ETV Bharat / state

ರೇಸ್​ ಕೋರ್ಸ್​ನಲ್ಲಿ ಅಕ್ರಮ ಬೆಟ್ಟಿಂಗ್​ ಆರೋಪ: ಪ್ರಕರಣ ರದ್ಧತಿಗೆ ಹೈಕೋರ್ಟ್ ನಕಾರ - Illegal Betting Case - ILLEGAL BETTING CASE

ಬೆಂಗಳೂರು ಟರ್ಫ್ ಕ್ಲಬ್​ (ರೇಸ್​ ಕೋರ್ಸ್​)ನಲ್ಲಿ ಅಕ್ರಮ ಬೆಟ್ಟಿಂಗ್​ ಮತ್ತು ಸರ್ಕಾರಕ್ಕೆ ತೆರಿಗೆ ವಂಚಿಸುತ್ತಿದ್ದ ಆರೋಪ ಪ್ರಕರಣವನ್ನು ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.

High Court
ಹೈಕೋರ್ಟ್ (Etv Bharat)
author img

By ETV Bharat Karnataka Team

Published : May 3, 2024, 9:57 PM IST

ಬೆಂಗಳೂರು: ಬೆಂಗಳೂರು ಟರ್ಫ್ ಕ್ಲಬ್​ (ರೇಸ್​ ಕೋರ್ಸ್​)ನಲ್ಲಿ ಸೂಕ್ತ ದಾಖಲೆ ಮತ್ತು ರಿಜಿಸ್ಟರ್ ನಿರ್ವಹಿಸದೆ ಅನಧಿಕೃತವಾಗಿ ಕುದುರೆ ಪಂದ್ಯಗಳಿಗೆ ಬೆಟ್ಟಿಂಗ್ ಆಯೋಜಿಸಿ ಪಂಟರ್​ಗಳಿಂದ ಹಣ ಸಂಗ್ರಹಿಸಿದ ಆರೋಪದ ಮೇಲೆ‌ 26 ಮಂದಿ ಹಾಗೂ ಕಂಪನಿ ವಿರುದ್ಧ ದಾಖಲಾಗಿದ್ದ ಎಫ್ಐಆರ್‌​ ಮತ್ತು ಅದಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ.

ಸಿಸಿಬಿ ಪೊಲೀಸರು ದಾಖಲಿಸಿದ ಎಫ್ಐಆರ್ ಹಾಗೂ ಅದರ ಕುರಿತ ತನಿಖೆ ರದ್ದುಪಡಿಸಲು ಕೋರಿ ಸೂರ್ಯ ಆ್ಯಂಡ್​ ಕೋ ಸೇರಿದಂತೆ ಬೆಂಗಳೂರು ಟರ್ಫ್ ಕ್ಲಬ್‌ ಆವರಣದಲ್ಲಿ ಹಲವು ಅಕ್ರಮ ಬೆಟ್ಟಿಂಗ್​ ನಡೆಸುತ್ತಿದ್ದ 26 ಎಂಟರ್‌ಪ್ರೈಸಸ್ ಕಂಪನಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜಿತ್​ ಶೆಟ್ಟಿ ಅವರಿದ್ದ ಏಕ ಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.

