ETV Bharat / state

ರಾಹುಲ್ ಗಾಂಧಿ ವಿರುದ್ಧ ಕ್ರಮಕ್ಕೆ ಕೋರಿದ್ದ ಅರ್ಜಿ ತುರ್ತು ವಿಚಾರಣೆಗೆ ನಿರಾಕರಿಸಿದ ಹೈಕೋರ್ಟ್ - Petition Against Rahul Gandhi - PETITION AGAINST RAHUL GANDHI

ಮಾನಹಾನಿ ಹೇಳಿಕೆ ಆರೋಪ ಸಂಬಂಧ ಕಾಂಗ್ರೆಸ್​​ ನಾಯಕ ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳಲು ನಿರ್ದೇಶನ ಕೋರಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ತುರ್ತು ವಿಚಾರಣೆಗೆ ಹೈಕೋರ್ಟ್ ನಿರಾಕರಿಸಿದೆ.

rahul gandhi
ರಾಹುಲ್ ಗಾಂಧಿ, ಹೈಕೋರ್ಟ್ (ETV Bharat)
author img

By ETV Bharat Karnataka Team

Published : Sep 26, 2024, 4:02 PM IST

ಬೆಂಗಳೂರು: ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಆರೋಪವನ್ನು ಟೀಕಿಸುವ ಭರದಲ್ಲಿ ಮಹಿಳೆಯರಿಗೆ ಮಾನ ಹಾನಿಯಾಗುವಂತೆ ಹೇಳಿಕೆ ನೀಡಿರುವ ಆರೋಪ ಸಂಬಂಧ ಲೋಕಸಭಾ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳಲು ನಿರ್ದೇಶನ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ತುರ್ತು ವಿಚಾರಣೆ ನಡೆಸಲು ಹೈಕೋರ್ಟ್ ನಿರಾಕರಿಸಿದೆ.

ಆಲ್ ಇಂಡಿಯಾ ದಲಿತ್ ಆ್ಯಕ್ಷನ್ ಕಮಿಟಿಯ ರಾಷ್ಟ್ರೀಯ ಅಧ್ಯಕ್ಷ ಚಿ.ನಾ.ರಾಮು ಮತ್ತು ರಾಷ್ಟ್ರೀಯ ಮಹಿಳಾ ಘಟಕದ ಅಧ್ಯಕ್ಷೆ ಸುಶೀಲಾ ದೇವರಾಜ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ ಅವರಿದ್ದ ಪೀಠ ವಿಚಾರಣೆ ನಡೆಸಿತು.

ಅಲ್ಲದೆ, ''ಅರ್ಜಿಯ ವಿಚಾರಣೆ ತುರ್ತು ನಡೆಸುವ ಅಗತ್ಯವಿಲ್ಲ. ಹೀಗಾಗಿ, ಪ್ರತಿವಾದಿಗಳಿಗೆ ನೋಟಿಸ್ ನೀಡಬೇಕಾದ ಅಗತ್ಯವಿಲ್ಲ'' ಎಂದು ತಿಳಿಸಿ ವಿಚಾರಣೆಯನ್ನು ಅಕ್ಟೋಬರ್ 21ಕ್ಕೆ ಮುಂದೂಡಿತು.

ವಕೀಲರ ವಾದವೇನು?: ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ''ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಶಿವಮೊಗ್ಗ ಮತ್ತು ರಾಯಚೂರಿನಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಪ್ರಜ್ವಲ್ ರೇವಣ್ಣ ಹಲವು ಮಹಿಳೆಯರನ್ನು ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿದ್ದರು. ಇದರಿಂದ ಸ್ಥಳೀಯ ಮಹಿಳೆಯರನ್ನು ಅವಮಾನಿಸಿದ್ದು, ಪ್ರತಿ ಮನೆಗಳಲ್ಲಿಯೂ ಮಹಿಳೆಯರನ್ನು ಸಂಶಯದಿಂದ ನೋಡುತ್ತಿದ್ದಾರೆ. ಇದು ಮಹಿಳೆಯರ ಗೌರವಕ್ಕೆ ಧಕ್ಕೆ ತರವಂತಾಗಿದ್ದು, ತನಿಖೆಗೆ ಆದೇಶಿಸಬೇಕು'' ಎಂದು ಕೋರಿದರು.

