ETV Bharat / state

ಅತ್ಯಾಚಾರ ಸಂತ್ರಸ್ತ ಎನ್ನಲಾದ ಮಹಿಳೆ ಅಪಹರಣ ಆರೋಪ; ರೇವಣ್ಣ ಜಾಮೀನು ಆದೇಶ ಎತ್ತಿಹಿಡಿದ ಹೈಕೋರ್ಟ್ - Kidnap Case

ಮಾಜಿ ಸಚಿವ ಹೆಚ್​.ಡಿ. ರೇವಣ್ಣ ಅವರ ಜಾಮೀನು ರದ್ದು ಮಾಡುವಂತೆ ಎಸ್‌ಐಟಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾ ಮಾಡಿದೆ.

HD REVANNA BAIL ISSUE
ಮಾಜಿ ಸಚಿವ ಹೆಚ್​.ಡಿ.ರೇವಣ್ಣ (ETV Bharat)
author img

By ETV Bharat Karnataka Team

Published : Aug 28, 2024, 4:03 PM IST

Updated : Aug 28, 2024, 5:38 PM IST

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರಕ್ಕೆ ಒಳಗಾಗಿದ್ದಾರೆ ಎನ್ನಲಾದ ಮಹಿಳೆಯನ್ನು ಅಪಹರಿಸಿದ ಆರೋಪದಲ್ಲಿ ಜೆಡಿಎಸ್ ಶಾಸಕ ಹೆಚ್​.ಡಿ. ರೇವಣ್ಣ ಅವರಿಗೆ ವಿಚಾರಣಾ ನ್ಯಾಯಾಲಯ ಮಂಜೂರು ಮಾಡಿದ್ದ ಜಾಮೀನನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಅಲ್ಲದೆ, ರೇವಣ್ಣ ಅವರಿಗೆ ಮಂಜೂರು ಮಾಡಿದ್ದ ಜಾಮೀನು ರದ್ದು ಕೋರಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಲ್ಲಿಸಿರುವ ಅರ್ಜಿಯನ್ನು ವಜಾಗೊಳಿಸಿದೆ. ಜತೆಗೆ, ಮಹಿಳೆಯ ಅಪಹರಣಕ್ಕೆ ಕಾರಣರಾಗಿದ್ದ ಇತರ ಆರೋಪಿಗಳಾದ ಹಾಸನದ ಸತೀಶ್ ಬಾಬಣ್ಣ ಮತ್ತಿತರರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಮಾನ್ಯ ಮಾಡಿರುವ ಹೈಕೋರ್ಟ್, ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಸಹ ಮಂಜೂರು ಮಾಡಿದೆ.

ರೇವಣ್ಣ ಅವರಿಗೆ ಮಂಜೂರು ಮಾಡಲಾಗಿರುವ ಜಾಮೀನು ರದ್ದು ಕೋರಿ ಎಸ್‌ಐಟಿ ಸಲ್ಲಿಸಿದ್ದ ಅರ್ಜಿ ಹಾಗೂ ಅಪಹರಣ ಪ್ರಕರಣದಲ್ಲಿ ಜಾಮೀನು ಕೋರಿ ಇತರ 6 ಆರೋಪಿಗಳು ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ಅರ್ಜಿ ವಿಚಾರಣೆ ವೇಳೆ ಎಸ್ಐಟಿ ಪರ ವಕೀಲರು, ಮಹಿಳೆಯ ಅಪಹರಣ ಪ್ರಕರಣದಲ್ಲಿ ರೇವಣ್ಣ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಪ್ರಕರಣದಲ್ಲಿ ರೇವಣ್ಣ ಅವರ ಪಾತ್ರವಿರುವುದು ತನಿಖೆಯ ವೇಳೆ ಸಾಬೀತಾಗಿದೆ. ತನಿಖಾಧಿಕಾರಿಗಳು ಹಾಗೂ ನ್ಯಾಯಾಲಯದ ಮುಂದೆ ಸಂತ್ರಸ್ತ ನೀಡಿರುವ ಹೇಳಿಕೆಯಲ್ಲಿ ರೇವಣ್ಣ ವಿರುದ್ಧದ ಆರೋಪ ಮಾಡಿದ್ದಾರೆ. ಈ ಆರೋಪವನ್ನು ದಾಖಲಿಸಿಕೊಂಡ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಅಲ್ಲದೆ, ಐಪಿಸಿ 364ಎ ಪ್ರಕಾರ ಯಾವುದೇ ವ್ಯಕ್ತಿಯ ಅಪಹರಣದ ಬಳಿಕ ಆ ವ್ಯಕ್ತಿಯ ಜೀವಭಯ ಇರಲಿದೆ. ಈ ಹಿನ್ನೆಲೆಯಲ್ಲಿ ಜಾಮೀನು ರದ್ದುಪಡಿಸಬೇಕು ಎಂದು ಕೋರಿದ್ದರು.

