹೈಕೋರ್ಟ್‌ ರದ್ದುಪಡಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದ ಖಾಸಗಿ ದೂರು ಮತ್ತು ವಿಚಾರಣಾ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಶಾಸಕ ಯತ್ನಾಳ್‌ ಅವರು ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ.

'ಚುನಾವಣಾ ಸಂಚಾರ ವಿಚಕ್ಷಣಾ ತಂಡದ ಅಧಿಕಾರಿ ದಾಖಲಿಸಿದ್ದ ಖಾಸಗಿ ದೂರು ಆಧರಿಸಿ ವಿಚಾರಣಾ ನ್ಯಾಯಾಲಯವು ಭಾರತೀಯ ದಂಡ ಸಂಹಿತೆ ಸೆಕ್ಷನ್ 188 ಅಡಿ ಸರ್ಕಾರಿ ಅಧಿಕಾರಿಗಳು ಹೊರಡಿಸಿದ ಆದೇಶದ ಉಲ್ಲಂಘಿಸಿದ ಅಪರಾಧ ಕಾಗ್ನಿಜೆನ್ಸ್‌ ತೆಗೆದುಕೊಂಡಿತ್ತು. ಹಾಗೆಯೇ, ಅರ್ಜಿದಾರರಿಗೆ ಸಮನ್ಸ್‌ ಜಾರಿಗೊಳಿಸಿದೆ. ಆದರೆ, ಈ ಪ್ರಕರಣದಲ್ಲಿ ಐಪಿಸಿ ಸೆಕ್ಷನ್‌ 188 ಅನ್ವಯಿಸುವುದಿಲ್ಲ. ಹಾಗಾಗಿ, ವಿಚಾರಣಾ ನ್ಯಾಯಾಲಯ ಆದೇಶ ರದ್ದುಪಡಿಸಬೇಕು ಎಂದು ವಿಚಾರಣೆ ವೇಳೆ ಯತ್ನಾಳ್‌ ಪರ ವಕೀಲ ವೆಂಕಟೇಶ್‌ ದಳವಾಯಿ ಕೋರಿದರು.

ಪ್ರಕರಣದ ಹಿನ್ನೆಲೆ: ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ 2023ರ ಮೇ 2ರಂದು ಗದಗ ನಗರ ಬಿಜೆಪಿ ಅಭ್ಯರ್ಥಿ ಮೆಣಸಿನಕಾಯಿ ಪರ ರೋಡ್‌ ಶೋ ನಡೆದಿತ್ತು. ಇದಾದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಬಸನಗೌಡ ಪಾಟೀಲ ಯತ್ನಾಳ್‌ ಮಾತನಾಡಿದ್ದರು. 2ಎ ಮೀಸಲಾತಿ ವಿಚಾರವಾಗಿ ಮಾಧ್ಯಮದವರು ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ್ದ ಯತ್ನಾಳ್‌, 'ಎಲ್ಲಾ ಹಿಂದೂಗಳು ಕಾಂಗ್ರೆಸ್‌ ಪಕ್ಷವನ್ನು ಬಹಿಷ್ಕಾರ ಮಾಡುತ್ತಾರೆ’ ಎಂದಿದ್ದರು. ಇದು ಮಾಧಗ್ಯಮಗಳು ಮತ್ತು ಯೂಟ್ಯೂಬ್‌ ಚಾಲನೆಗಳಲ್ಲಿ ಪ್ರಸಾರವಾಗಿ ವೈರಲ್‌ ಆಗಿತ್ತು.

ಇದನ್ನು ಆಧರಿಸಿ ಗದಗ ಮತಕ್ಷೇತ್ರದ ಸಂಚಾರ ವಿಚಕ್ಷಣಾ ದಳದ ಅಧಿಕಾರಿಯಾಗಿದ್ದ ಸಹಾಯಕ ಎಂಜಿನಿಯರ್‌ ಮಂಜುನಾಥ್‌, ಗದಗ 1ನೇ ಹೆಚ್ಚುವರಿ ಸಿವಿಲ್‌ ಮತ್ತು ಜೆಎಂಎಫ್‌ಸಿಗೆ ಖಾಸಗಿ ದೂರು ದಾಖಲಿಸಿದ್ದರು. ವಿಚಾರಣಾ ನ್ಯಾಯಾಲಯ ಯತ್ನಾಳ್‌ ಅವರಿಗೆ ಸಮನ್ಸ್‌ ಜಾರಿಗೊಳಿಸಿ 2023ರ ಮೇ 11ರಂದು ಆದೇಶಿಸಿತ್ತು.

ಇದನ್ನೂ ಓದಿ: ಗಂಡನಿಂದ ಪ್ರತಿ ತಿಂಗಳು 6 ಲಕ್ಷ ರೂಪಾಯಿ ಪರಿಹಾರ ಕೋರಿದ ಪತ್ನಿಗೆ ಹೈಕೋರ್ಟ್ ತರಾಟೆ - High Court

ETV Bharat Logo

Copyright © 2024 Ushodaya Enterprises Pvt. Ltd., All Rights Reserved.