ETV Bharat / state

ಸರ್ಕಾರಿ ಸಂಸ್ಥೆಗಳಿಂದ ಪ್ರಮಾಣೀಕೃತ ಬಿತ್ತನೆ ಬೀಜ ಖರೀದಿ: ಸರ್ಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್

ಸರ್ಕಾರಿ ಸಂಸ್ಥೆಗಳಿಂದ ಪ್ರಾಮಾಣಿಸಿ ಲೇಬಲ್​ ಹಾಕಿದ್ದ ಬಿತ್ತನೆ ಬೀಜ ಖರೀದಿಸುವ ಸಂಬಂಧ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ.

high court
ಹೈಕೋರ್ಟ್ (ETV Bharat)
author img

By ETV Bharat Karnataka Team

Published : Nov 23, 2024, 7:59 PM IST

ಬೆಂಗಳೂರು: ಸರ್ಕಾರಿ ಸಂಸ್ಥೆಗಳಿಂದ ಮಾತ್ರ ಪ್ರಮಾಣೀಕೃತ ಹಾಗೂ ನ್ಯಾಯಯುತ ಗುರುತು (ಲೇಬಲ್​) ಇರುವ ಬಿತ್ತನೆ ಬೀಜಗಳನ್ನು ಖರೀದಿಸುವಂತೆ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ ಎತ್ತಿಹಿಡಿದಿದೆ. ಸರ್ಕಾರದ ಆದೇಶ ಪ್ರಶ್ನಿಸಿ ಮೆಸರ್ಸ್‌ ಕರ್ನಾಟಕ ರಾಜ್ಯ ಪ್ರಮಾಣೀಕೃತ ಬೀಜ ಉತ್ಪಾದಕರ ಸಂಘ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಕೆ.ವಿ.ಅರವಿಂದ್‌ ಅವರಿದ್ದ ಏಕ ಸದಸ್ಯಪೀಠ ಈ ಆದೇಶ ನೀಡಿದ್ದು, ಅರ್ಜಿ ವಜಾಗೊಳಿಸಿದೆ.

ಮಧ್ಯಪ್ರವೇಶಿಸುವ ಅಗತ್ಯವಿಲ್ಲ: ''ರೈತರಿಗೆ ಗುಣಮಟ್ಟದ ಬೀಜಗಳನ್ನು ಒದಗಿಸಬೇಕೆಂಬ ಉದ್ದೇಶದಿಂದ ಆದೇಶ ಹೊರಡಿಸಲಾಗಿದೆ. ಹಾಗಾಗಿ, ಆ ಆದೇಶದಲ್ಲಿ ಯಾವುದೇ ದೋಷಗಳು ಕಂಡು ಬರುತ್ತಿಲ್ಲ. ಹೀಗಾಗಿ, ಸರ್ಕಾರದ ಈ ಆದೇಶದಲ್ಲಿ ಮಧ್ಯಪ್ರವೇಶ ಮಾಡುವ ಅಗತ್ಯವಿಲ್ಲ'' ಎಂದು ಪೀಠ ಹೇಳಿದೆ.

''ಸರ್ಕಾರ ತನ್ನ ಆದೇಶದ ಕುರಿತು ಉದ್ದೇಶ ಮತ್ತು ಕಾರಣ ನೀಡಿದ್ದು, ಅದರಲ್ಲಿ ಗುಣಾತ್ಮಕ ಮತ್ತು ಪ್ರಮಾಣೀಕೃತ ಬೀಜಗಳು ಸಕಾಲದಲ್ಲಿ ರೈತರಿಗೆ ಪೂರೈಕೆ ಆಗಬೇಕು ಎಂದು ವಿವರಿಸಲಾಗಿದೆ. ಹಾಗಾಗಿ, ಸರ್ಕಾರದ ಆದೇಶದಲ್ಲಿ ಹಸ್ತಕ್ಷೇಪ ಮಾಡಲಾಗದು'' ಎಂದು ತಿಳಿಸಿದೆ.

