ETV Bharat / state

ಖರ್ಗೆ ಕುರಿತು ಅವಹೇಳನ ಆರೋಪ: ಸೂಲಿಬೆಲಿ ವಿರುದ್ಧದ ಎಫ್​ಐಆರ್​ಗೆ ಹೈಕೋರ್ಟ್​ ತಡೆ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅವಹೇಳನ ಮಾಡಿದ ಆರೋಪದದಡಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಗಿದ್ದ ಎಫ್​ಐಆರ್​ಗೆ ತಡೆ ನೀಡಿ ಕಲಬುರಗಿ ಹೈಕೋರ್ಟ್ ಪೀಠ ಆದೇಶಿಸಿದೆ.

ಸೂಲಿಬೆಲಿ ವಿರುದ್ಧದ ಎಫ್​ಐಆರ್​ಗೆ ಹೈಕೋರ್ಟ್​ ತಡೆ

author img

By ETV Bharat Karnataka Team

Published : Jan 30, 2024, 7:16 PM IST

ಬೆಂಗಳೂರು: ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಅವಹೇಳನಕಾರಿ ಭಾಷಣ ಮಾಡಿದ ಆರೋಪದಲ್ಲಿ ಯುವ ಬ್ರಿಗೇಡ್​ ಅಧ್ಯಕ್ಷ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಗಿದ್ದ ಎಫ್​ಐಆರ್​ಗೆ ಹೈಕೋರ್ಟ್ ತಡೆ ನೀಡಿದೆ. ರಾಜಕೀಯ ಉದ್ದೇಶದಿಂದ ದಾಖಲಿಸಿರುವ ಎಫ್ಐಆರ್ ರದ್ದುಪಡಿಸಬೇಕು ಎಂದು ಕೋರಿ ಚಕ್ರವರ್ತಿ ಸೂಲಿಬೆಲೆ ಅಲಿಯಾಸ್​ ಮಿಥುನ್ ಚಕ್ರವರ್ತಿ ದೇವಿದಾಸ್ ಸೇಟ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ರಾಜೇಂದ್ರ ಬದಾಮಿಕರ್ ಅವರಿದ್ದ ಕಲಬುರಗಿ ನ್ಯಾಯಪೀಠ ಪೀಠ ವಿಚಾರಣೆಗೆ ತಡೆ ನೀಡಿ ಆದೇಶಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿ, ರಾಜಕೀಯ ಕಾರಣಕ್ಕಾಗಿ ದುರುದ್ದೇಶದಿಂದ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ದೂರುದಾರರು ಕೆಪಿಸಿಸಿಯ ಪದಾಧಿಕಾರಿಯಾಗಿದ್ದು, ಸೂಲಿಬೆಲೆಗೆ ಮುಜುಗರ ಉಂಟು ಮಾಡಲು ಮತ್ತು ಅವರಿಗೆ ಕಿರುಕುಳ ನೀಡುವ ಉದ್ದೇಶದಿಂದ ಪ್ರಕರಣ ದಾಖಲು ಮಾಡಲಾಗಿದೆ ಎಂದು ವಿವರಿಸಿದರು. ಈ ಅಂಶ ದಾಖಲಿಸಿಕೊಂಡ ನ್ಯಾಯಪೀಠ, ಎಫ್ಐಆರ್​ಗೆ ತಡೆ ನೀಡಿ, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ, ವಿಚಾರಣೆ ಮುಂದೂಡಿತು.

ಪ್ರಕರಣದ ಹಿನ್ನೆಲೆ ಏನು ? 'ಯುವ ಬ್ರಿಗೇಡ್ ವತಿಯಿಂದ ಜನವರಿ 18ರಂದು ರಾಯಚೂರಿನ ಸಿರಿವಾರದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇಲ್ಲಿ ಭಾಗವಹಿಸಿದ್ದ ಸೂಲಿಬೆಲೆ ಅವರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಯೋಗ್ಯ ಎಂದು ನಿಂದಿಸಿದ್ದಲ್ಲದೇ ಆಧಾರ ರಹಿತವಾಗಿ ಸುಳ್ಳು ಭಾಷಣ ಮಾಡಿದ್ದಾರೆ. ಈ ಮೂಲಕ ಕೋಮು ದ್ವೇಷ ಹರಡುವ ಪ್ರಯತ್ನ ಮಾಡಿದ್ದಾರೆ. ಈ ಹಿಂದೆಯೂ ಇದೇ ರೀತಿಯ ಕೃತ್ಯದಲ್ಲಿ ಸೂಲಿಬೆಲೆ ಭಾಗವಹಿಸಿದ್ದು, ಮಹಿಳೆಯರ ಬಗ್ಗೆ ಲಘುವಾಗಿ ಮಾತನಾಡಿದ ಆರೋಪದ ಮೇಲೆ ಪ್ರಕರಣ ಎದುರಿಸುತ್ತಿದ್ದಾರೆ' ಎಂದು ಸೂಲಿಬೆಲೆ ಭಾಷಣದ ಡಿವಿಡಿಗಳನ್ನು ಒಳಗೊಂಡ ದೂರನ್ನು ಕಲಬುರಗಿ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಜಗದೇವ್ ಗುತ್ತೇದಾರ್ ಕಾಳಗಿ ಅವರು ಕಲಬರಗಿಯ ಬ್ರಹ್ಮಪುರ ಠಾಣೆಯಲ್ಲಿ ದೂರು ನೀಡಿದ್ದರು.

ಇದರ ಆಧಾರದಲ್ಲಿ ಸೂಲಿಬೆಲೆ ವಿರುದ್ಧ ಐಪಿಸಿ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಅಡಿ ಪ್ರಕರಣ ದಾಖಲಿಸಿ, ಅದನ್ನು ರಾಯಚೂರು ಜಿಲ್ಲೆಯ ಸಿರಿವಾರ ಠಾಣೆಗೆ ವರ್ಗಾಯಿಸಲಾಗಿದೆ.

ಇದನ್ನೂ ಓದಿ: ಪಾದಚಾರಿ ಮಾರ್ಗ ಒತ್ತುವರಿ ತೆರವುಗೊಳಿಸಲು ಸ್ವಯಂ ಪ್ರೇರಿತ ಅರ್ಜಿ ದಾಖಲು: ಹೈಕೋರ್ಟ್ ಎಚ್ಚರಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.