ETV Bharat / state

ಟರ್ಫ್ ಕ್ಲಬ್​ನಲ್ಲಿ ಕುದುರೆ ರೇಸ್​ಗೆ ನೀಡಿದ್ದ ಅನುಮತಿ ಆದೇಶಕ್ಕೆ ತಡೆ ಕೊಟ್ಟ ಹೈಕೋರ್ಟ್‌ ದ್ವಿಸದಸ್ಯ ಪೀಠ - High Court Stay for Horse Race - HIGH COURT STAY FOR HORSE RACE

ಬೆಂಗಳೂರು ಟರ್ಫ್ ಕ್ಲಬ್​ನಲ್ಲಿ ಕುದುರೆ ಪಂದ್ಯ ಆಯೋಜನೆಗೆ ಅನುಮತಿಸಿ ಏಕಸದಸ್ಯಪೀಠ ನೀಡಿದ್ದ ಮಧ್ಯಂತರ ಆದೇಶಕ್ಕೆ ಹೈಕೋರ್ಟ್​​ ವಿಭಾಗೀಯ ಪೀಠ ತಡೆ ನೀಡಿದೆ.

high court
ರೇಸ್ ಕೋರ್ಸ್ (Photo: ETV Bharat)
author img

By ETV Bharat Karnataka Team

Published : Jun 22, 2024, 12:33 PM IST

ಬೆಂಗಳೂರು: ನಗರದ ಬೆಂಗಳೂರು ಟರ್ಫ್ ಕ್ಲಬ್​ನಲ್ಲಿ (ರೇಸ್ ಕೋರ್ಸ್) ಕುದುರೆ ಪಂದ್ಯಗಳ ಆಯೋಜನೆಗೆ ಅನುಮತಿ ನೀಡಿದ್ದ ಏಕಸದಸ್ಯಪೀಠದ ಮಧ್ಯಂತರ ಆದೇಶಕ್ಕೆ ಹೈಕೋರ್ಟ್​​ ವಿಭಾಗೀಯ ಪೀಠ ತಡೆ ವಿಧಿಸಿದೆ. ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ರೇಸ್ ಕೋರ್ಸ್‌ನಲ್ಲಿ ಷರತ್ತುಗಳ ಅನ್ವಯ ಕುದುರೆ ಪಂದ್ಯಗಳನ್ನು ಆಯೋಜನೆ ಮಾಡುವುದಕ್ಕೆ ಅನುಮತಿ ನೀಡಿದ್ದ ಮಧ್ಯಂತರ ಆದೇಶ ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಯಿತು. ಸರ್ಕಾರವು ಮೇಲ್ಮನವಿಯಲ್ಲಿ ಕೋರಿರುವ ಅಂಶಗಳಲ್ಲಿ ಕುದುರೆ ಪಂದ್ಯಗಳ ಆಯೋಜಿಸದಂತೆ ಕೋರಿರುವುದಕ್ಕೆ ಬಲವಾದ ಕಾರಣಗಳನ್ನು ನೀಡಿದೆ. ಈ ನಿಟ್ಟಿನಲ್ಲಿ ಪಂದ್ಯಗಳ ಆಯೋಜನೆಗೆ ಅನುಮತಿ ನೀಡಿದ್ದ ಏಕಸದಸ್ಯ ಪೀಠದ ಆದೇಶವನ್ನು ಅಮಾನತ್ತಿಲ್ಲಿಟ್ಟಿರುವುದಾಗಿ ಪೀಠ ತಿಳಿಸಿದೆ.

ಅಲ್ಲದೇ, ಅರ್ಜಿ ವಿಚಾರಣೆ ಪೂರ್ಣಗೊಳಿಸುವವರೆಗೂ ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ ಆನ್ ಕೋರ್ಸ್ ಮತ್ತು ಆಫ್ ಕೋರ್ಸ್‌ಗಳ ಆಯೋಜನೆಗೆ ನಿರ್ಬಂಧ ವಿಧಿಸಲಾಗಿದೆ. ಅರ್ಜಿಯ ಮುಂದಿನ ವಿಚಾರಣೆಯನ್ನು ಆಗಸ್ಟ್ 12ಕ್ಕೆ ಮುಂದೂಡಲಾಗಿದೆ.

