ETV Bharat / state

ಕೊಳಗೇರಿಯಲ್ಲಿ ಮನೆ ನಿರ್ಮಾಣಕ್ಕೆ ಗುತ್ತಿಗೆದಾರರ ಅವಧಿ ವಿಸ್ತರಿಸಲು ನಿರಾಕರಿಸಿದ ಹೈಕೋರ್ಟ್

author img

By ETV Bharat Karnataka Team

Published : Jan 28, 2024, 11:36 AM IST

ರಾಜರಾಜೇಶ್ವರಿ ನಗರ ಕೊಳಚೆ ಪ್ರದೇಶದಲ್ಲಿ ಮನೆಗಳ ನಿರ್ಮಾಣಕ್ಕಾಗಿ ಗುತ್ತಿಗೆದಾರರ ಅವಧಿ ವಿಸ್ತರಿಸಲು ರಾಜ್ಯ ಹೈಕೋರ್ಟ್ ನಿರಾಕರಿಸಿದೆ. ​

ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ಕೊಳಗೇರಿ ನಿವಾಸಿಗಳ ಜೀವನ ಸ್ಥಿತಿಗತಿಗಳನ್ನು ಸಮರೋಪಾದಿಯಲ್ಲಿ ಸುಧಾರಿಸಬೇಕಾಗಿದ್ದು, ಕೊಳಚೆ ಪ್ರದೇಶದ ಜನರ ಮನೆ ನಿರ್ಮಾಣ ಕಾಮಗಾರಿಯನ್ನು ಲಘುವಾಗಿ ಪರಿಗಣಿಸಬಾರದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಕೊಳಚೆ ನಿವಾಸಿಗಳಿಗೆ ವಸತಿ ಸೌಲಭ್ಯ ಕಲ್ಪಿಸುವ ಸಲುವಾಗಿ ನೀಡಿದ್ದ ಗುತ್ತಿಗೆ ಅವಧಿಯನ್ನು ಎರಡನೇ ಬಾರಿ ವಿಸ್ತರಿಸಲು ಸೂಚಿಸುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿದೆ.

ನಗರದ ವಿವಿಧ ಕೊಳಗೇರಿ ಪ್ರದೇಶಗಳಲ್ಲಿ ಮನೆಗಳ ನಿರ್ಮಾಣ ಕುರಿತಂತೆ ಗುತ್ತಿಗೆ ಪಡೆದಿದ್ದ ಐಶ್ವರ್ಯಗಿರಿ ಕನ್ಸ್ಟ್ರಕ್ಷನ್ಸ್ ಲಿಮಿಟೆಡ್ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಪ್ರಸನ್ನ ಅವರಿದ್ದ ನ್ಯಾಯಪೀಠ ಅರ್ಜಿ ವಜಾಗೊಳಿಸಿ ಆದೇಶಿಸಿದೆ. ಕೊಳಗೇರಿ ನಿವಾಸಿಗಳ ಜೀವನ ಸ್ಥಿತಿಯನ್ನು ಸಮರೋಪಾದಿಯಲ್ಲಿ ಸುಧಾರಿಸಬೇಕಾಗಿದೆ. ಅವರ ನೆಲೆಸಲು ಮನೆಗಳ ಅನಿವಾರ್ಯವಿರಲಿದೆ. ಇದಕ್ಕಾಗಿಯೇ ಮಂಡಳಿ ಮನೆಗಳ ನಿರ್ಮಾಣ ಮಾಡುವ ಮೂಲಕ ಅವರಿಗೆ ಪುನರ್ವಸತಿ ಕಲ್ಪಿಸಲು ಮುಂದಾಗಿದೆ. ಗುತ್ತಿಗೆ ಪಡೆದು ಅರ್ಜಿದಾರ ಸಂಸ್ಥೆ 10 ವರ್ಷ ಕಳೆದರೂ ಮನೆಗಳ ಕಾಮಗಾರಿ ಪೂರ್ಣಗೊಂಡಿಲ್ಲ. ಎರಡು ಬಾರಿ ಅವಧಿ ವಿಸ್ತರಣೆ ಮಾಡಿದ್ದರೂ ಪೂರ್ಣಗೊಳಿಸಿಲ್ಲ. ಈ ಮನೆಗಳನ್ನು ನಿರ್ಮಿಸುತ್ತಿರುವ ಕಂಪೆನಿ (ಅರ್ಜಿದಾರರು) ಟೆಂಡರ್‌ನ್ನು ಲಘುವಾಗಿ ಪರಿಗಣಿಸುವಂತಾಗಬಾರದು. ಆದ್ದರಿಂದ ಅರ್ಜಿಯನ್ನು ತಿರಸ್ಕರಿಸಲಾಗುತ್ತಿದೆ ಎಂದು ಪೀಠ ತಿಳಿಸಿದೆ.

