ETV Bharat / state

ದರ್ಶನ್‌ಗೆ ಶಸ್ತ್ರಚಿಕಿತ್ಸೆ ಅಗತ್ಯ ಎಂದ ವಕೀಲರು; ಮಧ್ಯಂತರ ಜಾಮೀನು ಅರ್ಜಿ ಆದೇಶ ಇಂದು ಪ್ರಕಟ - DARSHAN INTERIM BAIL APPLICATION

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ದರ್ಶನ್‌ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ಆದೇಶವನ್ನು ಬುಧವಾರ ಪ್ರಕಟಿಸುವುದಾಗಿ ತಿಳಿಸಿದೆ.

DARSHAN INTERIM BAIL APPLICATION
ನಟ ದರ್ಶನ್‌ (ETV Bharat)
author img

By ETV Bharat Karnataka Team

Published : Oct 29, 2024, 4:24 PM IST

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್ ಅವರ ಮಧ್ಯಂತರ ಜಾಮೀನು ಅರ್ಜಿಯ ಆದೇಶವನ್ನು ಇಂದು (ಬುಧವಾರ) ಪ್ರಕಟಿಸುವುದಾಗಿ ಹೈಕೋರ್ಟ್ ತಿಳಿಸಿದೆ. ಇಂದು ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ನ್ಯಾಯಪೀಠ ಜಾಮೀನು ಅರ್ಜಿ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ದರ್ಶನ್ ಪರ ವಾದ ಮಂಡಿಸಿದ ವಕೀಲ ಸಿ.ವಿ.ನಾಗೇಶ್, ಜೈಲಿನ ಅಧಿಕಾರಿಗಳು ನೀಡಿರುವ ವರದಿಯನ್ನು ಪೀಠಕ್ಕೆ ವಿವರಿಸಿ, ದರ್ಶನ್ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಬಳ್ಳಾರಿಯಲ್ಲಿ ಅವರಿಗೆ ಚಿಕಿತ್ಸೆ ಕೊಡಿಸುವುದಕ್ಕೆ ಸಾಧ್ಯವಾಗುವುದಿಲ್ಲ. ಸರ್ಕಾರಿ ಆಸ್ಪತ್ರೆ ಅಥವಾ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಬೇಕೇ ಎಂಬ ಬಗ್ಗೆ ಅನುಮತಿ ಪಡೆದುಕೊಳ್ಳಬೇಕಾದ ಅಗತ್ಯವಿಲ್ಲ ಎಂದರು.

ತನ್ನ ವೆಚ್ಚದಲ್ಲಿ ತನಗೆ ನಂಬಿಕೆ ಹೊಂದಿರುವ ವೈದ್ಯರಿಂದ ಚಿಕಿತ್ಸೆ ಪಡೆಯುವುದಕ್ಕೆ ಮುಕ್ತ ಅವಕಾಶವಿದೆ. ಸರ್ಕಾರದ ವೆಚ್ಚದಲ್ಲಿ ಅಲ್ಲ. ಇಂತಹ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂಬ ಅಂಶವನ್ನು ಪ್ರಾಸಿಕ್ಯೂಷನ್(ತನಿಖಾಧಿಕಾರಿಗಳು) ಪ್ರಶ್ನೆ ಮಾಡುವುದಕ್ಕೆ ಅವಕಾಶವಿಲ್ಲ. ವೈದ್ಯರ ಸೂಚನೆಯಂತೆ ಚಿಕಿತ್ಸೆಗೆ ಒಳಗಾಗದಿದ್ದಲ್ಲಿ ಮುಂದೆ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಅಲ್ಲದೆ, ಪ್ರಕರಣ ಸಂಬಂಧ ತನಿಖೆ ಪೂರ್ಣಗೊಂಡಿದ್ದು ಆರೋಪಪಟ್ಟಿಯನ್ನೂ ಸಲ್ಲಿಸಲಾಗಿದೆ ಎಂದು ಪೀಠಕ್ಕೆ ತಿಳಿಸಿದರು.

