ETV Bharat / state

ಪ್ರಾಸಿಕ್ಯೂಷನ್ ಪ್ರಶ್ನಿಸಿದ್ದ ಸಿಎಂ ಸಿದ್ದರಾಮಯ್ಯ ಅರ್ಜಿ ತೀರ್ಪು ಇಂದು ಪ್ರಕಟ - CM Siddaramaiah Prosecution Verdict

ಮುಡಾ ಹಗರಣ ಆರೋಪ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಕ್ರಮ ಪ್ರಶ್ನಿಸಿದ್ದ ಅರ್ಜಿಯ ತೀರ್ಪು ಮಂಗಳವಾರ ಪ್ರಕಟವಾಗಲಿದೆ.

siddaramaiah
ಸಿದ್ದರಾಮಯ್ಯ, ಹೈಕೋರ್ಟ್ (ETV Bharat)
author img

By ETV Bharat Karnataka Team

Published : Sep 23, 2024, 7:55 PM IST

Updated : Sep 24, 2024, 10:02 AM IST

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಅಕ್ರಮವಾಗಿ ತಮ್ಮ ಕುಟುಂಬಸ್ಥರಿಗೆ ನಿವೇಶನ ಪಡೆದ ಆರೋಪ ಸಂಬಂಧ ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ಅಂತಿಮ ಆದೇಶ ಇಂದು ಹೊರಬೀಳಲಿದೆ. ಮಧ್ಯಾಹ್ನ 12 ಗಂಟೆಗೆ ಹೈಕೋರ್ಟ್​​ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ತೀರ್ಪು ಪ್ರಕಟಿಸಲಿದ್ದಾರೆ.

ಈಗಾಗಲೇ ಮುಖ್ಯಮಂತ್ರಿಗಳ ಪರವಾಗಿ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಹಾಗೂ ಪ್ರೊ. ರವಿವರ್ಮಕುಮಾರ್ ಸುದೀರ್ಘ ವಾದ ಮಂಡಿಸಿದ್ದಾರೆ. ರಾಜ್ಯಪಾಲರ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ದೂರುದಾರರ ಪರವಾಗಿ ಹಿರಿಯ ವಕೀಲರಾದ ಕೆ.ಜಿ.ರಾಘವನ್ ಮತ್ತಿತರ ವಕೀಲರು ವಾದ ಮಂಡಿಸಿದ್ದಾರೆ.

2024ರ ಜುಲೈ 26ರಂದು ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ರಾಜ್ಯಪಾಲರಿಗೆ ಮನವಿ ಸಲ್ಲಿಸಿ ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಸೆಕ್ಷನ್ (ಪಿಸಿ ಆ್ಯಕ್ಟ್) 17ಎ, 19 ಮತ್ತು ಭಾರತೀಯ ನ್ಯಾಯ‌ಸುರಕ್ಷಾ ಸಂಹಿತೆ (ಬಿಎನ್ಎಸ್ಎಸ್)ಸೆಕ್ಷನ್ 218ರ ಅಡಿಯಲ್ಲಿ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುವಂತೆ ಕೋರಿದ್ದರು.‌ ಅದೇ ದಿನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಿಎಂಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದರು.

ಇದನ್ನೂ ಓದಿ: ಕೋರ್ಟ್​ ಕಲಾಪದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಬಳಕೆ ಸ್ಥಗಿತಕ್ಕೆ ಹೈಕೋರ್ಟ್‌ಗೆ ವಕೀಲರ ಸಂಘ ಮನವಿ - Advocates Appeals To High Court

