ETV Bharat / state

ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ: ತನಿಖಾ ತಂಡಕ್ಕೆ ಲೋಕಾಯುಕ್ತ ನೋಟಿಸ್​ಗೆ ಹೈಕೋರ್ಟ್ ಅಸಮಾಧಾನ - LAWYER JEEVA DEATH CASE

ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದಲ್ಲಿ ಎಸ್​ಐಟಿಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯವು ಶೋಕಾಸ್‌ ನೋಟಿಸ್‌ ಜಾರಿಗೊಳಿಸಿರುವುದನ್ನು ಆಕ್ಷೇಪಿಸಿ ಸಿಬಿಐ ಮತ್ತು ರಾಜ್ಯ ಪ್ರಾಸಿಕ್ಯೂಷನ್‌ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಿಚಾರಣೆ ಹೈಕೋರ್ಟ್​ನಲ್ಲಿ ನಡೆಯಿತು.

HIGH COURT  LOKAYUKTA NOTICE TO SIT  BENGALURU  ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ
ಹೈಕೋರ್ಟ್ (ETV Bharat)
author img

By ETV Bharat Karnataka Team

Published : Jan 11, 2025, 7:15 AM IST

ಬೆಂಗಳೂರು: ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆಗೆ ರಚಿಸಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಲೋಕಾಯುಕ್ತ ವಿಶೇಷ ನ್ಯಾಯಾಲಯ ಶೋಕಾಸ್‌ ನೋಟಿಸ್‌ ಜಾರಿ ಮಾಡಿರುವ ಕ್ರಮಕ್ಕೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ವಿಶೇಷ ತನಿಖಾ ತಂಡವು ಕೆಲವು ಅಧಿಕಾರಿಗಳನ್ನು ತಮ್ಮ ನೆರವಿಗಾಗಿ ಪಡೆದಿತ್ತು. ಇದರಲ್ಲಿ ಲೋಪವಾಗಿದೆ ಎಂದು ಲೋಕಾಯುಕ್ತ ವಿಶೇಷ ನ್ಯಾಯಾಲಯವು ಎಸ್‌ಐಟಿಗೆ ಶೋಕಾಸ್‌ ನೋಟಿಸ್‌ ಜಾರಿ ಮಾಡಿರುವುದಕ್ಕೆ ಆಕ್ಷೇಪಿಸಿ ಸಿಬಿಐ ಮತ್ತು ರಾಜ್ಯ ಪ್ರಾಸಿಕ್ಯೂಷನ್‌ ಜಂಟಿಯಾಗಿ ಮಧ್ಯಂತರ ಅರ್ಜಿ ಸಲ್ಲಿಸಿದ್ದವು. ಅದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ಈ ಸೂಚನೆ ನೀಡಿದೆ.

ಅಲ್ಲದೇ, ಈ ಪ್ರಕ್ರಿಯೆ ನ್ಯಾಯಾಂಗ ನಿಂದನೆ ವ್ಯಾಪ್ತಿಗೆ ಬರಲಿದೆ. ಹೈಕೋರ್ಟ್‌ ನಿರ್ದೇಶನ ನೀಡದ ಹೊರತು ಎಸ್‌ಐಟಿಗೆ ಸಂಬಂಧಿಸಿದ ಯಾವುದೇ ವಿಚಾರದ ಕುರಿತು ಪ್ರತಿಕ್ರಿಯಿಸುವ ಸಂದರ್ಭದಲ್ಲಿ ಎಚ್ಚರಿಕೆ ವಹಿಸಬೇಕು ಎಂದು ಪೀಠ ಹೇಳಿದೆ.

ದೈನಂದಿನ ತನಿಖೆಯ ವರದಿಯನ್ನು ಎಸ್‌ಐಟಿ ನೆರವು ಪಡೆದಿರುವ ಅಧಿಕಾರಿಗಳು ಬರೆದಿದ್ದು, ಅದಕ್ಕೆ ಕೇಂದ್ರೀಯ ತನಿಖಾ ದಳದ (ಸಿಬಿಐ) ಒಬ್ಬರು ಮತ್ತು ರಾಜ್ಯದ ಇಬ್ಬರು ಐಪಿಎಸ್‌ ಅಧಿಕಾರಿಗಳು (ಪೊಲೀಸ್‌ ವರಿಷ್ಠಾಧಿಕಾರಿಗಳು) ಸಹಿ ಮಾಡಿದ್ದಾರೆ. ಈ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಎಸ್‌ಐಟಿಯು ದಿನನಿತ್ಯ ನಡೆಯುತ್ತಿರುವ ತನಿಖೆಗೆ ಕೆಲವು ಅಧಿಕಾರಿಗಳ ನೆರವನ್ನು ಪಡೆದಿದೆಯೇ ವಿನಾಃ ತನಿಖೆಯನ್ನು ಬೇರೆ ಅಧಿಕಾರಿಗಳಿಗೆ ವಹಿಸಿಲ್ಲ ಎಂದಿತು.