ಆದೇಶ ಏಕಪಕ್ಷೀಯವೆಂದು ಹೇಳಲಾಗದು: ''ಸಾರ್ವಜನಿಕ ಖರೀದಿಯಲ್ಲಿ ಕರ್ನಾಟಕ ಪಾರದರ್ಶಕ ಕಾಯಿದೆ 1999 ಸೆಕ್ಷನ್‌ 4 (ಜಿ) ಅಡಿ ಆದೇಶವನ್ನು ಹೊರಡಿಸಲಾಗಿದೆ, ಇದು ಏಕಪಕ್ಷೀಯವೆಂದು ಹೇಳಲಾಗದು. ಅರ್ಜಿದಾರರಿಗೆ ವ್ಯಾಪಾರ ಮಾಡಲು ಹಕ್ಕಿದೆ, ಅವರ ಹಕ್ಕಿಗೆ ಯಾವುದೇ ತೊಂದರೆ ಆಗಿಲ್ಲ. ರಾಜ್ಯದಲ್ಲಿ ಒಟ್ಟು 15.73 ಲಕ್ಷ ಕ್ವಿಂಟಾಲ್‌ ಬಿತ್ತನೆ ಬೀಜ ಅಗತ್ಯವಿದೆ. ಸರ್ಕಾರಿ ಸಂಸ್ಥೆಗಳು 6.93 ಲಕ್ಷ ಕ್ವಿಂಟಾಲ್‌ ಬೀಜವನ್ನು ಪೂರೈಸುತ್ತಿವೆ. ಉಳಿದ 8.08 ಲಕ್ಷ ಕ್ವಿಂಟಾಲ್‌ ಅನ್ನು ಖಾಸಗಿ ಸಂಸ್ಥೆಗಳು ಪೂರೈಸಲು ಮುಕ್ತ ಅವಕಾಶವಿದೆ. ಅವು ಅದಕ್ಕೆ ಸಂಬಂಧಿಸಿದ ಟೆಂಡರ್‌ನಲ್ಲಿ ಭಾಗವಹಿಸಬಹುದಾಗಿದೆ'' ಎಂದು ಆದೇಶಿಸಿದೆ.

ಅದೇಶ ರದ್ಧತಿಗೆ ವಕೀಲರ ಮನವಿ: ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ''ಪ್ರಮಾಣೀಕೃತ ಬಿತ್ತನೆ ಬೀಜಗಳ ಉತ್ಪಾದನೆ, ಸಂಸ್ಕರಣೆ ಮತ್ತು ಮಾರುಕಟ್ಟೆಗೆ ಹಲವು ಹಂತಗಳಲ್ಲಿ ಭಾರಿ ಪ್ರಮಾಣದ ಹೂಡಿಕೆ ಬೇಕಾಗುತ್ತದೆ. ಹಾಗಾಗಿ, ಸರ್ಕಾರಿ ಸಂಸ್ಥೆಗಳಿಂದ ಮಾತ್ರವೇ ಬಿತ್ತನೆ ಬೀಜ ಖರೀದಿಸಬೇಕು ಎಂಬ ಅದೇಶ ಏಕಪಕ್ಷೀಯವಾಗಿದೆ. ಅರ್ಜಿದಾರರಿಗೆ ವ್ಯಾಪಾರ ಮಾಡುವ ಅವಕಾಶಗಳು ಇಲ್ಲದಂತಾಗುತ್ತದೆ. ಕೃಷಿ ಬಿತ್ತನೆಗೆ ಪ್ರಮಾಣೀಕೃತ ಹಾಗೂ ನ್ಯಾಯಯುತ ಲೇಬಲ್​ ಇರುವ ಬಿತ್ತನೆ ಬೀಜಗಳನ್ನು ಪೂರೈಕೆ ಮಾಡುವಷ್ಟು ದಕ್ಷತೆ ಸರ್ಕಾರಿ ಸಂಸ್ಥೆಗಳಿಗಿಲ್ಲ. ಇದರಿಂದ ರಾಜ್ಯದಲ್ಲಿ ಬಿತ್ತನೆ ಬೀಜಗಳಿಗೆ ಭಾರಿ ಕೊರತೆ ಉಂಟಾಗಿದೆ. ಇದರಿಂದ ಕೃಷಿ ಚಟುವಟಿಕೆ ಮೇಲೆ ಭಾರಿ ಪರಿಣಾಮ ಉಂಟಾಗಲಿದೆ. ಹಾಗಾಗಿ, ಸರ್ಕಾರದ ಅದೇಶ ರದ್ದುಗೊಳಿಸಬೇಕು'' ಎಂದು ಪೀಠಕ್ಕೆ ಮನವಿ ಮಾಡಿದರು.

