ETV Bharat / state

ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಹಗರಣ: ವೀರಯ್ಯ ವಿರುದ್ಧದ ಚಾರ್ಜ್​ಶೀಟ್​ಗೆ ಹೈಕೋರ್ಟ್​ ತಡೆ

ದೇವರಾಜ ಅರಸು ಟ್ರಕ್ ಟರ್ಮಿನಲ್ ನಿಗಮ ಹಗರಣ ಪ್ರಕರಣದ ಎರಡನೇ ಆರೋಪಿಯಾಗಿರುವ ಮಾಜಿ ಎಂಎಲ್​ಸಿ ಡಿ.ಎಸ್.ವೀರಯ್ಯ ಅವರ ವಿರುದ್ಧ ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಆರೋಪಪಟ್ಟಿಗೆ ಹೈಕೋರ್ಟ್ ತಡೆ ನೀಡಿದೆ.

ಹೈಕೋರ್ಟ್​
ಹೈಕೋರ್ಟ್​ (ETV Bharat)
author img

By ETV Bharat Karnataka Team

Published : 17 hours ago

ಬೆಂಗಳೂರು: ದೇವರಾಜ ಅರಸು ಟ್ರಕ್ ಟರ್ಮಿನಲ್ ನಿಗಮ ಹಗರಣ ಪ್ರಕರಣದ ಎರಡನೇ ಆರೋಪಿಯಾಗಿರುವ ಬಿಜೆಪಿ ಮಾಜಿ ವಿಧಾನ ಪರಿಷತ್ ಸದಸ್ಯ ಡಿ.ಎಸ್.ವೀರಯ್ಯ ವಿರುದ್ಧ ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಆರೋಪಪಟ್ಟಿಗೆ ಹೈಕೋರ್ಟ್ ಇಂದು ತಡೆ ನೀಡಿತು. ತನ್ನ ವಿರುದ್ಧದ ಕ್ರಿಮಿನಲ್ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕೆಂದು ಕೋರಿ ವೀರಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ಅರ್ಜಿದಾರರ ಪರ ವಕೀಲರ ವಾದವೇನು?: ಈ ವಿಚಾರವಾಗಿ ಅಪರಿಚಿತ ವ್ಯಕ್ತಿಗಳ ವಿರುದ್ಧ ದೂರು ದಾಖಲಾಗಿದೆ. ಆರೋಪಿ ಸೇರಿದಂತೆ ಸರ್ಕಾರಿ ಸೇವಕರು, ಮತ್ತಿತರರು ಇರುವುದರಿಂದ ಭ್ರಷ್ಟಾಚಾರ ಕಾಯಿದೆ ಸೆಕ್ಷನ್ 17ಎ ಅಡಿಯಲ್ಲಿ ತಿಳಿಸಿರುವಂತೆ ಅನುಮತಿಯಿಲ್ಲದೆ ತನಿಖೆ ನಡೆಸುವುದಕ್ಕೆ ಅವಕಾಶವಿಲ್ಲ ಎಂಬುದಾಗಿ ಸುಪ್ರೀಂ ಕೋರ್ಟ್ ಹಲವು ಪ್ರಕರಣಗಳಲ್ಲಿ ತಿಳಿಸಿದೆ. ಅಲ್ಲದೆ, ಪ್ರಕರಣದಲ್ಲಿ ಆರೋಪಿಗಳು ಅಪರಿಚಿತರಾಗಿದ್ದು, 9 ತಿಂಗಳುಗಳ ಕಾಲ ತನಿಖೆ ನಡೆಸಲಾಗಿದೆ. ಇದಾದ ನಂತರ ಅರ್ಜಿದಾರರ ತನಿಖೆ ನಡೆಸುವುದಕ್ಕೆ ಸೆಕ್ಷನ್ 17ಎ ಅಡಿಯಲ್ಲಿ ಮನವಿ ಮಾಡಲಾಗಿದೆ. ಆದ್ದರಿಂದ ಈ ಪ್ರಕ್ರಿಯೆಯಲ್ಲಿ ಅರ್ಜಿದಾರರ ವಿರುದ್ಧ ವಿಚಾರಣೆಗೆ ಅನುಮತಿ ನೀಡುವುದಕ್ಕೆ ಸಾಧ್ಯವಿಲ್ಲ ಎಂಬುದಾಗಿ ಅರ್ಜಿದಾರರ ಪರ ವಕೀಲರು ಮನವಿ ಮಾಡಿದ್ದಾರೆ.

