ETV Bharat / state

ಮುತಾಲಿಕ್ ವಿರುದ್ದ ಮಾನಹಾನಿಕರ ಹೇಳಿಕೆ ಆರೋಪ: ಸುನೀಲ್ ಕುಮಾರ್ ಮೇಲಿನ ಕೇಸ್ ರದ್ಧತಿಗೆ ಹೈಕೋರ್ಟ್ ನಕಾರ - Sunil Kumar

author img

By ETV Bharat Karnataka Team

Published : Sep 13, 2024, 5:16 PM IST

ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ವಿರುದ್ದ ಬಿಜೆಪಿ ನಾಯಕ ಸುನೀಲ್ ಕುಮಾರ್ ಮಾನಹಾನಿಕರ ಹೇಳಿಕೆ ನೀಡಿರುವ ಆರೋಪ ಪ್ರಕರಣ ರದ್ಧತಿಗೆ ಹೈಕೋರ್ಟ್ ನಿರಾಕರಣೆ ಮಾಡಿದೆ.

High Court
ಪ್ರಮೋದ್ ಮುತಾಲಿಕ್, ವಿ.ಸುನೀಲ್ ಕುಮಾರ್ (ETV Bharat)

ಬೆಂಗಳೂರು: ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ ಆರೋಪದಲ್ಲಿ ಬಿಜೆಪಿ ಮುಖಂಡ ವಿ.ಸುನೀಲ್ ಕುಮಾರ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ.

ಆರೋಪ ಸಂಬಂಧದ ಪ್ರಕರಣ ಮತ್ತು ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ರದ್ದು ಕೋರಿ ಶಾಸಕ ವಿ.ಸುನೀಲ್ ಕುಮಾರ್ ದಾಖಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ನ್ಯಾಯಪೀಠ ಹೇಳಿದ್ದೇನು?: ''ಚುನಾವಣೆಗಳ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಏನು ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿವೆ, ಅವುಗಳ ಅನುಷ್ಠಾನ ಮಾಡಿವೆಯೇ, ಮುಂದೆ ಏನು ಮಾಡಬೇಕು ಎಂಬುದು ಚರ್ಚಾ ವಿಷಯಗಳಾಗುವುದಿಲ್ಲ. ಬದಲಿಗೆ ಸ್ಪರ್ಧಿ - ಪ್ರತಿಸ್ಪರ್ಧಿ ನಡುವಿನ ಪರಸ್ಪರ ವಿರುದ್ಧದ ಭಾಷಣದಿಂದ ಚುನಾವಣೆ ನಡೆಯುತ್ತಿವೆ. ಈ ರೀತಿಯ ರಾಜಕೀಯ ಕೆಸರೆರಚಾಟ ನಿಲ್ಲಬೇಕಾಗಿದೆ'' ಎಂದು ಈ ವೇಳೆ ಪೀಠ ಮೌಖಿಕವಾಗಿ ನುಡಿಯಿತು.

ಪ್ರಕರಣದ ಹಿನ್ನೆಲೆ: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾರ್ಕಳ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಅರ್ಜಿದಾರ ಸುನಿಲ್‌ ಕುಮಾರ್‌ ಮತ್ತು ಪಕ್ಷೇತರ ಅಭ್ಯರ್ಥಿಯಾಗಿ ಪ್ರಮೋದ್‌ ಮುತಾಲಿಕ್‌ ಸ್ಪರ್ಧಿಸಿದ್ದರು. ಚುನಾವಣೆಯಲ್ಲಿ ಸುನಿಲ್‌ ಕುಮಾರ್‌ ಗೆಲುವು ಸಾಧಿಸಿದ್ದರು. ಚುನಾವಣಾ ಫಲಿತಾಂಶದ ನಂತರ 2023ರ ಮೇ 14ರಂದು ಕಾರ್ಕಳ ಬಂಡಿಮಠ ಬಸ್‌ ನಿಲ್ದಾಣ ಬಳಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದ ಸುನೀಲ್‌ ಕುಮಾರ್‌, ಪ್ರಮೋದ್ ಮುತಾಲಿಕ್​ ವಿರುದ್ಧ ಹೇಳಿಕೆ ನೀಡಿದ್ದರು.

ಇದರಿಂದ, ಸುನೀಲ್‌ ಕುಮಾರ್‌ ತಮ್ಮ ವಿರುದ್ಧ ಮಾನಹಾನಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ್ದ ಪ್ರಮೋದ್‌ ಮುತಾಲಿಕ್‌, 2023ರ ಸೆಪ್ಟೆಂಬರ್‌ 7ರಂದು ಬೆಂಗಳೂರಿನ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು.

ಪ್ರಕರಣ ಸಂಬಂಧ ವಿಚಾರಣಾ ನ್ಯಾಯಾಲಯ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 499 ಮತ್ತು 500ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧಗಳಿಗಾಗಿ ಪ್ರಾಸಿಕ್ಯೂಷನ್​ಗೆ ಮುಂದಾಗಿತ್ತು. ಇದನ್ನು ರದ್ದುಗೊಳಿಸುವಂತೆ ಕೋರಿ ಸುನೀಲ್ ಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ಇದನ್ನೂ ಓದಿ: ಮುಕ್ತ ನ್ಯಾಯಾಲಯದಲ್ಲೇ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ: ಹೈಕೋರ್ಟ್ - Prajwal Revanna Sexual Assault Case

ETV Bharat Logo

Copyright © 2024 Ushodaya Enterprises Pvt. Ltd., All Rights Reserved.