ಅರ್ಜಿಯ ಸಂಬಂಧ ಈ ಹಿಂದೆ ವಿಚಾರಣೆ ನಡೆದ ವೇಳೆ, ಸರ್ಕಾರದ ಪರ ವಾದ ಮಂಡಿಸಿದ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ''ರೇಸ್ ಕೋರ್ಸ್‌ನಲ್ಲಿ ಕುದುರೆ ಪಂದ್ಯಗಳ ನಡೆಸುವ ವೇಳೆ ಬುಕ್ಕಿಗಳು ದೊಡ್ಡಮಟ್ಟದ ಅವ್ಯವಹಾರ ನಡೆಸಿದ್ದಾರೆ. ಈ ಸಂಬಂಧ ಸಿಸಿಬಿ ನಡೆಸಿದ ದಾಳಿಯಲ್ಲಿ ಹಣ ಬೆಟ್ ಮಾಡುವವರಿಗೆ ಪೆನ್ಸಿಲ್‌ನಿಂದ ಬರೆದ ಟಿಕೆಟ್ ನೀಡುತ್ತಿದ್ದ ಕೋಟ್ಯಂತರ ರೂ.ಗಳ ಅವ್ಯವಹಾರ ಬೆಳಕಿಗೆ ಬಂದಿದೆ. ಇದರಿಂದ ಸರ್ಕಾರಕ್ಕೆ ಬರಬೇಕಾದ ತೆರಿಗೆ ವಂಚನೆ ಮಾಡಲಾಗಿದೆ. ಅಲ್ಲದೆ, ಆಟೋ ಚಾಲಕರು ಸೇರಿದಂತೆ ಬಡ ಜನತೆ ತಾವು ದಿನಪೂರ್ತಿ ದುಡಿದ ಹಣವನ್ನು ಕುದುರೆ ಪಂದ್ಯಗಳಿಗೆ ವಿನಿಯೋಗಿಸುತ್ತಿದ್ದು, ಜೀವನ ನಡೆಸುವುದು ಕಷ್ಟಕರವಾಗುತ್ತಿದೆ. ಈ ನಿಟ್ಟಿನಲ್ಲಿ ಕುದುರೆ ಪಂದ್ಯಗಳಿಗೆ ಅನುಮತಿ ನೀಡಬಾರದು'' ಎಂದು ಕೋರಿದರು.

ಬೆಂಗಳೂರು ಟರ್ಫ್ ಕ್ಲಬ್ ಲಿಮಿಟೆಡ್, ಕರ್ನಾಟಕ ಟ್ರೈನರ್ಸ್ ಅಸೋಸಿಯೇಷನ್ಸ್, ಕರ್ನಾಟಕ ರೇಸ್ ಕುದುರೆ ಮಾಲೀಕರ ಸಂಘ, ಕರ್ನಾಟಕ ಜಾಕಿಗಳ ಸಂಘದ ಪರ ವಕೀಲರು, ''ಕುದುರೆ ಪಂದ್ಯ ಒಂದು ಕ್ರೀಡೆಯಾಗಿದೆ. ಕ್ರೀಡೆಯಲ್ಲಿ ಭಾಗವಹಿಸಲು ದೇಶದ ವಿವಿಧ ಭಾಗಗಳಿಂದ ಜಾಕಿಗಳು ಈಗಾಗಲೇ ಬೆಂಗಳೂರಿಗೆ ಬಂದು ನೆಲೆಸಿದ್ದಾರೆ. ಏಕಸದಸ್ಯಪೀಠ ಪಂದ್ಯಗಳ ಆಯೋಜನೆಗೆ ಅವಕಾಶ ನೀಡಿದೆ. ಇದೀಗ ಸರ್ಕಾರ ಪಂದ್ಯಗಳ ಆಯೋಜನೆಗೆ ಅವಕಾಶ ನೀಡದಂತೆ ಕೋರಿದರೆ ಅದನ್ನೇ ನಂಬಿ ಜೀವನ ನಡೆಸುತ್ತಿರುವವರಿಗೆ ತೊಂದರೆಯಾಗಲಿದೆ'' ಎಂದು ತಿಳಿಸಿದರು.

''ಅಲ್ಲದೆ, ರೇಸ್ ಕೋರ್ಸ್‌ನಲ್ಲಿ ಬೆಟ್ಟಿಂಗ್ ಕಾನೂನುಬದ್ಧವಾಗಿದೆ. ಇದರಿಂದ ಸರ್ಕಾರಕ್ಕೆ ಕೋಟ್ಯಂತರ ರೂ. ತೆರಿಗೆ ಸಂಗ್ರಹವಾಗುತ್ತಿದೆ. ಆದರೆ, ಬೆಟ್ಟಿಂಗ್‌ನಿಂದ ಬಡ ಜನತೆಗೆ ತೊಂದರೆಯಾಗಲಿದೆ ಎನ್ನುವುದಾದರೆ ಸರ್ಕಾರ ಬೆಟ್ಟಿಂಗ್ ನಡೆಸುವುದನ್ನು ಕಾನೂನುಬಾಹಿರ ಎಂಬುದಾಗಿ ಘೋಷಣೆ ಮಾಡಲಿ'' ಎಂದು ನ್ಯಾಯಪೀಠಕ್ಕೆ ವಿವರಿಸಿದರು.