ಸರ್ಕಾರಿ ವಕೀಲರಿಂದ ಆಕ್ಷೇಪ: ಇದಕ್ಕೆ ಆಕ್ಷೇಪಿಸಿದ್ದ ಸರ್ಕಾರಿ ವಕೀಲರು, ''ಸಕಾಲದಲ್ಲಿ ರೈತರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಬಿತ್ತನೆ ಬೀಜವನ್ನು ಪೂರೈಕೆ ಮಾಡಬೇಕು ಎನ್ನುವ ಉದ್ದೇಶದಿಂದ ಈ ಆದೇಶ ಹೊರಡಿಸಿದೆ. ಮುಂಗಾರು ಹಂಗಾಮಿನಲ್ಲಿ ಕೃಷಿ ಇಲಾಖೆ ಸಾಕಷ್ಟು ಬಿತ್ತನೆ ಬೀಜವನ್ನು ದಾಸ್ತಾನು ಮಾಡಿದೆ. ಅದನ್ನು ಸರ್ಕಾರಿ ಸಂಸ್ಥೆಗಳ ಮೂಲಕವೇ ರೈತರಿಗೆ ತಲುಪುವಂತೆ ಮಾಡುತ್ತಿದೆ. ಇದರಲ್ಲಿ ರೈತರ ಹಿತಾಸಕ್ತಿಯಷ್ಟೇ ಮುಖ್ಯವಾಗಿದ್ದು, ಸರ್ಕಾರಕ್ಕೆ ಯಾವುದೇ ವಾಣಿಜ್ಯ ಹಿತಾಸಕ್ತಿ ಇರುವುದಿಲ್ಲ'' ಎಂದು ಹೇಳಿದ್ದರು.

''ರಾಜ್ಯ ಸರ್ಕಾರ ಮೊದಲಿಗೆ 2017ರಲ್ಲಿ ಮೂರು ವರ್ಷದ ಅವಧಿಗೆ ಆದೇಶವನ್ನು ಹೊರಡಿಸಿತ್ತು. ನಂತರ ಕಾಲ ಕಾಲಕ್ಕೆ ಹೊಸ ಆದೇಶ ಹೊರಡಿಸುತ್ತಾ ಬಂದಿದೆ. ಬಿತ್ತನೆ ಬೀಜದ ಬೆಲೆ ನಿಯಂತ್ರಣ ಉದ್ದೇಶದಿಂದ ಈ ಆದೇಶ ಹೊರಡಿಸಲಾಗಿದೆ. ಸರ್ಕಾರದ ಬಳಿ ಬಿತ್ತನೆ ಬೀಜ ಸಾಕಷ್ಟು ದಾಸ್ತಾನು ಇದೆ. ಯಾವುದೇ ಕೊರತೆ ಇಲ್ಲ'' ಎಂದು ನ್ಯಾಯಾಲಯಕ್ಕೆ ವಿವರಿಸಿದ್ದರು.

ವಾದ ಆಲಿಸಿದ ನ್ಯಾಯಪೀಠ, ಸರ್ಕಾರದ ಆದೇಶವನ್ನು ಎತ್ತಿಹಿಡಿದಿದ್ದು, ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.

ಇದನ್ನೂ ಓದಿ: ನಿವೇಶನದ ಮೇಲಿನ ಸಾಲ ಮರುಪಾವತಿಸದಿದ್ದರೆ ಸೈಟ್​ ಹರಾಜಿಗೆ ಬ್ಯಾಂಕ್​ಗೆ ನಿರ್ಬಂಧವಿಲ್ಲ: ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.