ETV Bharat / state

ರಾಹುಲ್ ಗಾಂಧಿ ವಿರುದ್ಧ ಯತ್ನಾಳ್ ಅವಹೇಳನಾಕಾರಿ ಹೇಳಿಕೆ ಪ್ರಕರಣ: ಆದೇಶ ಕಾಯ್ದಿರಿಸಿದ ಹೈಕೊರ್ಟ್ - MLA BASANAGOWDA PATIL YATNAL

ಸಂಸದ ರಾಹುಲ್ ಗಾಂಧಿ ಬಗ್ಗೆ ಅವಹೇಳನಾಕಾರಿ ಹೇಳಿಕೆ ಆರೋಪದ ಮೇಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಾಖಲಾದ ಎಫ್‌ಐಆರ್ ಸಂಬಂಧ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ಆದೇಶ ಕಾಯ್ದಿರಿಸಿದೆ.

high court
ರಾಹುಲ್ ಗಾಂಧಿ, ಬಸನಗೌಡ ಪಾಟೀಲ್ ಯತ್ನಾಳ್ (ETV Bharat)
author img

By ETV Bharat Karnataka Team

Published : Nov 28, 2024, 3:02 PM IST

ಬೆಂಗಳೂರು: ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಿಜೆಪಿ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ಆದೇಶ ಕಾಯ್ದಿರಿಸಿದೆ.

ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಆದೇಶ ಕಾಯ್ದಿರಿಸಿದೆ. ಅಲ್ಲದೇ, ಪ್ರಕರಣ ಸಂಬಂಧ ಈ ಹಿಂದೆ ವಿಧಿಸಿರುವ ತಡೆಯಾಜ್ಞೆ ವಿಸ್ತರಿಸಿ ಆದೇಶಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ''ರಾಹುಲ್‌ಗಾಂಧಿ ವಿದೇಶದಲ್ಲಿ ಕೆಲವು ಹೇಳಿಕೆಗಳನ್ನು ನೀಡಿದ್ದರು. ಅದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆಯಾಗಿ ಅರ್ಜಿದಾರರು ಹೇಳಿಕೆ ನೀಡಿದ್ದಾರೆ. ಆದರೆ, ಪ್ರಕರಣ ಸಂಬಂಧ ದಾಖಲಾಗಿದ್ದ ಎಫ್‌ಐಆರ್‌ನಲ್ಲಿರುವ ಯಾವುದೇ ಆರೋಪ ಸಂಬಂಧಿತ ಅಂಶಗಳು ಇಲ್ಲ. ನಮ್ಮ ಕಕ್ಷಿದಾರರ ಹೇಳಿಕೆಗೆ ಸಂಬಂಧಿಸಿದಂತೆ ಅಸಮಾಧಾನವಾಗಿದ್ದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಬಹುದಾಗಿದೆ. ಅದನ್ನು ಸಮರ್ಥನೆ ಮಾಡಿಕೊಳ್ಳಲಾಗುವುದು'' ಎಂದು ಪೀಠಕ್ಕೆ ವಿವರಿಸಿದರು.

ದೂರುದಾರ ಪರ ವಕೀಲರ ವಾದವೇನು?: ದೂರುದಾರ ಪರ ವಾದ ಮಂಡಿಸಿದ ವಕೀಲ ಸಂಕೇತ್ ಏಣಗಿ, ''ಆರೋಪಕ್ಕೆ ಸಂಬಂಧಿಸಿದಂತೆ ಎಲ್ಲ ಅಂಶಗಳನ್ನು ಎಫ್‌ಐಆರ್‌ನಲ್ಲಿ ವಿವರಿಸಿಲ್ಲ. ಆದರೆ, ಅರ್ಜಿದಾರರ ಹೇಳಿಕೆಗಳು ಮಹಿಳೆಯ ಘನತೆಗೆ ಧಕ್ಕೆ ಮಾಡುವಂತಹದ್ದಾಗಿವೆ. ರಾಹುಲ್ ಗಾಂಧಿ ಅವರ ತಾಯಿಯ ನಡತೆ ಕುರಿತಂತೆ ಮಾತನಾಡಿದ್ದಾರೆ. ಅಲ್ಲದೇ, ರಾಹುಲ್ ಗಾಂಧಿ ಕ್ರಿಶ್ಚಿಯನ್, ಮೊಘಲರು ಇಲ್ಲವೇ ಬ್ರಾಹ್ಮಣರಿಗೆ ಹುಟ್ಟಿದ್ದಾರೆಯೇ ಎಂಬುದಾಗಿ ಪ್ರಶ್ನಿಸಿದ್ದಾರೆ. ಈ ಹೇಳಿಕೆಯಿಂದ ಮಹಿಳೆಯ ಘಟನೆಗೆ ಧಕ್ಕೆಯಾಗುವಂತಾಗಿದೆ'' ಎಂದು ಪೀಠಕ್ಕೆ ತಿಳಿಸಿದರು.

