ETV Bharat / state

ಉಡುಪಿ: ನಾಲ್ವರ ಕಗ್ಗೋಲೆ ಪ್ರಕರಣ, ಆರೋಪಿಯ ಜಾಮೀನು ಅರ್ಜಿ ವಜಾ - Udupi Family Murder Case

ಉಡುಪಿ ಜಿಲ್ಲೆಯಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಸಂಬಂಧ ಆರೋಪಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ.

ಹೈಕೋರ್ಟ್
ಹೈಕೋರ್ಟ್ (ETV Bharat)
author img

By ETV Bharat Karnataka Team

Published : Jun 27, 2024, 9:46 PM IST

ಬೆಂಗಳೂರು: ಉಡುಪಿ ಜಿಲ್ಲೆಯ ಹಂಪನಕಟ್ಟೆ ಸಮೀಪದ ನೇಜಾರಿನ ತೃಪ್ತಿ ಲೇಔಟ್‌ ನಿವಾಸದಲ್ಲಿನ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಆರೋಪಿ ಪ್ರವೀಣ್ ಅರುಣ್ ಚೌಗುಲೆಯ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.

ಜಾಮೀನು ತಿರಸ್ಕರಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಪ್ರವೀಣ್ ಅರುಣ್ ಚೌಗುಲೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಂ.ಜಿ.ಉಮಾ ಅವರಿದ್ದ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿ ಆದೇಶಿಸಿದೆ.

ವಿಚಾರಣೆ ವೇಳೆ ರಾಜ್ಯ ಪಬ್ಲಿಕ್ ಪ್ರಾಸಿಕ್ಯೂಟರ್ ಬಿ.ಎನ್.ಜಗದೀಶ್, "ಇದೊಂದು ಗಂಭೀರ ಪ್ರಕರಣ. ಮೃತ ಶರೀರಗಳ ಮೇಲಿದ್ದ ಆರೋಪಿಯ ಕೂದಲು ಡಿಎನ್ಎ ಪರೀಕ್ಷೆಯಲ್ಲಿ ಹೊಂದಾಣಿಕೆಯಾಗಿದೆ. ಕೊಲೆ ಮಾಡುವ ಸಮಯದಲ್ಲಿ ಆರೋಪಿಯ ಕೈಗೂ ಗಾಯವಾಗಿತ್ತು. ಇದಕ್ಕಾಗಿ ಆತ ಪಡೆದಿದ್ದ ವೈದ್ಯಕೀಯ ಚಿಕಿತ್ಸೆಯ ದಾಖಲೆ ಲಭ್ಯವಾಗಿದೆ. ಆತ ಕೃತ್ಯ ನಡೆಸಿದ ಸ್ಥಳಕ್ಕೆ ಬಂದು ಹೋಗಿದ್ದ ಬಗ್ಗೆ ಮೊಬೈಲ್ ಲೊಕೇಶನ್ ಕೂಡಾ ದೃಢಪಟ್ಟಿದೆ. ಹೀಗೆ, ಸಾಕಷ್ಟು ಸಾಕ್ಷ್ಯಗಳನ್ನು ಪ್ರಾಸಿಕ್ಯೂಷನ್ ತನಿಖೆಯಲ್ಲಿ ಕಲೆ ಹಾಕಿದೆ‌. ಆದ್ದರಿಂದ, ಜಾಮೀನು ಮಂಜೂರು ಮಾಡಬಾರದು ಎಂದು ಮನವಿ ಮಾಡಿದರು. ಇದನ್ನು ಪುರಸ್ಕರಿಸಿದ ನ್ಯಾಯಪೀಠ ಜಾಮೀನು ಕೋರಿಕೆ ಅರ್ಜಿಯನ್ನು ತಿರಸ್ಕರಿಸಿ" ಆದೇಶಿಸಿತು.

ಪ್ರಕರಣದ ಹಿನ್ನೆಲೆ: ನೇಜಾರಿನ ತೃಪ್ತಿ ಲೇಔಟ್‌ನಲ್ಲಿ 2023ರ ನವೆಂಬರ್ 12ರಂದು ಬೆಳಗ್ಗೆ ಹಸೀನಾ (48), ಅವರ ಮಕ್ಕಳಾದ ಅಫ್ನಾನ್ (23), ಅಯ್ನಾಜ್ (20) ಹಾಗೂ 14 ವರ್ಷದ ಅಪ್ರಪ್ತನನ್ನು ಚೂರಿಯಿಂದ ಇರಿದು ಭೀಕರವಾಗಿ ಕೊಲೆ ಮಾಡಲಾಗಿತ್ತು. ಚೂರಿ ಇರಿತಕ್ಕೊಳಗಾಗಿದ್ದ ಮೃತ ಹಸೀನಾ ಅವರ ಅತ್ತೆ ಹಾಜಿರಾ ಹಂತಕನಿಂದ ತಪ್ಪಿಸಿಕೊಂಡು ಶೌಚಾಲಯದೊಳಗೆ ಅವಿತು ಜೀವ ಉಳಿಸಿಕೊಂಡಿದ್ದರು.

ಮಹಾರಾಷ್ಟ್ರದ ಸಾಂಗ್ಲಿ ನಿವಾಸಿಯಾದ ಆರೋಪಿ ಪ್ರವೀಣ್ ಚೌಗುಲೆಯನ್ನು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿಯಲ್ಲಿ ಬಂಧಿಸಲಾಗಿತ್ತು. ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆ-1860ರ ಕಲಂ 302 (ಕೊಲೆ), 307 (ಕೊಲೆ ಯತ್ನ), 324 (ಮಾರಕಾಸ್ತ್ರದಿಂದ ಸರಳ ಗಾಯ ಉಂಟು ಮಾಡುವುದು) 449 (ಮರಣ ದಂಡನೆಗೆ ಒಳಗಾಗುವ ಅಪರಾಧ ಕೃತ್ಯ ಎಸಗಲು ಗೃಹ ಅತಿಕ್ರಮಣ) ಮತ್ತು 201 (ಸಾಕ್ಷ್ಯ ನಾಶ) ಆರೋಪಗಳಡಿ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಚೌಗುಲೆಯ ಜಾಮೀನು ಅರ್ಜಿಯನ್ನು ಉಡುಪಿ ಜಿಲ್ಲಾ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ಧಾರಾಕಾರ ಮಳೆ: ರೆಡ್ ಅಲರ್ಟ್ ಘೋಷಣೆ, ನಾಳೆ ಶಾಲೆ ಕಾಲೇಜುಗಳಿಗೆ ರಜೆ - Dakshina Kannada Schools holiday

ETV Bharat Logo

Copyright © 2024 Ushodaya Enterprises Pvt. Ltd., All Rights Reserved.