''ಏಕಸದಸ್ಯ ಪೀಠ ಪಂದ್ಯಗಳ ಆಯೋಜನೆಗೆ ಅವಕಾಶ ನೀಡುವಂತೆ ಸೂಚನೆ ನೀಡಿದೆ. ಇದರಿಂದಾಗಿ ಶನಿವಾರದಿಂದ (ಜೂನ್​ 22) ಪಂದ್ಯಗಳ ಆಯೋಜನೆಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಕೊನೆಯ ಘಳಿಗೆಯಲ್ಲಿ ಪಂದ್ಯಕ್ಕೆ ತಡೆ ನೀಡಿದರೆ ತೀವ್ರ ತೊಂದರೆಯಾಗಲಿದೆ. ಆದ್ದರಿಂದ ಪಂದ್ಯಗಳ ಆಯೋಜನೆಗೆ ಅವಕಾಶ ಮಾಡಿಕೊಡಬೇಕು'' ಎಂದು ಮನವಿ ಮಾಡಿದ್ದರು.

ಪ್ರಕರಣದ ಹಿನ್ನೆಲೆ: ಬಿಟಿಸಿ ಆವರಣದಲ್ಲಿ ಅಕ್ರಮ ಬೆಟ್ಟಿಂಗ್ ಮತ್ತಿತರ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿವೆ. ಜೊತೆಗೆ ಬಿಟಿಸಿ ಪರವಾನಗಿ ಷರತ್ತುಗಳ ಉಲ್ಲಂಘನೆ ಮಾಡಿರುವುದಲ್ಲದೆ, ಹಲವು ನಿಯಮಗಳನ್ನು ಪಾಲನೆ ಮಾಡುತ್ತಿಲ್ಲ ಎಂಬ ಕಾರಣವನ್ನು ನೀಡಿ ಸಕ್ಷಮ ಪ್ರಾಧಿಕಾರ ಬಿಟಿಸಿ ಅರ್ಜಿಯನ್ನು ತಿರಸ್ಕರಿಸಿದೆ. ಸಕ್ಷಮ ಪ್ರಾಧಿಕಾರ ಕ್ಲಬ್ ಹಾಗೂ ಬುಕ್ಕಿಗಳ ಅಕ್ರಮಗಳ ಬಗ್ಗೆ ಸಿಸಿಬಿ ತನಿಖೆ ಬಾಕಿ ಇದೆ ಎಂದೂ ಸಹ ಹೇಳಿದೆ. ಆದರೆ, ಸಕ್ಷಮ ಪ್ರಾಧಿಕಾರ ಅರ್ಜಿ ತಿರಸ್ಕಾರಕ್ಕೆ ನೀಡಿರುವ ಕಾರಣಗಳು ಸರಿಯಲ್ಲ, ಅದಕ್ಕೂ ರೇಸ್‌ಗೂ ಸಂಬಂಧವಿಲ್ಲ. ಹಾಗಾಗಿ, ಪ್ರತಿ ವರ್ಷದಂತೆ ಈ ವರ್ಷವೂ ಕುದುರೆ ರೇಸ್ ನಡೆಸಲು ಅನುಮತಿ ನೀಡುವಂತೆ ಅರ್ಜಿದಾರರು ನ್ಯಾಯಾಲಯಕ್ಕೆ ಅರ್ಜಿಯಲ್ಲಿ ಕೋರಿದ್ದರು.

ಅಲ್ಲದೆ, ಕುದುರೆ ಪಂದ್ಯಗಳ ಆಯೋಜನೆಗೆ ಅವಕಾಶ ನೀಡದಿದ್ದಲ್ಲಿ ಲಕ್ಷಾಂತರ ಮಂದಿಯ ಜೀವನೋಪಾಯಕ್ಕೆ ತೊಂದರೆ ಆಗಿದೆ. ಹೀಗಾಗಿ, ಅನುಮತಿ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.

ಇದನ್ನೂ ಓದಿ: ಬೆಂಗಳೂರು ಟರ್ಫ್ ಕ್ಲಬ್​​ನಲ್ಲಿ ಕುದುರೆ ರೇಸ್​ ಆಯೋಜನೆಗೆ ಸರ್ಕಾರ ಆಕ್ಷೇಪ: ವಿಚಾರಣೆ ಮುಂದೂಡಿದ ಹೈಕೋರ್ಟ್ - Bengaluru Turf Club

ETV Bharat Logo

Copyright © 2025 Ushodaya Enterprises Pvt. Ltd., All Rights Reserved.