ಇದಕ್ಕೆ ಆಕ್ಷೇಪಿಸಿದ ರೇವಣ್ಣ ಪರ ಹಿರಿಯ ವಕೀಲರು, ಜಾಮೀನು ಮಂಜೂರು ಮಾಡುವುದು ಮತ್ತು ರದ್ದುಪಡಿಸುವ ಪ್ರಕ್ರಿಯೆ ಸಂಪೂರ್ಣವಾಗಿ ವಿಭಿನ್ನವಾಗಿರಲಿದೆ. ಅಲ್ಲದೆ, ಇಡೀ ಪ್ರಕರಣದಲ್ಲಿ ರೇವಣ್ಣ ಅವರ ಯಾವುದೇ ಪಾತ್ರವಿಲ್ಲ. ಆದರೆ, ಸಂತ್ರಸ್ತೆಯನ್ನು ಅಪಹರಣ ಮಾಡಿದ್ದ ಸತೀಶ್ ಬಾಬಣ್ಣ ಎಂಬುವರು ರೇವಣ್ಣ ನಿಮ್ಮನ್ನು ಕರೆದುಕೊಂಡು ಬರುವುದಕ್ಕೆ ಹೇಳಿದ್ದಾರೆ ಎಂದು ತಿಳಿಸಿದ್ದಾರೆ ಎಂಬ ಆರೋಪವಿದೆ. ಇದು ಶಿಕ್ಷಾರ್ಹ ಅಪರಾಧವಲ್ಲ. ಜತೆಗೆ, ಐಪಿಸಿ ಸೆಕ್ಷನ್ 362ರ ಪ್ರಕಾರ ಅಪಹರಣಕ್ಕೊಳಗಾದವರಿಗೆ ಮೋಸ ಮಾಡುವ ಉದ್ದೇಶವಿರಬೇಕು. ಈ ಪ್ರಕರಣದಲ್ಲಿ ಆ ಉದ್ದೇಶವಿಲ್ಲ. ಸಂತ್ರಸ್ತೆಯಾಗಿರುವವರು ರೇವಣ್ಣ ಮನೆಯ ಕೆಲಸದವರಾಗಿದ್ದಾರೆ. ಆದ್ದರಿಂದ, ಮೋಸ ಮಾಡುವ ಹಾಗೂ ಬೆದರಿಕೆಯೊಡ್ಡುವ ಉದ್ದೇಶವಿಲ್ಲ. ಆದ್ದರಿಂದ, ಅರ್ಜಿ ವಜಾಗೊಳಿಸಬೇಕು ಎಂದು ಪೀಠಕ್ಕೆ ಮನವಿ ಮಾಡಿದ್ದರು.

ಪ್ರಕರಣದ‌ ಇತರೆ ಆರೋಪಿಗಳಾದ ಸತೀಶ್ ಬಾಬು, ಹೆಚ್​.ಕೆ. ಸುಜಯ್, ಹೆಚ್​.ಎನ್. ಮಧು, ಎಸ್.ಟಿ. ಕೀರ್ತಿ, ಹೆಚ್​.ಡಿ ಮಾಯು ಗೌಡ, ಕೆ.ಎ. ರಾಜಗೋಪಾಲ್ ಅವರ ಅರ್ಜಿಗಳನ್ನು ಮಾನ್ಯ ಮಾಡಿರುವ ಹೈಕೋರ್ಟ್, ಎಲ್ಲ ಆರೋಪಿಗಳು ತಲಾ ಐದು ಲಕ್ಷ ರೂ. ಮೊತ್ತದ ವೈಯಕ್ತಿಕ ಬಾಂಡ್ ಹಾಗೂ ಅಷ್ಟೇ ಮೊತ್ತದ ಭದ್ರತಾ ಖಾತ್ರಿ ಒದಗಿಸಬೇಕು. ತನಿಖೆಗೆ ಸಹಕರಿಸಬೇಕು, ಸಾಕ್ಷ್ಯಗಳ ಮೇಲೆ ಪ್ರಭಾವ ಬೀರಬಾರದು ಎಂಬ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದೆ.

ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ವಿರುದ್ಧ ಮೊದಲ ಚಾರ್ಜ್‌ಶೀಟ್ ಸಲ್ಲಿಕೆ - Prajwal Revanna

Last Updated : Aug 28, 2024, 5:38 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.