ETV Bharat / state

ಈಶ್ವರಪ್ಪ ವಿರುದ್ಧ ಪ್ರತಿಭಟನೆ: ಪ್ರಿಯಾಂಕ್ ಖರ್ಗೆ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಡೆ - High Court

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಆಗ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಪ್ರಿಯಾಂಕ್‌ ಖರ್ಗೆ ಸೇರಿದಂತೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದರು. ಈ ಪ್ರಕರಣದ ವಿಚಾರಣೆಗೆ ಇಂದು ಹೈಕೋರ್ಟ್ ತಡೆ ನೀಡಿದೆ.

ಪ್ರಿಯಾಂಕ್ ಖರ್ಗೆ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ
ಪ್ರಿಯಾಂಕ್ ಖರ್ಗೆ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ (ETV Bharat)
author img

By ETV Bharat Karnataka Team

Published : Aug 22, 2024, 3:59 PM IST

ಬೆಂಗಳೂರು: ಬೆಳಗಾವಿಯ ಗುತ್ತಿಗೆದಾರ ಸಂತೋಷ್‌ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಹಿಂದಿನ ಬಿಜೆಪಿ ಸರ್ಕಾರಲ್ಲಿ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ನಡೆಸಿದ್ದ ಪ್ರತಿಭಟನೆ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ವಿರುದ್ಧದ ವಿಚಾರಣೆಗೆ ಹೈಕೋರ್ಟ್‌ ಇಂದು ತಡೆಯಾಜ್ಞೆ ನೀಡಿತು.

ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ವಿಶೇಷ ನ್ಯಾಯಾಲಯದಲ್ಲಿನ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಪ್ರಿಯಾಂಕ್ ಖರ್ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ಹಿರಿಯ ವಕೀಲ ಸಂದೇಶ್‌ ಚೌಟ ವಾದಿಸಿ, ಇದೇ ಆರೋಪದಲ್ಲಿ ಇತರೆ ಆರೋಪಿಗಳಿಗೆ 10 ಸಾವಿರ ರೂಪಾಯಿ ದಂಡ ವಿಧಿಸಿ ಹೈಕೋರ್ಟ್‌ನ ಮತ್ತೊಂದು ಪೀಠ ಅರ್ಜಿ ವಜಾ ಮಾಡಿತ್ತು. ಇದಕ್ಕೆ ಸುಪ್ರೀಂ ಕೋರ್ಟ್‌ ತಡೆ ವಿಧಿಸಿದೆ. ಹೀಗಾಗಿ ಅರ್ಜಿದಾರರ ವಿರುದ್ಧ ವಿಚಾರಣೆಗೆ ತಡೆ ನೀಡಬೇಕೆಂದು ಕೋರಿದರು.

ಇದನ್ನು ಆಲಿಸಿದ ಪೀಠವು, ಸುಪ್ರೀಂ ಕೋರ್ಟ್‌ ಆದೇಶದ ಹಿನ್ನೆಲೆಯಲ್ಲಿ ಅರ್ಜಿದಾರರ ವಿರುದ್ಧದ ವಿಚಾರಣಾಧೀನ ನ್ಯಾಯಾಲಯದಲ್ಲಿನ ಎಲ್ಲಾ ಪ್ರಕ್ರಿಯೆಗಳಿಗೆ ಮುಂದಿನ ವಿಚಾರಣೆಯವರೆಗೆ ತಡೆ ವಿಧಿಸಲಾಗಿದೆ ಎಂದು ಮಧ್ಯಂತರ ಆದೇಶ ನೀಡಿತು.

ಪ್ರಕರಣದ ಹಿನ್ನೆಲೆ: ಸಂತೋಷ್ ಪಾಟೀಲ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಆಗ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ 2022ರ ಏಪ್ರಿಲ್ 14ರಂದು ಬೆಂಗಳೂರಿನ ರೇಸ್ ವ್ಯೂ ಹೋಟೆಲ್ ಬಳಿ ಕಾಂಗ್ರೆಸ್ ಪಕ್ಷದ ನಾಯಕರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಸಾರ್ವಜನಿಕರ ಮುಕ್ತ ಸಂಚಾರಕ್ಕೆ ಅಡ್ಡಿಪಡಿಸಿದ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಿದ ಆರೋಪದ ಮೇಲೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸರು ಅರ್ಜಿದಾರರು ಸೇರಿ 36 ಮಂದಿ ವಿರುದ್ಧ ಐಪಿಸಿ ಸೆಕ್ಷನ್ 143 (ಕಾನೂನುಬಾಹಿರವಾಗಿ ಸಮಾವೇಶಗೊಳ್ಳುವುದು), ಕರ್ನಾಟಕ ಪೊಲೀಸ್ ಕಾಯಿದೆ ಸೆಕ್ಷನ್ 103 ಅಡಿ ಪ್ರಕರಣ ದಾಖಲಿಸಿದ್ದರು.

ಇದೇ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಎಂ.ಬಿ.ಪಾಟೀಲ್, ರಾಮಲಿಂಗಾರೆಡ್ಡಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಅವರಿಗೆ ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಆದೇಶ ಮಾಡಿತ್ತು. ಅಲ್ಲದೇ, ಎಲ್ಲಾ ಅರ್ಜಿದಾರರು ತಲಾ 10 ಸಾವಿರ ರೂಪಾಯಿಗಳನ್ನು ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ಸಲ್ಲಿಸಬೇಕು ಎಂದು ಹೈಕೋರ್ಟ್ ಮತ್ತೊಂದು ಪೀಠ ಆದೇಶಿಸಿತ್ತು.

ಇದನ್ನೂ ಓದಿ: ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣ: ಲೋಕಾಯುಕ್ತ ವಿಚಾರಣೆಗೆ ಹಾಜರಾದ ಡಿ.ಕೆ.ಶಿವಕುಮಾರ್ - D K Shivakumar

ETV Bharat Logo

Copyright © 2024 Ushodaya Enterprises Pvt. Ltd., All Rights Reserved.