ETV Bharat / state

ಸುನಿಲ್ ಕುಮಾರ್ ವಿರುದ್ಧ ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ವಾರಂಟ್‌ಗೆ ಹೈಕೋರ್ಟ್ ತಡೆ - High Court - HIGH COURT

ಪ್ರಮೋದ್ ಮುತಾಲಿಕ್ ವಿರುದ್ಧ ಮಾನಹಾನಿ ಹೇಳಿಕೆ ಪ್ರಕರಣ ಸಂಬಂಧ ಬಿಜೆಪಿ ಶಾಸಕ ವಿ.ಸುನಿಲ್ ಕುಮಾರ್ ವಿರುದ್ಧ ಜಾರಿಯಾಗಿದ್ದ ವಾರಂಟ್​ಗೆ ಹೈಕೋರ್ಟ್ ತಡೆ ನೀಡಿದೆ.

sunil kumar
ಹೈಕೋರ್ಟ್, ವಿ.ಸುನಿಲ್ ಕುಮಾರ್ (ETV Bharat)
author img

By ETV Bharat Karnataka Team

Published : Aug 9, 2024, 6:55 AM IST

ಬೆಂಗಳೂರು: ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ವಿರುದ್ಧ ಮಾನಹಾನಿ ಹೇಳಿಕೆ ನೀಡಿದ ಪ್ರಕರಣ ಸಂಬಂಧ ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ವಿ.ಸುನಿಲ್ ಕುಮಾರ್ ವಿರುದ್ಧ ವಿಚಾರಣಾ ನ್ಯಾಯಾಲಯ ಜಾರಿ ಮಾಡಿರುವ ವಾರಂಟ್​ಗೆ ಹೈಕೋರ್ಟ್ ತಡೆ ನೀಡಿದೆ.

ವಿಚಾರಣಾ ನ್ಯಾಯಾಲಯ ಜಾರಿ ಮಾಡಿರುವ ವಾರಂಟ್ ಪ್ರಶ್ನಿಸಿ ವಿ.ಸುನಿಲ್ ಕುಮಾರ್ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ. ಸುನಿಲ್ ಕುಮಾರ್ ಅವರ ವಿರುದ್ಧದ ವಾರಂಟ್​ಗೆ ತಡೆಯಾಜ್ಞೆ ನೀಡಲು ಮೊದಲಿಗೆ ನ್ಯಾಯಮೂರ್ತಿಗಳು ನಿರಾಕರಿಸಿದರು. ಆದರೆ, ಪಕ್ಷವು ವಿಪ್ ಜಾರಿ ಮಾಡಿದ್ದರಿಂದ ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಹಾಜರಾಗಲು ಸಾಧ್ಯವಾಗಲಿಲ್ಲ ಎಂದು ಸುನಿಲ್ ಕುಮಾರ್ ಪರ ವಕೀಲ ವಿನೋದ್ ಕುಮಾರ್ ನ್ಯಾಯಪೀಠದ ಗಮನಕ್ಕೆ ತಂದರು. ಅದನ್ನು ಪರಿಗಣಿಸಿದ ನ್ಯಾಯಮೂರ್ತಿಗಳು, ಸುನಿಲ್ ಕುಮಾರ್ ವಿರುದ್ಧದ ವಾರಂಟ್​ಗೆ ತಡೆಯಾಜ್ಞೆ ನೀಡಿದರು.

ವಿಚಾರಣೆ ವೇಳೆ ಅರ್ಜಿದಾರರ ವಾದ ಆಲಿಸಿದ ಪೀಠ, 'ಶಾಸಕರು ಚುನಾವಣಾ ಸಂದರ್ಭದಲ್ಲಿ ಏನು ಬೇಕಾದರೂ ಮಾತನಾಡಬಹುದು ಅನ್ನಲಾಗುವುದಿಲ್ಲ' ಎಂದು ಬೇಸರ ವ್ಯಕ್ತಪಡಿಸಿತು.

ಪ್ರಕರಣದ ಹಿನ್ನೆಲೆ: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾರ್ಕಳ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಅರ್ಜಿದಾರ ಸುನಿಲ್ ಕುಮಾರ್ ಮತ್ತು ಪಕ್ಷೇತರ ಅಭ್ಯರ್ಥಿಯಾಗಿ ಪ್ರಮೋದ್ ಮುತಾಲಿಕ್ ಸ್ಪರ್ಧಿಸಿದ್ದರು. ಬಳಿಕ ಸುನಿಲ್ ಕುಮಾರ್ ಗೆಲುವು ಸಾಧಿಸಿದ್ದರು. ಚುನಾವಣಾ ಫಲಿತಾಂಶದ ನಂತರ 2023ರ ಮೇ 14ರಂದು ಕಾರ್ಕಳ ಬಂಡಿಮಠ ಬಸ್ ನಿಲ್ದಾಣದ ಬಳಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದ ಸುನಿಲ್ ಕುಮಾರ್, 'ಪ್ರಮೋದ್ ಮುತಾಲಿಕರೇ ಹಣಕ್ಕೋಸ್ಕರ ಉತ್ತರ ಕರ್ನಾಟಕದಲ್ಲಿ ಹಿಂದೂಗಳ ಹತ್ಯೆಯನ್ನು ಟೈಗರ್ ಗ್ಯಾಂಗಿನ ನೆಪದಲ್ಲಿ ಎಷ್ಟು ಬಾರಿ ಮಾಡಿಸಿದಿರಾ ನೀವು. ಆ ಹತ್ಯೆಯನ್ನು ಮಾಡಿದಂತಹವರು ಇವತ್ತಿಗೂ ಸಹ ಕಲಬುರಗಿ ಜೈಲಿನಲ್ಲಿ ಇದ್ದಾರೆ' ಎಂದು ಹೇಳಿಕೆ ನೀಡಿದ್ದರು.

ಇದರಿಂದ ಸುನಿಲ್ ಕುಮಾರ್ ತಮ್ಮ ವಿರುದ್ಧ ಮಾನಹಾನಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ್ದ ಪ್ರಮೋದ್ ಮುತಾಲಿಕ್, 2023ರ ಸೆಪ್ಟಂಬರ್​ 7ರಂದು ಬೆಂಗಳೂರಿನ ಸಿಜೆಎಂ ಕೋರ್ಟ್​ಗೆ ಖಾಸಗಿ ದೂರು ಸಲ್ಲಿಸಿದ್ದರು. ಬಳಿಕ ವಿ.ಸುನಿಲ್ ಕುಮಾರ್​​ಗೆ ವಾರಂಟ್​ ಜಾರಿಯಾಗಿತ್ತು. ಅದನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಮೊರೆ ಹೋಗಿದ್ದರು.

ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಪ್ರಕರಣ: ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದ ಸರ್ಕಾರ, ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ - Prajwal Revanna Case

ETV Bharat Logo

Copyright © 2024 Ushodaya Enterprises Pvt. Ltd., All Rights Reserved.