ETV Bharat / state

ಮೇಕೆದಾಟು ಪಾದಯಾತ್ರೆ: ಯತೀಂದ್ರ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್ - Yatindra Siddaramaiah - YATINDRA SIDDARAMAIAH

ಕೊರೊನಾ ನಿರ್ಬಂಧದ ಮಧ್ಯೆ ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡು ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ದಾಖಲಾಗಿದ್ದ ಎಫ್​ಐಆರ್ ರದ್ದಾಗಿದೆ.

ಯತೀಂದ್ರ ಸಿದ್ದರಾಮಯ್ಯ, ಹೈಕೋರ್ಟ್
ಯತೀಂದ್ರ ಸಿದ್ದರಾಮಯ್ಯ, ಹೈಕೋರ್ಟ್ (ETV Bharat)
author img

By ETV Bharat Karnataka Team

Published : Jul 27, 2024, 7:26 AM IST

ಬೆಂಗಳೂರು: ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಒತ್ತಾಯಿಸಿ ರಾಜ್ಯ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪಾದಯಾತ್ರೆಯಲ್ಲಿ ಭಾಗಿಯಾಗಿ ಕೋವಿಡ್-19 ಮಾರ್ಗಸೂಚಿ ಉಲ್ಲಂಘಿಸಿದ ಆರೋಪ ಸಂಬಂಧ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ರಾಮನಗರ ಜಿಲ್ಲೆಯ ಸಾತನೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್ ಅನ್ನು ಹೈಕೋರ್ಟ್ ರದ್ದುಪಡಿಸಿದೆ.

ತಮ್ಮ ವಿರುದ್ಧದ ಎಫ್‌ಐಆರ್ ಹಾಗೂ ಕನಕಪುರದ 1ನೇ ಹೆಚ್ಚುವರಿ ಸಿವಿಲ್ ಮತ್ತು ನ್ಯಾಯಾಲಯದ ವಿಚಾರಣೆ ರದ್ದುಕೋರಿ ಯತೀಂದ್ರ ಸಿದ್ದರಾಮಯ್ಯ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಇದೇ ಪ್ರಕರಣ ಸಂಬಂಧ ಕಾಂಗ್ರೆಸ್ ಇತರೆ ಮುಖಂಡರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಮತ್ತು ಅದಕ್ಕೆ ಸಂಬಂಧಿಸಿದ ಅಧೀನ ನ್ಯಾಯಾಲಯದ ವಿಚಾರಣೆ ರದ್ದುಪಡಿಸಿ ಹೈಕೋರ್ಟ್ ಈ ಹಿಂದೆ ಆದೇಶಿಸಿತ್ತು. ಅದನ್ನು ಪರಿಗಣಿಸಿದ ನ್ಯಾಯಪೀಠ, ಯತೀಂದ್ರ ಅವರ ವಿರುದ್ಧದ ಪ್ರಕರಣವನ್ನು ರದ್ದುಪಡಿಸಿದೆ.

ಪ್ರಕರಣದ ಹಿನ್ನೆಲೆ: ಮೇಕೆದಾಟು ಅಣೆಕಟ್ಟು ಯೋಜನೆ ಜಾರಿಗೆ ಆಗ್ರಹಿಸಿ ರಾಜ್ಯ ಕಾಂಗ್ರೆಸ್​ ಘಟಕದ ವತಿಯಿಂದ 2022ರ ಜ.9ರಿಂದ 10 ದಿನಗಳ ಕಾಲ ರಾಮನಗರ ಜಿಲ್ಲೆಯ ಮೇಕದಾಟು ಪ್ರದೇಶದಿಂದ ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜುವರೆಗೆ ಪಾದಯಾತ್ರೆ ಹಮ್ಮಿಕೊಂಡಿತ್ತು. ಪಾದಯಾತ್ರೆಯಲ್ಲಿ ಭಾಗಿಯಾಗಿ ಕೋವಿಡ್ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ-2020ರ ಅಡಿಯಲ್ಲಿ ಸಾತನೂರು ಪೊಲೀಸ್ ಠಾಣೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಪಕ್ಷದ 30 ನಾಯಕರ ವಿರುದ್ಧ 2022ರ ಜ.9ರಂದು ಎಫ್‌ಐಆರ್ ದಾಖಲಾಗಿತ್ತು. ಪ್ರಕರಣವು ಕನಕಪುರ 1ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್​ಸಿ ಕೋರ್ಟ್​ನಲ್ಲಿ ವಿಚಾರಣೆ ಹಂತದಲ್ಲಿತ್ತು. ಪ್ರಕರಣದಲ್ಲಿ ಯತೀಂದ್ರ ಅವರು 20ನೇ ಆರೋಪಿಯಾಗಿದ್ದರು.

ಸಿಎಂ, ಡಿಸಿಎಂ ಪ್ರಕರಣವೂ ರದ್ದು: ಕೊರೊನಾ ನಿಯಂತ್ರಣಕ್ಕೆ ವಿಧಿಸಿದ್ದ ನಿರ್ಬಂಧಗಳನ್ನು ಉಲ್ಲಂಘಿಸಿ ಮೇಕೆದಾಟು ಯೋಜನೆ ಅನುಷ್ಟಾನಕ್ಕೆ ಪಾದಯಾತ್ರೆ ನಡೆಸಿದ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಮತ್ತಿತರ ಕಾಂಗ್ರೆಸ್ ಪಕ್ಷದ ಸದಸ್ಯರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಕಳೆದ ವರ್ಷ ಹೈಕೋರ್ಟ್ ರದ್ದು ಪಡಿಸಿತ್ತು. ಇದರಿಂದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಪಾದಯಾತ್ರೆಯ ವೇಳೆ ದಾಖಲಾಗಿದ್ದ ನಾಲ್ಕು ಪ್ರಕರಣಗಳು ರದ್ದಾದಂತಾಗಿತ್ತು. ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಮತ್ತಿತರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಪ್ರಕರಣವನ್ನು ರದ್ದುಪಡಿಸಿ ಆದೇಶಿಸಿತ್ತು.

ಇದನ್ನೂ ಓದಿ: ಕೆಆರ್​​ಎಸ್ ಬೃಂದಾವನಕ್ಕೆ ಹೊಸ ರೂಪ: ಕಾವೇರಿ ಪ್ರತಿಮೆ, ವಾಟರ್ ಪಾರ್ಕ್ ಸೇರಿ ಡಿಸ್ನಿ ಲ್ಯಾಂಡ್ ಮಾದರಿ ಅಭಿವೃದ್ಧಿಗೆ ಮುಂದಾದ ಸರ್ಕಾರ - KRS Brindavan Garden

ETV Bharat Logo

Copyright © 2025 Ushodaya Enterprises Pvt. Ltd., All Rights Reserved.