ಅರ್ಜಿದಾರರ ವಾದವನ್ನು ಪರಿಗಣಿಸುವ ಅಗತ್ಯವಿದೆ. ಹೀಗಾಗಿ ಮುಂದಿನ ವಿಚಾರಣೆಯವರೆಗೂ ಅರ್ಜಿದಾರರ ವಿರುದ್ಧ ವಿಚಾರಣಾ ನ್ಯಾಯಾಲಯದಲ್ಲಿ ನಡೆಯಲಿರುವ ಪ್ರಕ್ರಿಯೆಗೆ ತಡೆ ನೀಡಲಾಗುತ್ತಿದೆ ಎಂದು ತಿಳಿಸಿದ ಪೀಠ, ವಿಚಾರಣೆಯನ್ನು ಡಿಸೆಂಬರ್ 19ಕ್ಕೆ ಮುಂದೂಡಿತು. ರಾಜ್ಯ ಸರ್ಕಾರ, ಸಿಐಡಿ ಮತ್ತು ದೂರುದಾರರಿಗೆ ನೋಟಿಸ್ ಜಾರಿ ಮಾಡಿತು.

ವಿಚಾರಣೆಯಲ್ಲಿ ಅರ್ಜಿದಾರರ ಪರ ವಕೀಲರು, ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮತ್ತು ಎರಡನೇ ಆರೋಪಿಯಾಗಿದ್ದ ಅಧ್ಯಕ್ಷರು ತಮ್ಮ ಅಧಿಕಾರ ಬಳಸಿ ನಿಗಮದಲ್ಲಿನ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ತನಿಖಾಧಿಕಾರಿಗಳು ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ವಿವರಿಸಲಾಗಿದೆ. ಪ್ರಕರಣದ ಮೊದಲ ಆರೋಪಿ ಶಂಕರಪ್ಪ ವಿರುದ್ಧ ಆಸ್ತಿ ಅಕ್ರಮಗಳು ಮತ್ತು ಭ್ರಷ್ಟಾಚಾರ ಆರೋಪವಿದೆ. ಆದರೆ, ಅರ್ಜಿದಾರರ ವಿರುದ್ದ ಕೇವಲ ಐಪಿಸಿ ಕಾಯಿದೆಯ ಕೆಲ ಸೆಕ್ಷನ್‌ಗಳ ಅಡಿಯಲ್ಲಿ ಮಾತ್ರ ಆರೋಪವಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆಗೆ ತಡೆ ನೀಡಬೇಕು ಎಂದು ಕೋರಿದರು.

ಪ್ರಕರಣವೇನು?: ದೇವರಾಜ ಅರಸು ಟ್ರಕ್ ಟರ್ಮಿನಲ್ ನಿಗಮದಲ್ಲಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕ ಕಾಯಿದೆ ಉಲ್ಲಂಘನೆ ಮಾಡಿ ಮತ್ತು ಯಾವುದೇ ಕಾಮಗಾರಿ ನಡೆಸದೇ ಬಿಲ್‌ಗಳನ್ನು ಮಂಜೂರು ಮಾಡಿ 47.50 ಕೋಟಿ ಹಗರಣ ನಡೆಸಿರುವ ಆರೋಪ ಕೇಳಿ ಬಂದಿತ್ತು. ಹಗರಣ ನಡೆದ ಸಂದರ್ಭದಲ್ಲಿ ನಿಗಮದ ಅಧ್ಯಕ್ಷರಾಗಿದ್ದ ವೀರಯ್ಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಇದೇ ಪ್ರಕರಣದಲ್ಲಿ ಆರೋಪಿಯಾಗಿರುವ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಶಂಕರ್ ಅವರನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: ಬಿಟಿಡಿಎ ಸಭೆಗಳಲ್ಲಿ ಭಾಗಿಯಾಗದಂತೆ ನಿರ್ಬಂಧ: ಹೈಕೋರ್ಟ್ ಮೆಟ್ಟಿಲೇರಿದ ಎಂಎಲ್‌ಸಿ ಪಿ.ಹೆಚ್.ಪೂಜಾರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.