ಅರ್ಜಿದಾರರು ಕೋಟ್ಯಂತರ ರೂ.ಗಳ ಅವ್ಯವಹಾರ ಮಾಡಿದ್ದಾರೆ ಎಂಬ ಅಂಶ ತನಿಖೆ ಸಂದರ್ಭದಲ್ಲಿ ಬಹಿರಂಗವಾಗಿದೆ. ಇದು ಅತ್ಯಂತ ಗಂಭೀರ ಸ್ವರೂಪದ ಆರೋಪವಾಗಿದೆ. ಜಿಎಸ್​ಟಿ ಮತ್ತು ಟಿಡಿಎಸ್​ ಮೊತ್ತ ಪಾವತಿಗೆ ಸಂಗ್ರಹಿಸಿರುವ ಕೊಟ್ಯಂತರ ರೂ.ಗಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಪ್ರಕರಣದ ಆರೋಪ ಸಂಬಂಧ ದಾಖಲಾಗಿರುವ ಎಫ್​ಐಆರ್​ ಸಾಬೀತುಪಡಿಸುವ ಉದ್ದೇಶದಿಂದ ಪ್ರಕರಣದ ತನಿಖೆ ನಡೆಯುತ್ತಿದೆ. ಆರೋಪವನ್ನು ಸಾಬೀತುಪಡಿಸಲು ಅಗತ್ಯ ಸಾಕ್ಷ್ಯಾಧಾರಗಳು ಸಂಗ್ರಹ ಮಾಡಬೇಕಾಗಿದ್ದು, ಅದಕ್ಕೆ ಮುಕ್ತ ಅವಕಾಶ ನೀಡಿ ಸರಿಯಾದ ರೀತಿಯಲ್ಲಿ ವಿಚಾರಣೆ ನಡೆಸುವುದಕ್ಕೆ ಅವಕಾಶ ನೀಡದಿದ್ದಲ್ಲಿ ಆರೋಪಿಗಳು ಕಾನೂನಿನ ಹಿಡಿತದಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಲಿದೆ. ಆದ್ದರಿಂದ ನ್ಯಾಯಾಲಯ ಮಧ್ಯಪ್ರವೇಶ ಮಾಡಬಾರದು ಎಂದು ನ್ಯಾಯಪೀಠ ತಿಳಿಸಿತು.

ಪ್ರಕರಣದ ಹಿನ್ನಲೆ: ರೇಸ್​​ ಕೋರ್ಸ್​ನಲ್ಲಿ ಸರ್ಕಾರದಿಂದ ಅನುಮತಿ ಪಡೆದಿದ್ದ ಬುಕ್ಕಿಗಳು ಯಾವುದೇ ರೀತಿಯ ರಿಜಿಸ್ಟ್ರಾರ್​ ನಿರ್ವಹಣೆ ಮಾಡದೆ ಅಕ್ರಮವಾಗಿ ಕುದುರೆ ಪಂದ್ಯಗಳ ಸಂಬಂಧ ಬೆಟ್ಟಿಂಗ್​ ಪಡೆದುಕೊಳ್ಳುವ ಸಂಬಂಧ ಆರೋಪಗಳು ಕೇಳಿ ಬಂದಿದ್ದವು. ಈ ಸಂಬಂಧ ದಾಳಿ ನಡೆಸಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಮಾಹಿತಿ ಸತ್ಯವಿರುವುದಾಗಿ ಗೊತ್ತಾಗಿತ್ತು.

ಈ ಹಿನ್ನೆಲೆಯಲ್ಲಿ ಹೈಗ್ರೌಂಡ್ಸ್ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಬಳಿಕ ಅಕ್ರಮವಾಗಿ ಬೆಟ್ಟಿಂಗ್​ ಪಡೆದುಕೊಂಡು ಸರ್ಕಾರಕ್ಕೆ ಪಾವತಿಸಬೇಕಾದ ತೆರಿಗೆ ವಂಚಿಸುತ್ತಿದ್ದ ಆರೋಪ ಎದುರಾಗಿತ್ತು. ಈ ಎಲ್ಲ ಪ್ರಕ್ರಿಯೆಗೆ ರೇಸ್​ ಕೋರ್ಸ್ ಸಿಬ್ಬಂದಿ ಬೆಂಬಲ ನೀಡುತ್ತಿರುವುದಾಗಿ ಗೊತ್ತಾಗಿತ್ತು.
ಇದಾದ ನಂತರ ಸಿಸಿಬಿ 2024ರ ಜನವರಿ 12ರಂದು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಅಲ್ಲದೇ, ಅಕ್ರಮವಾಗಿ ಬೆಟ್ಟಿಂಗ್​ ನಡೆಸಿ ಸಂಗ್ರಹಿಸಿದ್ದ ಸುಮಾರು 3.45 ಕೋಟಿ ರೂ.ಗಳನ್ನು ವಶಪಡಿಸಿಕೊಂಡು ತನಿಖೆ ಮುಂದುವರೆಸಿದ್ದರು. ಇದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್​ ಮೊರೆ ಹೋಗಿದ್ದರು.

ಇದನ್ನೂ ಓದಿ: ಬಿಟ್ ಕಾಯಿನ್ ಹಗರಣ: ಡಿವೈಎಸ್‌ಪಿ ವಿರುದ್ಧ ಘೋಷಿತ ಆರೋಪಿ ಆದೇಶ ರದ್ದು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.