''ಅರ್ಜಿದಾರರು, ಸಾಮಾನ್ಯ ವ್ಯಕ್ತಿಯಲ್ಲ. ಸುಶಿಕ್ಷತರಾಗಿದ್ದು, ಸಂಸದರು, ಶಾಸಕರು ಕೇಂದ್ರ ಸಚಿವರೂ ಆಗಿದ್ದಾರೆ. ಈ ರೀತಿಯ ಹೇಳಿಕೆಗಳನ್ನು ನೀಡಿದ್ದಾರೆ. ಆದ್ದರಿಂದ ಎಫ್‌ಐಆರ್ ರದ್ದು ಮಾಡಬಾರದು. ತನಿಖೆ ನಡೆಸಿದಲ್ಲಿ ಸತ್ಯಾಂಶಗಳು ಹೊರಬರಲಿದೆ'' ಎಂದು ಕೋರಿದರು.

ಇದಕ್ಕೆ ಆಕ್ಷೇಪಿಸಿದ ದೂರುದಾರರ ಪರ ವಕೀಲರು, ''ಈ ಹೇಳಿಕೆಯಲ್ಲಿ ಮಹಿಳೆಯ ನಡತೆಯ ಬಗ್ಗೆ ಏನನ್ನಾದರೂ ಹೇಳಿದ್ದಾರೆಯೇ? ಇದರಲ್ಲಿ ಧಾರ್ಮಿಕ ಭಾವನೆಗಳನ್ನು ಪ್ರಶ್ನಿಸುವ ಪ್ರಶ್ನೆ ಎಲ್ಲಿದೆ'' ಎಂದು ಪ್ರಶ್ನಿಸಿದರು.

''ಒಬ್ಬ ರಾಜಕಾರಣಿಯಾಗಿದ್ದು, ದೇಶದ ಹೊರಭಾಗದಲ್ಲಿ ಭಾರತದ ವಿರುದ್ಧ ಅಸಂಬಂಧ ಹೇಳಿಕೆಗಳನ್ನು ನೀಡಿದ್ದಾರೆ. ಅವರ ಹೇಳಿಕೆ ಸಂಬಂಧ ಪ್ರತಿಕ್ರಿಯೆ ನೀಡಿದ್ದಾರೆ. ಈ ಹೇಳಿಕೆಯಿಂದ ನೋವಾಗಿದ್ದಲ್ಲಿ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಲಿ'' ಎಂದು ಪೀಠಕ್ಕೆ ತಿಳಿಸಿದರು. ವಾದ ಆಲಿಸಿದ ಪೀಠ, ಆದೇಶವನ್ನು ಕಾಯ್ದಿರಿಸಿತು.

ಪ್ರಕರಣದ ಹಿನ್ನೆಲೆ: ರಾಹುಲ್ ಗಾಂಧಿ ವಿದೇಶದಲ್ಲಿ ಭಾರತದ ಕುರಿತಂತೆ ಕೆಲವು ವಿಷಯಗಳನ್ನು ಚರ್ಚೆ ನಡೆಸಿದ್ದರು. ಈ ಸಂಬಂಧ ಯತ್ನಾಳ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದರು. ಈ ಸಂದರ್ಭದಲ್ಲಿ ಕೆಲವು ಅವಹೇಳನಕಾರಿ ಹೇಳಿಕೆಗಳನ್ನು ನೀಡಲಾಗಿದೆ ಎಂದು ಆರೋಪಿಸಿದ ಕಾಂಗ್ರೆಸ್ ಕಾರ್ಯಕರ್ತ ಮನೋಹರ್​ ಎಂಬವರು ಹೈಗ್ರೌಂಡ್ಸ್ ಪೊಲೀಸ್​​ ಠಾಣೆಗೆ ದೂರು ದಾಖಲಿಸಿದ್ದರು.

ದೂರಿನ ಸಂಬಂಧ ಯತ್ನಾಳ್ ವಿರುದ್ಧ ಸೆಕ್ಷನ್ 192 (ಗಲಭೆ ನಡೆಸುವುದಕ್ಕಾಗಿ ಉದ್ದೇಶಪೂರ್ವಕವಾಗಿ ಪ್ರಚೋದನೆ), 196 (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆ ಆಧಾರದಲ್ಲಿ ವಿವಿಧ ಗುಂಪುಗಳ ನಡುವೆ ದ್ವೇಷವನ್ನುಂಟು ಮಾಡುವುದು) ಹಾಗೂ 353(2) (ಸಾರ್ವಜನಿಕ ಕಿಡಿಗೇಡಿತನಕ್ಕೆ ಅವಕಾಶವಾಗುವಂತಹ ಹೇಳಿಕೆ) ಅಡಿ ಪ್ರಕರಣ ದಾಖಲಿಸಿದ್ದರು. ಇದನ್ನು ರದ್ದು ಕೋರಿ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ಇದನ್ನೂ ಓದಿ: ಬಿಎಸ್​ವೈ ವಿರುದ್ಧ ಪೋಕ್ಸೋ ಪ್ರಕರಣದ ವಿಚಾರಣೆಯನ್ನು ಸೋಮವಾರಕ್ಕೆ ನಿಗದಿಪಡಿಸಿದ ಹೈಕೋರ್ಟ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.