ಅರ್ಜಿದಾರರು ರೆಗ್ಯೂಲರ್ ಜಾಮೀನು ಕೇಳುತ್ತಿಲ್ಲ. ರೆಗ್ಯೂಲರ್ ಜಾಮೀನು ಕೋರಿರುವ ಅರ್ಜಿ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದೆ. ಪ್ರಸ್ತುತ ಆರೋಗ್ಯದ ದೃಷ್ಟಿಯಿಂದ ಮಧ್ಯಂತರ ಜಾಮೀನು ಕೋರುತ್ತಿದ್ದೇವೆ. ಈ ರೀತಿಯ ಆರೋಗ್ಯ ಸಮಸ್ಯೆ ಎದುರಿಸುತ್ತಿರುವವರು ಕೊಲೆ ಆರೋಪಿಯಾಗಿದ್ದರೂ, ಮ್ಯಾಜಿಸ್ಟ್ರೇಟ್ ನ್ಯಾಯಾಲಯವೂ ಜಾಮೀನು ಮಂಜೂರು ಮಾಡಬಹುದಾಗಿದೆ. ಹೀಗಾಗಿ ಮಧ್ಯಂತರ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿದರು.

ಅರ್ಜಿದಾರರಿಗೆ ಈ ಹಿಂದೆಯೂ ಸಮಸ್ಯೆ ಇದ್ದು, ಇದೀಗ ಸಮಸ್ಯೆ ಉಲ್ಬಣಗೊಂಡಿದೆ. ಈ ರೀತಿಯ ಆರೋಗ್ಯ ಸಮಸ್ಯೆ ಇರುವವರು ಮುಂದೆ ಪಾಶ್ವವಾಯು ಇಲ್ಲವೇ ನರ ಸಮಸ್ಯೆಗಳಿಗೆ ಗುರಿಯಾಗಬಹುದಾಗಿದ್ದು, ಅದನ್ನು ತಪ್ಪಿಸುವುದಕ್ಕೆ ಶಸ್ತ್ರಚಿಕಿತ್ಸೆ ಅತ್ಯಗತ್ಯ ಎಂದು ತಿಳಿಸಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸರ್ಕಾರಿ ವಿಶೇಷ ಅಭಿಯೋಜಕ ಪಿ.ಪ್ರಸನ್ನಕುಮಾರ್, ಅರ್ಜಿದಾರರಿಗೆ ತಕ್ಷಣ ಶಸ್ತ್ರಚಿಕಿತ್ಸೆ ಅಗತ್ಯವಿಲ್ಲ ಎಂಬುದಾಗಿ ವೈದ್ಯರು ವರದಿಯಲ್ಲಿ ತಿಳಿಸಲಾಗಿದೆ. ಅಲ್ಲದೆ, ಅರ್ಜಿದಾರರ ಆರೋಗ್ಯ ಸಂಬಂಧ ವರದಿ ನೀಡಿರುವುದು ಸರಿಯೇ. ಆದರೆ, ಅವರ ಆರೋಗ್ಯಕ್ಕೆ ಮತ್ತೊಂದು ಪರೀಕ್ಷೆ ಸಂಬಂಧ ಅರ್ಜಿದಾರರನ್ನು ಬೆಂಗಳೂರಿಗೆ ಕರೆತಂದು, ನಗರದ ವಿಕ್ಟೋರಿಯಾ ಇಲ್ಲವೇ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಮಂಡಳಿಕೆ ಶಿಫಾರಸು ಮಾಡಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಪೀಠ, ಯಾವುದೇ ವ್ಯಕ್ತಿ ಒಮ್ಮೆ ಆರೋಗ್ಯ ಕಳೆದುಕೊಂಡರೆ ಅದನ್ನು ಜೀವನದಲ್ಲಿ ಸರಿಪಡಿಸಿಕೊಳ್ಳುವುದಕ್ಕೆ ಸಾಧ್ಯವಾಗುವುದಿಲ್ಲ. ಆರೋಗ್ಯ ಮತ್ತಷ್ಟು ಕೆಡಬೇಕು ಎಂಬುದಾಗಿ ಪ್ರಾಸಿಕ್ಯೂಷನ್ ನಿರೀಕ್ಷೆ ಮಾಡುವುದೇ ಎಂದು ಪ್ರಶ್ನಿಸಿತು.