ಎಸ್‌ಐಟಿಯನ್ನು ಹೈಕೋರ್ಟ್‌ ರಚಿಸಿದ್ದು, ಅದರ ಮೇಲೆ ನಿಗಾ ಇಟ್ಟಿದೆ. ಅದಾಗ್ಯೂ, ಹೈಕೋರ್ಟ್‌ನ ಹಿಂದಿನ ಆದೇಶವನ್ನು ವ್ಯಾಖ್ಯಾನಿಸಿ, ಎಸ್‌ಐಟಿಗೆ ಸಕ್ಷಮ ನ್ಯಾಯಾಲಯವಾಗಿರುವ ಲೋಕಾಯುಕ್ತ ವಿಶೇಷ ನ್ಯಾಯಾಲಯವು ಹೇಗೆ ಶೋಕಾಸ್‌ ನೋಟಿಸ್‌ ನೀಡಿದೆ ಎಂಬುದು ಅರ್ಥವಾಗುತ್ತಿಲ್ಲ ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿದೆ.

ಅಲ್ಲದೇ, ಜೀವಾ ಆತ್ಮಹತ್ಯೆಗೆ ಸಂಬಂಧಿಸಿದಂತೆ ಇದುವರೆಗೆ ನಡೆಸಿರುವ ತನಿಖಾ ವರದಿಯನ್ನು ಮುಂದಿನ ವಿಚಾರಣೆಗೆ ಈ ನ್ಯಾಯಾಲಯದ ಮುಂದೆ ಹಾಜರಿಪಡಿಸಬೇಕು ಎಂದು ಹೈಕೋರ್ಟ್​ ನಿರ್ದೇಶಿಸಿದೆ.

ವಿಚಾರಣೆ ವೇಳೆ ಸಿಬಿಐ ಮತ್ತು ಸರ್ಕಾರಿ ಅಭಿಯೋಜಕರು, ''ಹೈಕೋರ್ಟ್‌ ಅಗತ್ಯಬಿದ್ದಲ್ಲಿ ಎಸ್‌ಐಟಿಯು ಬೇರೆ ಅಧಿಕಾರಿಗಳ ನೆರವು ಪಡೆಯಬಹುದು ಎಂದು ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಬೇರೆ ಅಧಿಕಾರಿಗಳ ಸಹಾಯ ಪಡೆಯಲಾಗಿದೆ. ಆದರೆ, ಲೋಕಾಯುಕ್ತ ನ್ಯಾಯಾಲಯವು ಈ ಸಂಬಂಧ ಎಸ್‌ಐಟಿಗೆ ಷೋಕಾಸ್‌ ನೋಟಿಸ್‌ ಜಾರಿ ಮಾಡಿ, ವಿವರಣೆ ಕೇಳಿದೆ. ಎಸ್‌ಐಟಿಯು ತನಿಖಾ ಜವಾಬ್ದಾರಿಯನ್ನು ಹೈಕೋರ್ಟ್‌ ನೀಡಿರುವುದಕ್ಕೆ ವಿರುದ್ಧವಾಗಿ ಬೇರೆಯವರಿಗೆ ನೀಡಬಾರದು'' ಎಂಬುದಾಗಿ ಪೀಠಕ್ಕೆ ವಿವರಿಸಿದರು.

ಪ್ರಕರಣದ ಹಿನ್ನೆಲೆ: ಭೋವಿ ಅಭಿವೃದ್ಧಿ ನಿಗಮ ಬಹುಕೋಟಿ ಹಗರಣ ಪ್ರಕರಣದಲ್ಲಿ ಸಿಐಡಿ ತನಿಖೆ ಎದುರಿಸಿದ್ದ ವಕೀಲೆ ಎಸ್‌.ಜೀವಾ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಲಾಗಿದೆ. ಬೆಂಗಳೂರು ಸಿಬಿಐನ ಪೊಲೀಸ್‌ ವರಿಷ್ಠಾಧಿಕಾರಿ ವಿನಾಯಕ್‌ ವರ್ಮಾ, ರಾಜ್ಯ ಗೃಹ ರಕ್ಷಕ ದಳದ ಪೊಲೀಸ್‌ ವರಿಷ್ಠಾಧಿಕಾರಿಯಾಗಿರುವ ಅಕ್ಷಯ್‌ ಮಚೀಂದ್ರ ಹಾಕೆ, ಆಂತರಿಕ ಭದ್ರತಾ ವಿಭಾಗದ ಪೊಲೀಸ್‌ ವರಿಷ್ಠಾಧಿಕಾರಿ ನಿಶಾ ಜೇಮ್ಸ್‌ ಅವರನ್ನು ಒಳಗೊಂಡ ತಂಡವನ್ನು ಹೈಕೋರ್ಟ್‌ ರಚಿಸಿದೆ. ತನಿಖಾ ವರದಿ ಸಲ್ಲಿಸಲು ಮೂರು ತಿಂಗಳ ಗಡುವನ್ನು ನ್ಯಾಯಾಲಯ ವಿಧಿಸಿದೆ. ಈ ನಡುವೆ ವಿಶೇಷ ತನಿಖಾ ತಂಡ ಕೆಲವು ಅಧಿಕಾರಿಗಳ ನೆರವನ್ನು ಪಡೆದುಕೊಂಡಿತ್ತು. ಇದನ್ನು ಪ್ರಶ್ನಿಸಿ ಸರ್ಕಾರ ಮತ್ತು ಸಿಬಿಐ ಮಧ್ಯಂತರ ಅರ್ಜಿ ಸಲ್ಲಿಸಿತ್ತು.

ಇದನ್ನೂ ಓದಿ: ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದೂಡಿದ ಹೈಕೋರ್ಟ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.