ಗುತ್ತಿಗೆ ನೀಡಿರುವ ಕಾಮಗಾರಿಯ ಅಂಕಿ ಅಂಶಗಳನ್ನು ಪರಿಶೀಲಿಸಿದಾಗ ಮೊದಲನೇ ಪ್ಯಾಕೇಜ್‌ನ 543 ಮನೆಗಳಲ್ಲಿ 197 ಪೂರ್ಣಗೊಂಡಿವೆ. 123 ಅಪೂರ್ಣವಾಗಿದೆ. 223 ಮನೆಗಳು ಇನ್ನೂ ಪ್ರಾರಂಭವಾಗಬೇಕಾಗಿದೆ. ಎರಡನೇ ಪ್ಯಾಕೇಜ್‌ನ 575 ಮನೆಗಳಲ್ಲಿ 508 ಮನೆಗಳನ್ನು ಪ್ರಾರಂಭಿಸಿದ್ದು, 308 ಪೂರ್ಣಗೊಂಡಿದೆ. 198 ಅಪೂರ್ಣವಾಗಿವೆ 73 ಮನೆಗಳನ್ನು ಪ್ರಾರಂಭಿಸಬೇಕಾಗಿದೆ. ಮೂರನೇ ಪ್ಯಾಕೇಜ್‌ನಲ್ಲಿ 9 ಕೊಳಚೆ ಪ್ರದೇಶದಲ್ಲಿ ಒಟ್ಟು 1978 ಮನೆಗಳಲ್ಲಿ ನಿರ್ಮಾಣವಾಗಬೇಕಾಗಿದೆ. ಅವುಗಳಲ್ಲಿ 1208 ಮನೆಗಳನ್ನು ಪ್ರಾರಂಭಿಸಿದ್ದ 674 ಪೂರ್ಣಗೊಳಿಸಲಾಗಿದೆ. 505 ಅಪೂರ್ಣಗೊಂಡಿದೆ ಮತ್ತು 799 ನ್ನೂ ಈವರೆಗೂ ಪ್ರಾರಂಭಿಸಿಲ್ಲ ಎಂಬ ಅಂಶ ಗೊತ್ತಾಗಲಿದೆ. ಅಲ್ಲದೆ, ಇದೇ ಕಾಮಗಾರಿಗೆ ಸಂಬಂಧಿಸಿದಂತೆ ಪ್ರತ್ಯೇಕ ಗುತ್ತಿಗೆ ಕರೆಯಲಾಗಿದ್ದು, ಕಾರ್ಯಾದೇಶ ನೀಡುವುದೊಂದೆ ಭಾಕಿ ಇದೆ. ಈ ಅಂಶಗಳನ್ನು ಪರಿಗಣಿಸಿ ಗುತ್ತಿಗೆ ಅವಧಿ ವಿಸ್ತರಣೆ ಮಾಡುವ ಅಗತ್ಯವಿಲ್ಲ ಎಂದು ಪೀಠ ಹೇಳಿದೆ.