ಅರ್ಜಿಯಲ್ಲಿ ಏನಿದೆ?: ಮಹಿಳೆಯ ಘನತೆಗೆ ಚ್ಯುತಿ ಉಂಟು ಮಾಡುವ ಮೂಲಕ ಆಕೆಗೆ ಅವಮಾನ, ನೋವು, ವೇದನೆ ಉಂಟು ಮಾಡಿರುವ ಅಸಾಂವಿಧಾನಿಕ ಭಾಷಣಕ್ಕೆ ರಾಹುಲ್ ಬೇಷರತ್ ಕ್ಷಮೆ ಕೋರಲು ಆದೇಶಿಸಬೇಕು. ರಾಹುಲ್ ಹೊರತುಪಡಿಸಿದ ಪ್ರತಿವಾದಿಗಳು ಪ್ರತ್ಯೇಕವಾಗಿ ಕರ್ತವ್ಯ ಲೋಪಕ್ಕೆ ಸಂಬಂಧಿಸಿದಂತೆ ಶ್ವೇತಪತ್ರ ಸಲ್ಲಿಸಲು ಆದೇಶಿಸಬೇಕು. ಮಹಿಳೆಯ ಘನತೆಗೆ ಹಾನಿ ಮಾಡಿರುವ ರಾಹುಲ್ ಹಾಗೂ ಇತರ ಪ್ರತಿವಾದಿಗಳಿಗೆ ಸಾರ್ವಜನಿಕ ಹುದ್ದೆಯ ದುರ್ಬಳಕೆ, ಸಾರ್ವಜನಿಕ ನಂಬಿಕೆಗೆ ಹಾನಿ, ಸಾಂವಿಧಾನಿಕ ನಿಬಂಧನೆಗಳ ಉಲ್ಲಂಘನೆಗಾಗಿ ಭಾರತೀಯ ನ್ಯಾಯ ಸಂಹಿತೆಯ ಅಡಿ ಸಾಂಕೇತಿಕ ದಂಡ ವಿಧಿಸಬೇಕು ಎಂದು ಮನವಿ ಮಾಡಲಾಗಿದೆ.

ಇದನ್ನೂ ಓದಿ: ಮಂಗಳೂರು: ಕಾಲಿಯ ರಫೀಕ್ ಕೊಲೆ ಪ್ರಕರಣ, ನಾಲ್ವರು ಆರೋಪಿಗಳು ಖುಲಾಸೆ - Court Judgement

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ 2024ರ ಮೇ 2ರಂದು ಶಿವಮೊಗ್ಗದಲ್ಲಿ ಪ್ರಚಾರ ಭಾಷಣ ಮಾಡಿದ್ದ ರಾಹುಲ್ ಗಾಂಧಿ, ಹಾಸನದ ಜೆಡಿಎಸ್ ಅಭ್ಯರ್ಥಿಯಾಗಿದ್ದ ಪ್ರಜ್ವಲ್ ರೇವಣ್ಣ 400 ಮಹಿಳೆಯರನ್ನು ಅತ್ಯಾಚಾರ ಮಾಡಿ, ಆ ಘಟನೆಯನ್ನು ವಿಡಿಯೋ ಮಾಡಿಕೊಂಡಿದ್ದಾರೆ. ಇಂತಹ ಅಭ್ಯರ್ಥಿಯ ಪರವಾಗಿ ಮತ ಕೇಳಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಸಾರ್ವಜನಿಕರ ಕ್ಷಮೆ ಕೋರಬೇಕು ಎಂದು ವಾಗ್ದಾಳಿ ನಡೆಸಿದ್ದರು. ಈ ಮೂಲಕ ಮಹಿಳೆಯ ಘನತೆಗೆ ವಿಶೇಷವಾಗಿ ಹಾಸನ ಭಾಗದ ಮಹಿಳೆಯರ ಘನತೆಗೆ ಹಾನಿ ಮಾಡಿದ್ದಾರೆ. ಈ ಮೂಲಕ ಸುಳ್ಳು ಸುದ್ದಿ ಹರಡಿದ್ದು, ಈ ಪ್ರಕರಣವನ್ನು ಮತ ಗಳಿಕೆಗೆ ಬಳಕೆ ಮಾಡಿಕೊಂಡಿದ್ದಾರೆ. ಈ ಮೂಲಕ ಭಾರತದ ಮಹಿಳೆಯ ಘನತೆಗೆ ಹಾನಿ ಮಾಡಿದ್ದಾರೆ. ಅಧಿಕಾರಿಗಳೂ ಅವರ ವಿರುದ್ಧ ಕ್ರಮಕೈಗೊಂಡಿಲ್ಲ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಜಾಮೀನು, ನಿರೀಕ್ಷಣಾ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್ - Prajwal Revanna

ETV Bharat Logo

Copyright © 2025 Ushodaya Enterprises Pvt. Ltd., All Rights Reserved.