ವಾದ ಮುಂದುವರೆಸಿದ ದರ್ಶನ್ ಪರ ವಕೀಲರು, ಅರ್ಜಿದಾರರು ಆಸ್ಪತ್ರೆಗೆ ದಾಖಲಾದ ಬಳಿಕ ಅವರ ಸಮಸ್ಯೆಗಳ ಕುರಿತು ವೈದ್ಯರು ತಿಳಿಸುವ ವಿವರ ಗೊತ್ತಾಗಲಿದೆ. ಜೊತೆಗೆ, ಷರತ್ತುಗಳನ್ನು ವಿಧಿಸಿ ಮೂರು ತಿಂಗಳವರೆಗೂ ಮಧ್ಯಂತರ ಜಾಮೀನು ಮಂಜೂರು ಮಾಡಬೇಕು. ಅರ್ಜಿದಾರರು ಈ ಹಿಂದೆ ಮೈಸೂರಿನಲ್ಲಿ ಚಿಕಿತ್ಸೆ ಪಡೆದಿದ್ದರು. ಹೀಗಾಗಿ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಮೈಸೂರಿನ ಪೊಲೀಸ್​ ಠಾಣೆಯಲ್ಲಿ ವರದಿ ನೀಡುವುದಾಗಿ ಪೀಠಕ್ಕೆ ಮನವಿ ಮಾಡಿದರು.

ಈ ವೇಳೆ ನ್ಯಾಯಪೀಠ ಸರ್ಕಾರಿ ವಿಶೇಷ ಅಭಿಯೋಜಕರನ್ನು ಉದ್ದೇಶಿಸಿ, ನೀವು ವೈದ್ಯಕೀಯ ಚಿಕಿತ್ಸೆಗಾಗಿ ಆರೋಪಿಯನ್ನು ಮೈಸೂರಿಗೆ ಸ್ಥಳಾಂತರಿಸಿ ಪರೀಕ್ಷಿಸಿಕೊಳ್ಳುವುದಕ್ಕೆ ಅವಕಾಶ ನೀಡಬಹುದು. ಪ್ರಸ್ತುತ ಬಳ್ಳಾರಿ ಜೈಲಿನ ವೈದ್ಯಕೀಯ ಅಧಿಕಾರಿಗಳು ನೀಡಿರುವ ವರದಿಗೆ ನೀವು ತೃಪ್ತರಾಗಿಲ್ಲವೇ?. ಮೈಸೂರಿನಲ್ಲಿ ಅರ್ಜಿದಾರರು ಪರೀಕ್ಷೆಗೆ ಒಳಗಾಗಿದ್ದು, ಆ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಲಿದ್ದಾರೆ. ಆದರೆ, ಬೆಂಗಳೂರಿಗೆ ಕರೆತಂದು ಸರ್ಕಾರಿ ಆಸ್ಪತ್ರೆಗೆ ಸೇರಿಸಿದರೆ ಅವರಿಗೆ ಶಸ್ತ್ರಚಿಕಿತ್ಸೆ ಮಾಡುವುದಿಲ್ಲ. ಅರ್ಜಿದಾರರ ಆರೋಗ್ಯಕ್ಕೆ ಸಂಬಂಧಿಸಿದಂತೆ ಎರಡನೇ ಅಭಿಪ್ರಾಯವನ್ನು ಬೆಂಗಳೂರಿನಲ್ಲಿ ಮಾಡಬಹುದಾಗಿದೆ. ಸರ್ಕಾರಿ ಆಸ್ಪತ್ರೆಗೆ ಹೋಗಿ ಎಂದು ಹೇಳುವುದಕ್ಕೆ ಅವಕಾಶವಿಲ್ಲ ಎಂದು ತಿಳಿಸಿತು.