ಪ್ರಕರಣದ ಹಿನ್ನೆಲೆ: 2017ನೇ ಅವಧಿಯಲ್ಲಿ ರಾಜರಾಜೇಶ್ವರಿ ನಗರ ಕೊಳಚೆ ಪ್ರದೇಶದಲ್ಲಿ ಮನೆಗಳ ನಿರ್ಮಣ ಯೋಜನೆಗಳಿಗೆ ಸಂಬಂಧಿಸಿದಂತೆ ಹೊರಡಿಸಿದ್ದ ಮೂರು ಕಾರ್ಯಾದೇಶದ ಪ್ರಕಾರ ನಿಗದಿ ಪಡಿಸಿದ ಕಾಮಗಾರಿಯನ್ನು ಪೂರ್ಣಗೊಳಿಸಿಲು ವಿಸ್ತರಿಸಲು ಕೆಎಸ್‌ಡಿಬಿಗೆ ಮನವಿ ಮಾಡಲಾಗಿತ್ತು. ಮೊದಲ ಪ್ಯಾಕೇಜ್ ಏಳು ಕೊಳಗೇರಿಗಳಲ್ಲಿ 543 ನೆಲಮಹಡಿ ಘಟಕಗಳ ನಿರ್ಮಾಣವಾಗಿತ್ತು. ಎರಡನೇ ಪ್ಯಾಕೇಜ್ 575 ನೆಲಮಹಡಿ ಘಟಕಗಳ ನಿರ್ಮಾಣಕ್ಕೆ ಮತ್ತು ಮೂರನೇ ಪ್ಯಾಕೇಜ್‌ನಲ್ಲಿ 860 ನೆಲಮಹಡಿ ಘಟಕಗಳ ನಿರ್ಮಾಣಕ್ಕಾಗಿ ಗುತ್ತಿಗೆ ಪಡೆಯಲಾಗಿತ್ತು. ಕಾಮಗಾರಿ ಪೂರ್ಣಗೊಳ್ಳದ ಪರಿಣಾಮ ಅವಧಿ ವಿಸ್ತರಣೆ ಮನವಿ ಸಲ್ಲಿಸಿದ್ದರು.

ಆದರೆ, ಈ ಮನವಿಯನ್ನು 2018ರ ಮಾರ್ಚ್ 7ರಂದು ಕೆಎಸ್‌ಡಿಬಿ ಎರಡು ವರ್ಷಗಳ ಕಾಲ ವಿಸ್ತರಣೆ ಮಾಡಿತ್ತು. ಮತ್ತೆ ಕಾಮಗಾರಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಮತ್ತೊಂದು ಅವಧಿಗೆ ವಿಸ್ತರಣೆ ಮಾಡುವಂತೆ ಕೋರಿತ್ತು. ಇದನ್ನು ತಿರಸ್ಕರಿಸಿದ್ದ ಕೆಎಸ್‌ಡಿಬಿ 2021ರ ಜುಲೈ 27 ರಂದು ಗುತ್ತಿಗೆಯನ್ನು ಕೊನೆಗೊಳಿಸಿ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರರ ಸಂಸ್ಥೆ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ಅರ್ಜಿದಾರರ ಮನವಿಯನ್ನು ಪರಿಗಣಿಸುವಂತೆ ಕೆಎಸ್‌ಡಿಬಿ ಸೂಚನೆ ನೀಡಿತ್ತು. ಇದರಂತೆ ಅರ್ಜಿದಾರರ ಸಂಸ್ಥೆ ಮನವಿ ಸಲ್ಲಿಸಿತ್ತು. ಈ ಮನವಿಯನ್ನು ಕೆಎಸ್‌ಡಿಬಿ ತಿರಸ್ಕರಿಸಿದ ಕ್ರಮ ಪ್ರಶ್ನಿಸಿ ಮತ್ತೆ ಹೈಕೋರ್ಟ್ ಮೊರೆ ಹೋಗಲಾಗಿತ್ತು.

ಇದನ್ನೂ ಓದಿ: ರೇರಾ ಮೇಲ್ಮನವಿ ನ್ಯಾಯಾಧಿಕರಣಕ್ಕೆ ಅಧ್ಯಕ್ಷರ ನೇಮಿಸಲು ಹೈಕೋರ್ಟ್ ನಿರ್ದೇಶನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.