ಇದಕ್ಕೆ, ಮುಖ್ಯಮಂತ್ರಿಗಳು ವಿವರವಾದ ಪ್ರತಿಕ್ರಿಯೆ ನೀಡಿದ್ದರು.‌ ಜೊತೆಗೆ, ಸಂಪುಟದ ಸಲಹೆ ಹೊರತಾಗಿಯೂ ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿ ಆಗಸ್ಟ್‌ 16ರಂದು ಆದೇಶ ಹೊರಡಿಸಿದ್ದಾರೆ. ಮುಖ್ಯಮಂತ್ರಿಗಳ ಪ್ರತಿಕ್ರಿಯೆಯಲ್ಲಿ ಕಾನೂನು ಮತ್ತು ವಾಸ್ತವಿಕತೆಗಳನ್ನು ಸ್ಪಷ್ಟವಾಗಿ ವಿವರಿಸಿದ್ದರೂ, ಅವುಗಳನ್ನು ಪರಿಗಣಿಸದೆ ಅನುಮತಿ ನೀಡಲಾಗಿದೆ. ರಾಜ್ಯಪಾಲರ ಈ ನಡೆ ಸ್ಪಷ್ಟವಾಗಿ ಸ್ವಾಭಾವಿಕ ನ್ಯಾಯದ ಉಲ್ಲಂಘನೆ ಹಾಗು ವಿವೇಚನಾರಹಿತವಾಗಿದ್ದು, ಪಿಸಿ ಕಾಯ್ದೆಯ ಸೆಕ್ಷನ್ 17ಎ ಮತ್ತು 19ರ ಬಿಎನ್ಎಸ್ಎಸ್‌ ಸೆಕ್ಷನ್ 218ರ ನಿಬಂಧನೆಗಳಿಗೆ ವಿರುದ್ಧವಾಗಿದೆ ಎಂದು ಸಿದ್ದರಾಮಯ್ಯ ಅರ್ಜಿಯಲ್ಲಿ ಕೋರಿದ್ದಾರೆ.

ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೂವರಿಗೆ ಜಾಮೀನು; ದರ್ಶನ್​ಗಿಲ್ಲ ರಿಲೀಫ್ - Three accused got bail

ರಾಜ್ಯಪಾಲರು ಮುಖ್ಯಮಂತ್ರಿ ನೀಡಿದ್ದ ಪ್ರತಿಕ್ರಿಯೆಯನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸಿ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದಾರೆ. ಇದೊಂದು ವಿವೇಚನಾರಹಿತ ಮತ್ತು ಆತುರದ ಹಾಗೂ ಅಸಾಂವಿಧಾನಿಕ ನಿರ್ಧಾರವಾಗಿದೆ. ಹೀಗಾಗಿ, ಈ ಆದೇಶವನ್ನು ಅಗತ್ಯ ದಾಖಲೆಗಳನ್ನು ಪರಿಗಣಿಸದೆ ಹೊರಡಿಸಿದ್ದು, ರದ್ದು ಮಾಡಬೇಕು. ಅಲ್ಲದೆ, ಈ ಆದೇಶಕ್ಕೆ ಮಧ್ಯಂತರ ಪರಿಹಾರ ನೀಡದಿದ್ದಲ್ಲಿ ಅರ್ಜಿದಾರರ ಘನತೆಗೆ ಸರಿಪಡಿಸಲಾಗದ ಹಾನಿಯಾಗಲಿದೆ. ಜೊತೆಗೆ ಮುಖ್ಯಮಂತ್ರಿಗಳ ಕಚೇರಿಯ ಕಾರ್ಯನಿರ್ವಹಣೆಗೂ ತೊಡಕಾಗಲಿದೆ. ಹೀಗಾಗಿ, ರಾಜ್ಯಪಾಲರ ಆದೇಶವನ್ನು ಕಾರ್ಯರೂಪಕ್ಕೆ ತರುವುದಕ್ಕೆ ತಡೆ‌ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಮಧ್ಯಂತರ ಪರಿಹಾರ ಕೋರಿದ್ದಾರೆ.

ಇದನ್ನೂ ಓದಿ: ಮುನಿರತ್ನ ಜಾಮೀನು ಅರ್ಜಿ ವಿಚಾರಣೆ ಸೆ.25ಕ್ಕೆ ಮುಂದೂಡಿದ ನ್ಯಾಯಾಲಯ - MLA Munirathna Bail Plea

Last Updated : Sep 24, 2024, 10:02 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.