ETV Bharat / state

ರಾಜ್ಯದಲ್ಲಿ ಹುಕ್ಕಾ ನಿಷೇಧ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್ - hookah ban verdict

ಹುಕ್ಕಾ ನಿಷೇಧ ಪ್ರಶ್ನಿಸಿ ಸಲ್ಲಿಸಲಾಗಿದ್ದಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್​ ತೀರ್ಪು ಕಾಯ್ದಿರಿಸಿದೆ.

ರಾಜ್ಯದಲ್ಲಿ ಹುಕ್ಕಾ ನಿಷೇಧ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

author img

By ETV Bharat Karnataka Team

Published : Mar 12, 2024, 5:51 PM IST

ಬೆಂಗಳೂರು: ರಾಜ್ಯದಲ್ಲಿ ಎಲ್ಲ ರೀತಿಯ ಹುಕ್ಕಾ ಉತ್ಪನ್ನಗಳ ಮಾರಾಟ, ಬಳಕೆ ಮತ್ತು ಸಂಗ್ರಹಣೆ ನಿಷೇಧಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಅಧಿಸೂಚನೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ಆದೇಶ ಕಾಯ್ದಿರಿಸಿದೆ.

ಈ ಬಗ್ಗೆ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ತೀರ್ಪು ಕಾಯ್ದಿರಿಸಿದೆ. ವಾದ ಆಲಿಸಿದ ನ್ಯಾಯಪೀಠ, ಹುಕ್ಕಾ ಬಳಕೆಯನ್ನು ಸರ್ಕಾರವು ಅತಿರೇಕವಾಗುವ ಮೊದಲು ನಿಭಾಯಿಸಿದ್ದರೆ ಉತ್ತಮವಾಗಿ ನಿಯಂತ್ರಿಸಬಹುದಿತ್ತು. 20 ವರ್ಷಗಳ ಹಿಂದೆ ಇದೆಲ್ಲಾ ಎಲ್ಲಿತ್ತು (ನಿಯಂತ್ರಣ ಅಥವಾ ನಿಷೇಧ)? ಇದು ಅತಿರೇಕವಾದ ನಂತರ ಎಚ್ಚೆತ್ತುಕೊಂಡಿದ್ದೀರಾ?. ಬಣ್ಣ ಮಿಶ್ರಣ ಕ್ಯಾನ್ಸರ್‌ಗೆ ಕಾರಣವಾಗುತ್ತದೆ ಎಂಬುದು ಇಂದಲ್ಲ 25 ವರ್ಷಗಳ ಹಿಂದೆಯೇ ಇತ್ತು. ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಅದಕ್ಕೆ ನಿಷೇಧ ವಿಧಿಸಲಾಗಿದೆ. ಗೋಬಿ ಮಂಚೂರಿಯನ್‌ನಲ್ಲಿ ಬಳಸುವ ಬಣ್ಣವನ್ನು ಬಟ್ಟೆಗಳಿಗೆ ಬಳಸುತ್ತಾರೆ ಎಂದು ಪೀಠ ತಿಳಿಸಿತು.

ವಿಚಾರಣೆ ವೇಳೆ ಸರ್ಕಾರದ ಪರ ವಾದ ಮಂಡಿಸಿದ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಹುಕ್ಕಾಬಾರ್ ಸೇವೆ ಮಾಡಲು ಯಾವುದೇ ಗೊತ್ತುಪಡಿಸಿದ ಪ್ರದೇಶವನ್ನು ನಿಗದಿ ಪಡಿಸಿಲ್ಲ. ಆದರೆ, ಧೂಮಪಾನ ಸೇವನೆ ಪ್ರದೇಶದಲ್ಲಿ ಹುಕ್ಕಾ ಸೇವಿಸಬಾರದಾದರೂ, ಬಾರ್‌ಗಳಲ್ಲಿ ಹುಕ್ಕಾ ಸೇವನೆಗೆ ಅವಕಾಶ ನೀಡಲಾಗಿದೆ ಎಂದು ಆರೋಪಿಸಿದರು.

ಅಲ್ಲದೆ, ಸಾರ್ವಜನಿಕ ಹಿತಾಸಕ್ತಿಯ ದೃಷ್ಟಿಯಿಂದ ಹುಕ್ಕಾ ನಿಷೇಧಿಸಲಾಗಿದೆ. ಹುಕ್ಕಾ ನಿಷೇಧ ಕುರಿತಾದ ಅಧಿಸೂಚನೆ ಜೊತೆಗೆ ಮಸೂದೆಯನ್ನೂ ಸದನದಲ್ಲಿ ಪಾಸು ಮಾಡಲಾಗಿದೆ. ಹುಕ್ಕಾ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಉಂಟು ಮಾಡುತ್ತದೆ. ಹಾಗೆಂದು ನಾವು ಸಿಗರೇಟು ಬಳಕೆಗೆ ಉತ್ತೇಜನ ನೀಡಿದಂತಲ್ಲ ಎಂದು ಪೀಠಕ್ಕೆ ತಿಳಿಸಿದರು.

ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಹುಕ್ಕಾಗೆ ನಿಷೇಧ ವಿಧಿಸಲು ಸರ್ಕಾರಕ್ಕೆ ಅಧಿಕಾರವಿದೆ. ಸಂವಿಧಾನದ 47ನೇ ವಿಧಿಯ ಅನ್ವಯ ಸಾರ್ವಜನಿಕ ಆರೋಗ್ಯ ಸುಧಾರಿಸಲು ರಾಜ್ಯ ಸರ್ಕಾರ ಕ್ರಮಕೈಗೊಳ್ಳುವ ಹೊಣೆಗಾರಿಕೆ ಹೊಂದಿದೆ ಎಂದು ಪೀಠಕ್ಕೆ ತಿಳಿಸಿದರು. ಅರ್ಜಿದಾರರ ಪರ ವಕೀಲರು, ಸಿಗರೇಟುಗಳು ಮತ್ತು ಇತರ ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ ಮತ್ತು ವ್ಯಾಪಾರ, ವಹಿವಾಟು, ಉತ್ಪಾದನೆ, ಪೂರೈಕೆ ಮತ್ತು ಹಂಚಿಕೆ ಕಾಯಿದೆ 2003 (ಸಿಒಟಿಪಿಎ) ಕೇಂದ್ರ ಸರ್ಕಾರದ ಕಾನೂನಾಗಿದ್ದು, ಇಲ್ಲಿ ಹುಕ್ಕಾ ನಿಷೇಧಕ್ಕೆ ರಾಜ್ಯ ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ. ಆಹಾರ ಪೂರೈಸದ ನಿರ್ದಿಷ್ಟ ಸ್ಥಳಗಳಲ್ಲಿ ಹುಕ್ಕಾ ಸೇದಲು ಅವಕಾಶವಿದೆ ಎಂದು ವಾದಿಸಿದ್ದರು.

ಅಲ್ಲದೆ, ಹುಕ್ಕಾ ನಿಷೇಧವು ಸಂವಿಧಾನದ 14ನೇ ವಿಧಿಯಡಿ ಸಮಾನತೆಯ ಹಕ್ಕಿನ ಉಲ್ಲಂಘನೆಯಾಗಿದೆ. ಇದು ಸಿಗರೇಟು ಉತ್ಪಾದಕರ ಪರವಾಗಿದೆ. ಹುಕ್ಕಾ ಅಮಲು ಪಾನೀಯ ಅಥವಾ ಮಾದಕ ವಸ್ತುವಲ್ಲ. ಹುಕ್ಕಾ ನಿಷೇಧದಿಂದ ಸಂವಿಧಾನದ 14ನೇ ವಿಧಿ ಉಲ್ಲಂಘನೆಯಾಗಿದೆ. ಒಮ್ಮೆ ಗ್ರಾಹಕರ ಹುಕ್ಕಾ ನಿಷೇಧಿಸಿದರೆ ಅವರು ಸಿಗರೇಟು ಸೇದಲಿದ್ದಾರೆ? ಹುಕ್ಕಾದಲ್ಲಿ ಕನಿಷ್ಠ ಹರ್ಬಲ್ ಸಾರ ಸೇದುತ್ತಾರೆ. ಆದರೆ, ಯಾವುದೇ ತೆರನಾದ ಹರ್ಬಲ್ ಸಿಗರೇಟು ಇಲ್ಲ (ತಂಬಾಕನ್ನೇ ಸೇದಬೇಕು) ಎಂದರು.

ಪ್ರಕರಣದ ಹಿನ್ನೆಲೆ ಏನು?: ಹುಕ್ಕಾಬಾರ್‌ಗಳು ಬೆಂಕಿಯಂತಹ ಅಪಾಯಗಳಿಗೆ ಕಾರಣವಾಗಲಿದೆ. ರಾಜ್ಯದ ಅಗ್ನಿ ನಿಯಂತ್ರಣ ಮತ್ತು ಅಗ್ನಿ ಸುರಕ್ಷತೆ ಕಾನೂನುಗಳನ್ನು ಉಲ್ಲಂಘಿಸುತ್ತದೆ. ಹೋಟೆಲ್‌ಗಳು, ಬಾರ್‌ಗಳು ಮತ್ತು ರೆಸ್ಟೋರೆಂಟ್‌ಗಳಲ್ಲಿ ಹುಕ್ಕಾ ಸೇವನೆಗೆ ಅವಕಾಶ ಕಲ್ಪಿಸಿದಲ್ಲಿ ಸಾರ್ವಜನಿಕ ಆಹಾರ ಪದಾರ್ಥಗಳನ್ನು ಅಸುರಕ್ಷಗೊಳಿಸುತ್ತದೆ ಹಾಗೂ ಸಾರ್ವಜನಿಕ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹದು ಎಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿತ್ತು.

ಅಲ್ಲದೆ, ಈ ಅಧಿಸೂಚನೆಯನ್ನು ಉಲ್ಲಂಘಿಸಿದಲ್ಲಿ ಕೋಪ್ಟಾ ಕಾಯಿದೆ, ಮಕ್ಕಳ ರಕ್ಷಣೆ ಸಂರಕ್ಷಣಾ ಕಾಯಿದೆ, ಭಾರತೀಯ ದಂಡ ಸಂಹಿತೆ ಸೇರಿದಂತೆ ವಿವಿಧ ಸೆಕ್ಷನ್‌ಗಳಲ್ಲಿ ಪ್ರಕರಣ ದಾಖಲಿಸುವುದಾಗಿ ಸರ್ಕಾರ ತಿಳಿಸಿತ್ತು.

ಇದನ್ನೂ ಓದಿ: 5,8 ಮತ್ತು 9ನೇ ತರಗತಿಗಳ ಬೋರ್ಡ್​ ಪರೀಕ್ಷೆಗೆ ಸುಪ್ರೀಂ ತಡೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.