ETV Bharat / state

ಪ್ರಿಯತಮೆಯ ಆತ್ಮಹತ್ಯೆಗೆ ಪ್ರಚೋದನೆ: ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಿರಾಕರಣೆ - Incitement To Suicide - INCITEMENT TO SUICIDE

ಪ್ರಿಯತಮೆಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಯುವಕನ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್​ ನಿರಾಕರಿಸಿತು.

high-court
ಹೈಕೋರ್ಟ್ (ETV Bharat)
author img

By ETV Bharat Karnataka Team

Published : Aug 13, 2024, 10:08 PM IST

ಬೆಂಗಳೂರು: ಪ್ರೀತಿಸಿದ ಯುವತಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಯುವಕನ ವಿರುದ್ಧ ದಾಖಲಾದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ಇಂದು ನಿರಾಕರಿಸಿದೆ.

ಕೊಡಗು ಜಿಲ್ಲೆಯ ಕುಶಾಲನಗರ ನಿವಾಸಿ ಸಿ.ಕುಮಾರ್ ಎಂಬವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ಮಾಡಿದೆ.

ಪ್ರಕರಣದಲ್ಲಿ ಅರ್ಜಿದಾರರು ಮೃತ ಯುವತಿಯ ಜೊತೆ ಸಂಬಂಧ ಹೊಂದಿದ್ದು, ಇಬ್ಬರು ಮದುವೆಯಾಗಲು ನಿರ್ಧರಿಸಿದ್ದರು. ಬಳಿಕ ಕೆಲವು ದಿನಗಳ ನಂತರ ಆರೋಪಿಯು ಯುವತಿ ಪರಪುರುಷರ ಜೊತೆ ಸಂಬಂಧ ಹೊಂದಿದ್ದಾಳೆ ಎಂದು ಆಕೆಯ ನಡತೆ ಮೇಲೆ ಶಂಕೆ ವ್ಯಕ್ತಪಡಿಸಿ ಮದುವೆಯಾಗಲು ನಿರಾಕರಿಸಿದ್ದಾನೆ ಎಂಬ ಅಂಶ ದಾಖಲೆಗಳಿಂದ ಗೊತ್ತಾಗಿದೆ.

ಅರ್ಜಿದಾರರು, ಆಕೆಯ ನಡತೆಗೆಟ್ಟವಳಾದ ಕಾರಣ ಆಕೆ ಸತ್ತರೂ ಚಿಂತಿಸುವುದಿಲ್ಲ. ನ್ಯಾಯಾಲಯದಲ್ಲಿ ಮೊಕದ್ದಮೆ ಎದುರಿಸಲು ಯಾವುದೇ ಹಿಂಜರಿಕೆಯಿಲ್ಲ ಎಂದು ಹೇಳಿರುವ ಬಗ್ಗೆ ಯುವತಿ ಹೇಳಿಕೊಂಡಿದ್ದಾಳೆ. ಅಲ್ಲದೇ ಸಾಯುವ ಮೊದಲು ಇಬ್ಬರ ನಡುವೆ ಸಂಭಾಷಣೆ ನಡೆದಿದೆ. ಈ ಎಲ್ಲ ಸಂಗತಿಗಳನ್ನು ಗಮನಿಸಿದರೆ ಅರ್ಜಿದಾರರು ಕ್ರಿಮಿನಲ್ ಉದ್ದೇಶದಿಂದ ಆಕೆಯನ್ನು ನಿಂದಿಸಿದ್ದು ತಿಳಿದು ಬರುತ್ತದೆ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಪೀಠ ಅರ್ಜಿಯನ್ನು ವಜಾಗೊಳಿಸಿತು.

ಪ್ರಕರಣದ ಹಿನ್ನೆಲೆ: ಮೃತ ಯುವತಿ ಹಾಗೂ ಯುವಕ ಸುಮಾರು ಐದು ವರ್ಷಗಳಿಂದ ಪ್ರೀತಿಸುತ್ತಿದ್ದರು. ಕೆಲ ದಿನಗಳ ನಂತರ ಇಬ್ಬರ ನಡುವೆ ಪರಸ್ಪರ ವೈಮನಸ್ಸು ಮೂಡಿತ್ತು. ಅರ್ಜಿದಾರ ಯುವತಿಯ ನಡತೆಯನ್ನು ಸಂಶಯಿಸುತ್ತಿದ್ದು ಆಕೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಕಿರುಕುಳ ನೀಡುತ್ತಿದ್ದ.

ಈ ನಡುವೆ 2022ರ ಆ.29ರಂದು ಆರೋಪಿ ಮೃತಳ ತಾಯಿಗೆ ಕರೆ ಮಾಡಿ ಮೃತರು ಫೋನ್ ತೆಗೆಯುತ್ತಿಲ್ಲ ಎಂದು ತಿಳಿಸಿದ್ದಾನೆ. ತಕ್ಷಣ ಕೊಠಡಿಯ ಕಿಟಕಿಯಿಂದ ಇಣುಕಿ ನೋಡಿದಾಗ ಮಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು. ಬಾಗಿಲು ಒಡೆದು ನೋಡಿದಾಗ ಆಕೆ ಆಗಲೇ ಮೃತಪಟ್ಟಿದ್ದಳು.

