ETV Bharat / state

ಮೋದಿಗೆ ಮತ ಹಾಕುವಂತೆ ಮದುವೆ ಆಹ್ವಾನ ಪತ್ರಿಕೆಯಲ್ಲಿ ಮನವಿ: ಪ್ರಕರಣಕ್ಕೆ ಹೈಕೋರ್ಟ್ ತಡೆ - HIGH COURT

ಮುದುವೆ ಆಮಂತ್ರಣ ಪತ್ರಿಕೆಯಲ್ಲಿ ನರೇಂದ್ರ ಮೋದಿ ಪರ ಮತ ಕೇಳಿದ್ದ ಆರೋಪ ಸಂಬಂಧ ದಾಖಲಾದ ಪ್ರಕರಣಕ್ಕೆ ಹೈಕೋರ್ಟ್​ನಿಂದ ತಡೆ ಬಿದ್ದಿದೆ.

high court
ಹೈಕೋರ್ಟ್ (ETV Bharat)
author img

By ETV Bharat Karnataka Team

Published : Nov 11, 2024, 10:33 PM IST

ಬೆಂಗಳೂರು: ಮುದುವೆ ಆಮಂತ್ರಣ ಪತ್ರಿಕೆಯಲ್ಲಿ ನರೇಂದ್ರ ಮೋದಿ ಪರ ಮತ ಕೇಳಿದ್ದ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ಮದುಮಗ ಶಿವಪ್ರಸಾದ್ ವಿರುದ್ಧ ಚುನಾವಣಾಧಿಕಾರಿ ಹೂಡಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ.

ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಶಿವಪ್ರಸಾದ್ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ಈ ಆದೇಶ ನೀಡಿದೆ. ಅಲ್ಲದೇ, ನೀತಿ ಸಂಹಿತೆಗಿಂತ ಮೊದಲು ಆಹ್ವಾನ ಪತ್ರಿಕೆ ಮುದ್ರಣವಾಗಿದೆ. ಹಾಗಾಗಿ ಪುತ್ತೂರು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆಗೆ ತಡೆಯಾಜ್ಞೆ ನೀಡಲಾಗುತ್ತಿದೆ ಎಂದು ನ್ಯಾಯಾಲಯ ಆದೇಶಿಸಿತು.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು, ''ಅರ್ಜಿದಾರರು 'ಮೋದಿಗೆ ಮತ ಹಾಕಿದರೆ ನನಗೆ ಗಿಫ್ಟ್ ನೀಡಿದಂತೆ' ಎಂದು ಮುದ್ರಣ ಮಾಡಿಸಿದ್ದರು. ಮಾರ್ಚ್ 1ರಂದು ಮದುವೆ ಆಹ್ವಾನ ಪತ್ರಿಕೆ ಮುದ್ರಣವಾಗಿದೆ. ಆದರೆ ಚುನಾವಣಾ ನೀತಿಸಂಹಿತೆ ಜಾರಿಯಾಗಿರುವುದರಿಂದ ಮಾರ್ಚ್​ 16ರಂದು, ಆದರೂ ಸಹ ಅರ್ಜಿದಾರರ ವಿರುದ್ಧ ಪ್ರಜಾಪ್ರತಿನಿಧಿ ಕಾಯಿದೆ ಅನ್ವಯ ಪ್ರಕರಣ ಹೂಡಿದ್ದು, ಅದು ನಿಯಮ ಬಾಹಿರವಾಗಿದೆ. ಅದನ್ನು ರದ್ದುಗೊಳಿಸಬೇಕು'' ಎಂದು ನ್ಯಾಯಾಲಯವನ್ನು ಕೋರಿದರು.

ಪ್ರಕರಣದ ಹಿನ್ನೆಲೆ: 2024ರ ಲೋಕಸಭಾ ಚುನಾವಣೆ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರದ ಫ್ಲೈಯಿಂಗ್ ಸ್ಕ್ವಾಡ್​ನ ಕೆ.ಎನ್.ಸಂದೇಶ್ ಅವರು, ಶಿವಪ್ರಸಾದ್ ವಿರುದ್ಧ ಜನಪ್ರತಿನಿಧಿಗಳ ಕಾಯಿದೆ 127ಎ ಅನ್ವಯ ಪ್ರಕರಣ ಹೂಡಿದ್ದರು. ಇದನ್ನು ರದ್ದುಪಡಿಸಲು ಕೋರಿ ಅರ್ಜಿದಾರರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಹಿಡಕಲ್ ಅಲ್ಲಮಪ್ರಭು ದೇವಾಲಯ ಪಾರಂಪರಿಕ ಸ್ಮಾರಕವೇ?: ಪರಿಶೀಲನೆಗೆ ಸಮಿತಿ ರಚಿಸಲು ಹೈಕೋರ್ಟ್ ಸೂಚನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.