ಈ ವೇಳೆ ದರ್ಶನ್ ಪರ ವಕೀಲ ಸಿ.ವಿ.ನಾಗೇಶ್, ಅರ್ಜಿದಾರರು ಈ ಹಿಂದೆ ಪರಿಶೀಲಿಸಿದ ಮೈಸೂರಿನ ವೈದ್ಯರಿಂದ ಚಿಕಿತ್ಸೆ ಪಡೆದುಕೊಳ್ಳಲಿದ್ದಾರೆ. ಆದರೆ, ಜೈಲಿನ ವೈದ್ಯಾಧಿಕಾರಿಗಳು ನೀಡಿರುವ ವರದಿಗೆ ಎರಡನೇ ಅಭಿಪ್ರಾಯ ಏಕೆ ಬೇಕು ಎಂದು ಪ್ರಶ್ನಿಸಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸರ್ಕಾರಿ ವಿಶೇಷ ಅಭಿಯೋಜಕ ಪಿ.ಪ್ರಸನ್ನ ಕುಮಾರ್, ನ್ಯಾಯಾಲಯವು ತಜ್ಞ ವೈದ್ಯರನ್ನು ಒಳಗೊಂಡ ವೈದ್ಯಕೀಯ ಮಂಡಳಿ ರಚಿಸಿ, ಅವರು ನೀಡುವ ವರದಿಯನ್ನು ಆಧರಿಸಿ ದರ್ಶನ್‌ಗೆ ವೈದ್ಯಕೀಯ ಜಾಮೀನು ಮಂಜೂರು ಮಾಡಬೇಕು. ಸುಪ್ರೀಂ ಕೋರ್ಟ್ ಸಹ ಹಲವು ಪ್ರಕರಣಗಳಲ್ಲಿ ವೈದ್ಯಕೀಯ ಮಂಡಳಿಯ ಶಿಫಾರಸು ಆಧರಿಸಿ ವೈದ್ಯಕೀಯ ಜಾಮೀನು ಮಂಜೂರು ಮಾಡಿದೆ ಎಂದು ಪೀಠಕ್ಕೆ ತಿಳಿಸಿದರು.

ದರ್ಶನ್ ಬೆಂಗಳೂರಿಗೆ ಬಂದು ಇಲ್ಲಿ ವೈದ್ಯಕೀಯ ಮಂಡಳಿಯ ತಜ್ಞರ ತಪಾಸಣೆಗೆ ಒಳಗಾಗಲಿ. ವೈದ್ಯರು ಪರಿಶೀಲಿಸಿ ಏನೆಲ್ಲ ಚಿಕಿತ್ಸೆ, ಎಷ್ಟು ದಿನ ಚಿಕಿತ್ಸೆ ಅಗತ್ಯವಿದೆ ಎಂದು ವರದಿ ನೀಡಲಿ. ಇದನ್ನು ಆಧರಿಸಿ ನ್ಯಾಯಾಲಯ ವೈದ್ಯಕೀಯ ಜಾಮೀನು ನೀಡುವ ಬಗ್ಗೆ ನಿರ್ಧಾರ ಮಾಡಲಿ ಎಂದು ಮನವಿ ಮಾಡಿದರು.

ಇದಕ್ಕೆ ಆಕ್ಷೇಪಿಸಿದ ಸಿ.ವಿ.ನಾಗೇಶ್, ಬಳ್ಳಾರಿಯ ಸರ್ಕಾರಿ ಆಸ್ಪತ್ರೆಯ ನರರೋಗ ತಜ್ಞರು ವರದಿ ನೀಡಿದ್ದಾರೆ. ಇದಕ್ಕೆ ಪ್ರಾಸಿಕ್ಯೂಷನ್ ಆಕ್ಷೇಪ ವ್ಯಕ್ತಪಡಿಸುತ್ತಿದೆಯೇ?. ಏಕೆ ಆಕ್ಷೇಪ ವ್ಯಕ್ತಪಡಿಸಲಾಗುತ್ತಿದೆ ಎಂಬುದನ್ನು ಹೇಳಬೇಕು ಎಂದು ಪ್ರಶ್ನಿಸಿದರು.

ಅಂತಿಮವಾಗಿ ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ಆದೇಶವನ್ನು ನಾಳೆಗೆ ಕಾಯ್ದಿರಿಸಿತು.

ಇದನ್ನೂ ಓದಿ: ನಟ ಸಲ್ಮಾನ್​, ಜೀಶನ್​ ಸಿದ್ದಿಕಿಗೆ ಕೊಲೆ ಬೆದರಿಕೆ ಹಾಕಿದ ಯುವಕನ ಬಂಧನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.