ಆಕೆಯ ಆತ್ಮಹತ್ಯೆಗೆ ಅರ್ಜಿದಾರರೇ ಕಾರಣ ಎಂಬುದಾಗಿ ಡೆತ್ ನೋಟ್ ಕೂಡ ಬರೆದಿದ್ದಳು. ಈ ಬಗ್ಗೆ ಮೃತಳ ತಂದೆ ಕೆ.ಎಸ್.ಕಾಂತರಾಜು ಕೊಡಗು ಜಿಲ್ಲೆಯ ಕುಶಾಲ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನಂತೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ವಿಚಾರಣಾ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು. ಇದನ್ನು ಪ್ರಶ್ನಿಸಿ ಅರ್ಜಿದಾರ ಹೈಕೋರ್ಟ್ ಮೆಟ್ಟಿಲೇರಿದ್ದ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಮೃತ ಯುವತಿ ಖಿನ್ನತೆಯಿಂದ ಬಳಲುತ್ತಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೇವಲ ಡೆತ್‌ನೋಟ್​ನಲ್ಲಿ ಅರ್ಜಿದಾರರ ಹೆಸರು ಉಲ್ಲೇಖಿಸಿದ್ದಾಳೆ ಎಂದ ಮಾತ್ರಕ್ಕೆ ಘಟನೆಯಲ್ಲಿ ಅವರನ್ನು ನೇರ ಹೊಣೆಗಾರನನ್ನಾಗಿ ಮಾಡುವುದು ಸರಿಯಲ್ಲ. ಹೀಗಾಗಿ ಪ್ರಕರಣ ರದ್ದುಗೊಳಿಸುವಂತೆ ಮನವಿ ಮಾಡಿದರು.

ಮೃತ ಯುವತಿ ತಂದೆಯ ಪರ ವಕೀಲರು, ಅರ್ಜಿದಾರ ಮೃತ ಯುವತಿಗೆ ನಿರಂತರವಾಗಿ ಕಿರುಕುಳ ನೀಡಿದ್ದಾನೆ. ಜೊತೆಗೆ ಮದುವೆಯಾಗಲು ನಿರಾಕರಿಸಿದ್ದಾನೆ. ಈ ಬಗ್ಗೆ ಎಲ್ಲ ಸತ್ಯಾಂಶಗಳು ಫೋನ್​ ಸಂಭಾಷಣೆ ಹಾಗೂ ಇಬ್ಬರು ಪರಸ್ಪರ ರವಾನಿಸಿಕೊಂಡ ಸಂದೇಶದಲ್ಲಿ ಸ್ಪಷ್ಟವಾಗಿ ತಿಳಿದುಬರುತ್ತದೆ. ಈ ಬಗ್ಗೆ ಪೊಲೀಸರು ಎಫ್​ಎಸ್​ಎಲ್​ ಮಾಹಿತಿ ಕಳುಹಿಸಿದ್ದು, ವರದಿ ಇನ್ನಷ್ಟೇ ಪಡೆದುಕೊಳ್ಳಬೇಕಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಸರ್ಕಾರಿ ಪರ ವಕೀಲರು, ಮೃತ ಯುವತಿ ಈ ಹಿಂದೆ ಹಲವು ಬಾರಿ ಡೆತ್​ನೋಟ್ ಬರೆದಿದ್ದಳು. ಪ್ರತಿ ಡೆತ್‌ನೋಟ್​ನ​ಲ್ಲಿಯೂ ಅರ್ಜಿದಾರರು ಆಕೆಯ ನಡತೆಯ ಮೇಲೆ ಸಂಶಯಪಟ್ಟು ದೌರ್ಜನ್ಯ ಎಸಗಿದ್ದಾರೆ ಎಂಬ ಬಗ್ಗೆ ಹೇಳಿಕೊಂಡಿದ್ದಾಳೆ. ಪ್ರಿಯತಮ ಮದುವೆಯಾಗಲು ನಿರಾಕರಿಸಿರುವ ಸಂಗತಿಯನ್ನು ಬಿಚ್ಚಿಟ್ಟಿದ್ದಾಳೆ. ಈ ಬಗ್ಗೆ ತನಿಖೆ ಪೂರ್ಣಗೊಂಡಿದ್ದು, ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿದೆ. ಹೀಗಾಗಿ ಅರ್ಜಿ ವಜಾಗೊಳಿಸಬೇಕು ಎಂದು ಕೋರಿದರು.

ಇದನ್ನೂ ಓದಿ: ಸುಳ್ಳು ಜಾತಿ ಪ್ರಮಾಣಪತ್ರ ಪಡೆದವರ ವಿರುದ್ಧ ಕ್ರಮದ ಕುರಿತು ಪ್ರಮಾಣಪತ್ರ ಸಲ್ಲಿಸಿ: ಹೈಕೋರ್ಟ್ - Fake Caste Certificate

ETV Bharat Logo

Copyright © 2025 Ushodaya Enterprises Pvt. Ltd., All Rights Reserved.